Republic day 2023 : ಚುನಾವಣಾ ವರ್ಷದಲ್ಲಿ ಸರ್ಕಾರ, ರಾಜ್ಯದ ಸಾಧನೆ ತೆರೆದಿಟ್ಟ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ - Vistara News

ಕರ್ನಾಟಕ

Republic day 2023 : ಚುನಾವಣಾ ವರ್ಷದಲ್ಲಿ ಸರ್ಕಾರ, ರಾಜ್ಯದ ಸಾಧನೆ ತೆರೆದಿಟ್ಟ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ರಾಜ್ಯದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಉತ್ತೇಜನ ನೀಡಲಾಗುತ್ತಿದೆ. ರಾಜ್ಯದಲ್ಲಿ ಯುವ ಅಭಿವೃದ್ಧಿ ಮತ್ತು ಅಭಿವೃದ್ಧಿಗಾಗಿ ಯುವ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲರು ಹೇಳಿದರು.

VISTARANEWS.COM


on

republic day governor
ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ, ಏಳು ಸ್ವಾಯತ್ತ ವಿವಿಗಳನ್ನು ಸ್ಥಾಪಿಸಲಾಗಿದೆ. ಏಳು ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಸ್ವಚ್ಛತಾ ಆಂದೋಲನ, ಜನರಿಗೆ ಒದಗಿಸುವ ಕಂದಾಯ ಸೇವೆಗಳು, ಉದ್ಯೋಗ ಖಾತ್ರಿ ಮತ್ತಿತರ ಯೋಜನೆಗಳಲ್ಲಿ ರಾಜ್ಯ ದೊಡ್ಡ ಮಟ್ಟದ ಸಾಧನೆ ಮಾಡಿದೆ. ಹೀಗೆ ರಾಜ್ಯ ಸರ್ಕಾರ ಮತ್ತು ರಾಜ್ಯದ ಒಟ್ಟಾರೆ ಸಾಧನೆಗಳ ಗಾಥೆಯನ್ನು ತೆರೆದಿಟ್ಟರು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌. ಅವರು ಬೆಂಗಳೂರಿನ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ (Republic day 2023) ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದರು.

ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ ಪ್ರಮುಖ ವಿಷಯಗಳು

ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ರಾಜ್ಯದ ಸರ್ವಾಂಗೀಣ ನಿರಂತರ ಅಭಿವೃದ್ಧಿ ಉದ್ದೇಶದೊಂದಿಗೆ ಮೂಲಭೂತ ಸೇವೆಗಳನ್ನು ಒದಗಿಸಲು ವಿಭಿನ್ನ, ನವೀನ ಮತ್ತು ಸರ್ವರನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಾವು ಅಗ್ರಗಣ್ಯ ಸ್ಥಾನದಲ್ಲಿದ್ದೇವೆ.

14 ಅಮೃತ ಮಹೋತ್ಸವ ಕಾರ್ಯಕ್ರಮ

“ನವಭಾರತಕ್ಕಾಗಿ ನವ ಕರ್ನಾಟಕ” ಎಂಬ ಧಯದೊಂದಿಗೆ “ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಅಮೃತ್ ಶಾಲೆಗಳ ಯೋಜನೆ, ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ, ಅಮೃತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ, ಅಮೃತ ಸ್ವ-ಸಹಾಯ ಗುಂಪುಗಳ ಯೋಜನೆ, ಅಮೃತ ನವೋದ್ಯಮ ಯೋಜನೆ, ಅಮೃತ ಕ್ರೀಡಾ ದತ್ತು ಯೋಜನೆ ಇತ್ಯಾದಿಗಳನ್ನು ಒಳಗೊಂಡಂತೆ 14 ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ವಿವಿಧ ಹಂತಗಳಲ್ಲಿ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

