Site icon Vistara News

Republic Day 2023: ನರೇಗಾದಡಿ ಭೀಮ್‌ಕೋಲ್ ಕೆರೆ ಅಭಿವೃದ್ಧಿ, ಕೆರೆ ದಂಡೆಯಲ್ಲೇ ನಡೆಯಿತು ಗಣರಾಜ್ಯೋತ್ಸವ

Hanakona Village Bhim Kol Lake republic day

ಕಾರವಾರ: ತಾಲೂಕಿನ ಹಣಕೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಟೆಗಾಳಿ ಗ್ರಾಮದಲ್ಲಿ ಭೀಮ್‌ಕೋಲ್ ಕೆರೆ ದಂಡೆಯ ಮೇಲೆ ಗಣರಾಜ್ಯೋತ್ಸವ ಆಚರಿಸಲಾಯಿತು (Republic Day 2023). ಗ್ರಾಮದ ಹಿರಿಯ ನಾಗರಿಕರಾದ ಶಾಂತಾರಾಮ್ ಥಾಮಸೆ ಅವರು ಧ್ವಜಾರೋಹಣವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಾಲಪ್ಪನವರ ಆನಂದ ಕುಮಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಹಾಗೂ ಗಣತಂತ್ರ ವ್ಯವಸ್ಥೆ ಜಾರಿಯಾಗಿ 74 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಅಲ್ಲದೇ ಕೇಂದ್ರ ಸರಕಾರ ಅಮೃತ ಸರೋವರ ಅಭಿಯಾನ ಹಮ್ಮಿಕೊಂಡಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ಭೀಮ್‌ಕೋಲ್ ಕೆರೆ ಅಭಿವೃದ್ಧಿಪಡಿಸಲಾಗಿದೆ. ಈ ಅಭಿವೃದ್ಧಿ ಕಾಮಗಾರಿಯಲ್ಲಿ ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ನರೇಗಾ ಸಿಬ್ಬಂದಿ ಸಾಕಷ್ಟು ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಇದನ್ನೂ ಓದಿ | Stars Desi Fashion : ಖಾದಿ-ಕಾಟನ್‌-ತ್ರಿವರ್ಣ ಶೇಡ್‌ನ ದೇಸಿ ಉಡುಗೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮಿಸಿದ ಸೆಲೆಬ್ರಿಟಿಗಳು

ನರೇಗಾದಡಿ ಅಭಿವೃದ್ಧಿಪಡಿಸಲಾದ ಭೀಮ್‌ಕೋಲ್ ಕೆರೆಯು ಈಗ ಪ್ರವಾಸಿಗರ ಆಕರ್ಷಣೆಯ ತಾಣವಾಗಿ ಮಾರ್ಪಟ್ಟಿದೆ. ಪ್ರಕೃತಿಯ ಮಡಿಲಿನಲ್ಲಿರುವ ಈ ಅತ್ಯಂತ ಸುಂದರ ಪ್ರೇಕ್ಷಣೀಯ ಸ್ಥಳಕ್ಕೆ ಜಿಲ್ಲೆಯಲ್ಲದೇ ಬೇರೆ ಬೇರೆ ಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ. ಜೊತೆಗೆ ಭೀಮ್‌ಕೋಲ್ ಕೆರೆಯನ್ನು ಪರಿಸರ ಸ್ನೇಹಿ ಪ್ರವಾಸಿ ತಾಣವನ್ನಾಗಿಸಲು ನರೇಗಾ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ ಉದ್ಯಾನವನ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ವೀಕ್ಷಣಾ ಗೋಪುರ, ಬೋಟಿಂಗ್ ವ್ಯವಸ್ಥೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವಚ್ಛತೆ ಹಾಗೂ ಭದ್ರತೆಯ ಜೊತೆಗೆ ಪ್ರಾಕೃತಿಕ ಸೌಂದರ್ಯ ಹಾಳಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದರು.

ಇದನ್ನೂ ಓದಿ | Republic Day 2023: ಯಲಹಂಕದ ಕೆವಿಆರ್‌ಡಬ್ಲ್ಯುಎಫ್ ಶಾಲೆಯಲ್ಲಿ ವಿಜೃಂಭಣೆಯ ಗಣರಾಜ್ಯ ದಿನಾಚರಣೆ

ಇದೇ ಸಂದರ್ಭದಲ್ಲಿ ಅಮೃತ ಸರೋವರ, ಪರಿಸರ ಸಂರಕ್ಷಣೆ ಕುರಿತು ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಜೊತೆಗೆ ಧ್ವಜಾರೋಹಣದಲ್ಲಿ ಪಾಲ್ಗೊಂಡ ಮಕ್ಕಳಿಂದ ನಾಡು, ನುಡಿ, ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ನಂತರ ಶಾಲಾ ಮಕ್ಕಳು, ಜನಪ್ರತಿನಿಧಿಗಳು, ಗ್ರಾಪಂ ಸಿಬ್ಬಂದಿ ಮತ್ತು ಗ್ರಾಮಸ್ಥರಿಂದ ಕೆರೆಯ ಸುತ್ತಮುತ್ತಲಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.

ಈ ವೇಳೆ ಹಣಕೋಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜನಾ ಪವಾರ, ಉಪಾಧ್ಯಕ್ಷರಾದ ಶ್ರದ್ಧಾ ನಾಯ್ಕ್, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ್ ನಾಯ್ಕ್, ಗ್ರಾಮ ಪಂಚಾಯಿತಿ ಸದಸ್ಯರು , ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಹೇಶ ಗಾವಡೆ, ತಾಲೂಕು ಐಇಸಿ ಸಂಯೋಜಕರಾದ ಫಕ್ಕೀರಪ್ಪ ತುಮ್ಮಣ್ಣನವರ, ಟಿಸಿ ಸೂರಜ್ ಗುನಗಿ ಸೇರಿದಂತೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿಯ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ | Ravindra Jadeja | ಫೆಬ್ರವರಿ 1ರಂದು ರವೀಂದ್ರ ಜಡೇಜಾ ಫಿಟ್ನೆಸ್ ರಿಪೋರ್ಟ್​ ಬಿಡುಗಡೆ

Exit mobile version