2020-21ರ ಎಸ್‌ಡಿಜಿ ಸೂಚ್ಯಂಕ ವರದಿಯ ಪ್ರಕಾರ ಕರ್ನಾಟಕ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯಾದ್ಯಂತ ಇರುವ ಸಣ್ಣ, ಅತಿ ಸಣ್ಣ, ಮಧ್ಯಮ ದೊಡ್ಡ ಹಿಡುವಳಿದಾರರನ್ನು ಗುರುತಿಸಲು ೨೦೨೨ರ ಅಕ್ಟೋಬರ್‌ ೧ರಿಂದ 11 ನೇ ಕೃಷಿ ಗಣತಿಯ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂ. 6478.76 ಕೋಟಿ ವೆಚ್ಚ ಮಾಡಲಾಗಿದ್ದು, 2022ನೇ ವರ್ಷದ ಜನವರಿ ತಿಂಗಳಿನಿಂದ ಡಿಸೆಂಬರ್ ಅಂತ್ಯದವರೆಗೆ ಒಟ್ಟು 13.47 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿ ಮಾಡಿ 29.03 ಲಕ್ಷ ಕುಟುಂಬಗಳ 52.71 ಲಕ್ಷ ಜನರಿಗೆ ಉದ್ಯೋಗ ಒದಗಿಸಲಾಗಿದೆ. ಒಟ್ಟು ರೂ.4110 ಕೋಟಿಗಳ ಕೂಲಿ ಮತ್ತವನ್ನು, ಕೂಲಿಕಾರರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ಡಿಸೆಂಬರ್ 2022ರ ಅಂತ್ಯದವರೆಗೆ ರೂ.‌ 2314.34 ಕೋಟಿ ವೆಚ್ಚದಲ್ಲಿ 13.35 ಲಕ್ಷ ಮನೆಗಳಿಗೆ ಸಕ್ರಿಯ ನಲ್ಲಿ ಸಂಪರ್ಕಗಳನ್ನು ಒದಗಿಸಲಾಗಿದೆ.

ಸ್ವಚ್ಛತಾ ಆಂದೋಲನದಲ್ಲಿ ಕರ್ನಾಟಕ ನಂ.೧

ಕೇಂದ್ರ ಸರ್ಕಾರದ ಜಲ ಶಕ್ತಿ ಮಂತ್ರಾಲಯ ಆಯೋಜಿಸಿದ Sujalam 2.0 ಮತ್ತು Swachhata Hi Seva- 2022 ಆಂದೋಲನಗಳ ಅಡಿಯಲ್ಲಿ ಕರ್ನಾಟಕ ರಾಜ್ಯವು ಮೊದಲ ಪ್ರಶಸ್ತಿ ಪಡೆದಿದ್ದು, ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಕರ್ನಾಟಕವು ರಾಷ್ಟ್ರದಲ್ಲಿ ಮಹತ್ವಾಕಾಂಕ್ಷಿ ಗ್ರಾಮಗಳ ಘೋಷಣೆಯಲ್ಲಿ 2ನೇ ಸ್ಥಾನವನ್ನು ಗಳಿಸಿದೆ.

2022-23ನೇ ಸಾಲಿಗೆ ಒಟ್ಟು 20.19 ಲಕ್ಷ ರೈತರಿಗೆ ಕೃಷಿ ಸಾಲ ಯೋಜನೆಯಡಿಯಲ್ಲಿ ರೂ.15,066 ಕೋಟಿಗಳನ್ನು ಬೆಳೆ ಸಾಲವನ್ನು ಡಿಸೆಂಬರ್ 2022ರ ಅಂತ್ಯದವರೆಗೆ ನೀಡಲಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ರೂ. 5 ಲಕ್ಷಗಳ ವರೆಗಿನ ಸಾಲವನ್ನು. ಶೂನ್ಯ ಬಡ್ಡಿದರದಲ್ಲಿ ವಿತರಿಸಲಾಗಿದೆ. ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಯೋಜನೆಯಡಿಯಲ್ಲಿ 17-01-2023ರ ಅಂತ್ಯಕ್ಕೆ 32.32 ಲಕ್ಷ ಸದಸ್ಯರನ್ನು ನೋಂದಾಯಿಸಲಾಗಿದೆ.

ಉತ್ತಮ ತೋಟಗಾರಿಕಾ ರಾಜ್ಯ

Agriculture Today magazine ತನ್ನ 13ನೇ ಕೃಷಿ ನಾಯಕತ್ವ, ಸಮಾವೇಶ ಮತ್ತು ಪುಶಸ್ತಿ ಕಾರ್ಯಕ್ರಮ- 2022 ರಲ್ಲಿ ನೋಟಗಾರಿಕೆ ಅಭಿವೃದ್ಧಿ ಮತ್ತು ಉತ್ಪನ್ನಗಳ ಪ್ರೋತ್ಸಾಹಕ್ಕಾಗಿ ಕರ್ನಾಟಕ ರಾಜ್ಯವನ್ನು “ಉತ್ತಮ ತೋಟಗಾರಿಕಾ ರಾಜ್ಯ” ಪ್ರಶಸ್ತಿ ನೀಡಿ ಗೌರವಿಸಿದೆ. ತೋಟಗಾರಿಕಾ ಇಲಾಖೆಯು 4,663 ಹೆಕ್ಟೇರ್ ಪ್ರದೇಶವನ್ನು ಆಧುನಿಕ ಕೃಷಿ ಪದ್ಧತಿಗೆ ಒಳಪಡಿಸಿದೆ. 26.21 ಲಕ್ಷ ಹೆಕ್ಟೇರ್ ಗಳನ್ನು ತೋಟಗಾರಿಕಾ ನೀರಾವರಿಗೆ ಒಳಪಡಿಸಿದ್ದು, ಅದರಲ್ಲಿ 953 ಹೆಕ್ಟೇರ್ ಪ್ರದೇಶವು Green houses | Polyhouses ಗೆ ಒಳಪಡಿಸಿದೆ. ರೈತ ಸಮುದಾಯಕ್ಕೆ 60 ಲಕ್ಷ ಉತ್ಕೃಷ್ಟ ಮೊಳಕೆ ಸಸಿಗಳನ್ನು, 400 ಟನ್ ಜೈವಿಕ ಗೊಬ್ಬರ ಮತ್ತು 23,000 ಲೀ, Arka Microbial Consortium ಅನ್ನು ಒದಗಿಸಲಾಗಿದೆ.

1,57,244 ಮನೆಗಳ ನಿರ್ಮಾಣ

ರಾಜ್ಯ ಸರ್ಕಾರವು ವಿವಿಧ ವಸತಿ ಯೋಜನೆಗಳಡಿಯಲ್ಲಿ 2098.85 ಕೋಟಿ ರೂಗಳ ವೆಚ್ಚದಲ್ಲಿ 1,57,244 ಮನೆಗಳನ್ನು ಪೂರ್ಣಗೊಳಿಸಿದೆ ಮತ್ತು ಒಂದು ಲಕ್ಷ ಬಹುಮಹಡಿ ಯೋಜನೆಯಡಿಯಲ್ಲಿ ಒಟ್ಟು 59,476 ಬಹು ಮಹಡಿ ಮನೆಗಳ ನಿರ್ಮಾಣವನ್ನು ಕೈಗೊಳ್ಳಲಾಗುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ – ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ರೂ.2804.01 ಕೋಟಿಗಳ ವೆಚ್ಚದಲ್ಲಿ 44,452 ಮನೆಗಳನ್ನು ಪೂರ್ಣಗೊಳಿಸಿದೆ. ನನ್ನ ಸರ್ಕಾರವು ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ 3.36 ಲಕ್ಷ ಕುಟುಂಬಗಳಿಗೆ ಭೂ ಮಾಲೀಕತ್ವದ ಹಕ್ಕುಪತ್ರ ನೀಡುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ಇಲ್ಲಿಯವರೆಗೆ ಈ ಕೊಳೆಗೇರಿ ಪ್ರದೇಶಗಳಲ್ಲಿ ಸಮೀಕ್ಷೆ ಕೈಗೊಂಡು ಇದುವರೆಗೂ 1,14,604 ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲೂ ಮಹಾಕ್ರಾಂತಿ

ಸಮಾಜದ ದುರ್ಬಲ ವರ್ಗದ ಮಕ್ಕಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಕಳೆದ ವರ್ಷ ರೈತ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದುವರೆಗೆ ಒಟ್ಟು ರೂ.483.62 ಕೋಟಿ ರೂ.ಗಳ ವಿದ್ಯಾರ್ಥಿ ವೇತನವನ್ನು ರೈತರ ಮಕ್ಕಳಿಗೆ ವಿತರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ಒಳಗೊಂಡಿರುವ ಮೀನುಗಾರರು, ನೇಕಾರರು, ಕೃಷಿ ಕಾರ್ಮಿಕರು, ಟ್ಯಾಕ್ಸಿ ಚಾಲಕರು ಮುಂತಾದ ವಿವಿಧ ವರ್ಗಗಳಿಗೆ ಯೋಜನೆಯನ್ನು ವಿಸ್ತರಿಸಲಾಗಿದೆ.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 8101 ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ ಮತ್ತು 978 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕಾಗಿ ಅನುದಾನವನ್ನು ನೀಡಲಾಗಿದೆ. ಸರ್ಕಾರವು 4244 ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅನುಸೂಚಿತ ಜಾತಿ, ಪಂಗಡಗಳು ಮತ್ತು ಅಲ್ಪಸಂಖ್ಯಾತ ವರ್ಗದ ಉದ್ಯೋಗಸ್ಥ ಮಹಿಳೆಯರಿಗಾಗಿ 6 ನಗರಗಳಲ್ಲಿ 24 ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ.

ತಾಯಂದಿರ ಮರಣ ಪ್ರಮಾಣ ಇಳಿಕೆ

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು 83ರಿಂದ 69ಕ್ಕೆ ಇಳಿದಿದೆ. ನಗರ ಪ್ರದೇಶಗಳಲ್ಲಿ 438 ‘ನಮ್ಮ ಕ್ಲಿನಿಕ್’ಗಳನ್ನು 128 ಮಹಿಳಾ ಸ್ವಾಸ್ಥ್ಯ ಚಿಕಿತ್ಸಾಲಯಗಳು ಮತ್ತು ಪಾಲಿಕ್ಲಿನಿಕ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಒಟ್ಟು ರೂ.1000.00 ಕೋಟಿ ವೆಚ್ಚದಲ್ಲಿ 100 ಹೈಲೋಡ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮುಂದಿನ ಎರಡು ವರ್ಷಗಳಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ಆಯುಷ್ಮಾನ್ ಭಾರತ್‌ ಪ್ರಧಾನ ಮಂತ್ರಿ ಜನಾರೋಗ್ಯ ಆರೋಗ್ಯ – ಕರ್ನಾಟಕ ಕಾರ್ಡ್‌ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೋಂದಾಯಿಸಲಾಗಿದೆ, ಇದು ಬಿಪಿಎಲ್‌ ಕುಟುಂಬಗಳಿಗೆ ರೂ.5.00 ಲಕ್ಷಗಳವರೆಗಿನ ಉಚಿತ ವೈದ್ಯಕೀಯ ರಕ್ಷಣೆ ನೀಡುತ್ತದೆ.

ಮನೆ ಬಾಗಿಲಿಗೆ ಮಾಸಾಶನ

ಸರ್ಕಾರವು ನಿರಾಶ್ರಿತ ವರ್ಗದ ವ್ಯಕ್ತಿಗಳಿಗೆ ಆರ್ಥಿಕ ಭದ್ರತೆ ನೀಡಲು ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದರಿಂದ ಒಟ್ಟು 75.76 ಲಕ್ಷ ಫಲಾನುಭವಿಗಳು ಮಾಸಿಕ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. “ಮನೆ ಬಾಗಿಲಿಗೆ ಮಾಸಾಶನ” ಅಭಿಯಾನದಡಿ 65351 ಫಲಾನುಭವಿಗಳಿಗೆ ಅರ್ಹತೆಯ ಆಧಾರದ ಮೇಲೆ ಪಿಂಚಣಿ ನೀಡಲಾಗಿದೆ.

ನೀತಿ ಆಯೋಗದ India Innovation Index ಕರ್ನಾಟಕ ರಾಜ್ಯಕ್ಕೆ ಪ್ರಥಮ ಶ್ರೇಣಿ ಸೂಚ್ಯಂಕದಂತೆ ನೀಡಲಾಗಿದ್ದು, ಅತ್ಯಂತ ನಾವೀನ್ಯತಾ ಪೂರ್ಣ ರಾಜ್ಯವಾಗಿ ಕರ್ನಾಟಕವು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ರಾಜ್ಯಗಳ Startup Ranking ಅಡಿಯಲ್ಲಿ ಕರ್ನಾಟಕ ಕಾರ್ಯನಿರ್ವಹಣೆಯ ರಾಜ್ಯವನ್ನು ಅತ್ಯುತ್ತಮ ಎಂದು ಸಹ ರಾಜ್ಯ ಘೋಷಿಸಲಾಗಿದೆ.

ಉದ್ಯಮ ಕ್ಷೇತ್ರದಲ್ಲೂ ಸಾಧನೆ

ಪರಿಷ್ಕೃತ ಕರ್ನಾಟಕ ಸ್ಮಾರ್ಟ್ ಅಪ್ ನೀತಿ-2022- 27ನ್ನು ಇತ್ತೀಚೆಗೆ ಘೋಷಿಸಲಾಯಿತು. ರಾಜ್ಯದ ಮೊಟ್ಟ ಮೊದಲ ಕರ್ನಾಟಕ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯನೀತಿ-2022ನ್ನು ಮತ್ತು ಕರ್ನಾಟಕ ದತ್ತಾಂಶ ಕೇಂದ್ರ ನೀತಿ-2022ನ್ನು ಸಹ ಘೋಷಿಸಲಾಗಿದೆ.

ಬಿಸಿನೆಸ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ Department of Industry and Internal Trade (DPIIT) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ “ಶ್ರೇಷ್ಠ ಸಾಧಕ ರಾಜ್ಯ” ವಾಗಿ ಹೊರಹೊಮ್ಮಿದೆ. ಸರಕು ರಫ್ತನಲ್ಲಿ, 2022ರ ಆರ್ಥಿಕಸಾಲಿನಲ್ಲಿ ಭಾರತದ ರಫಿಗೆ ರಾಜ್ಯವು USD 25.87 ಬಿಲಿಯನ್ ಕೊಡುಗೆ ನೀಡಿದೆ ಇದು ಇದುವರೆಗಿನ ಮೊದಲ ನಾಲ್ಕು ರಫ್ತು ಮಾಡುವ ಮೊತ್ತವಾಗಿದೆ ಅತ್ಯಧಿಕ ರಾಜ್ಯಗಳಲ್ಲಿ ರಾಜ್ಯವು ಒಂದಾಗಿರುವುದರಿಂದ ಇದು ಮಹತ್ವದ ಮೈಲಿಗಲ್ಲು ಆಗಿರುತ್ತದೆ.

ಕರ್ನಾಟಕ 2022, ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ – ಸರ್ಕಾರದ ಜಾಗತಿಕ ನವೆಂಬರ್, 2022 ರವರೆಗೆ ಆಯೋಜಿಸಲಾಗಿತ್ತು. ಇದರಿಂದ ಒಟ್ಟು ರೂ. 9,81,784 ಕೋಟಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲಾಗಿದೆ.

ಎಲೆಕ್ಟ್ರಿಕ್‌ ವಾಹನ ಬಳಕೆಗೆ ಪ್ರೋತ್ಸಾಹ

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಎಲೆಕ್ನಿಕ್‌ ವಾಹನಗಳ (ಇವಿ) ಉತ್ಪಾದನೆಯ ಮೇಲೆ ಹೆಚ್ಚಿನ ಗಮನಹರಿಸುವುದರೊಂದಿಗೆ, ಸರ್ಕಾರವು ಕರ್ನಾಟಕ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಎನರ್ಜಿ ಸ್ಟೋರೇಜ್ ನೀತಿ, 2017ನ್ನು ತಿದ್ದುಪಡಿ ಮಾಡಿದೆ ಮತ್ತು ಹೂಡಿಕೆದಾರರ ನಿರೀಕ್ಷೆಗಳಿಗೆ ಅನುಗುಣವಾಗಿ ಮತ್ತು ಕರ್ನಾಟಕದಲ್ಲಿ ಇವಿ ಬಳಕೆಯನ್ನು ಹೆಚ್ಚಿಸಲು ಪ್ರೋತ್ಸಾಹಕಗಳನ್ನು ಉನ್ನತೀಕರಿಸಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ೨೦೨೩ರ ಜೂನ್‌ ೧ರಿಂದ ಆಗಸ್ಟ್‌ ೧ರವರೆಗೆ ಯಶಸ್ವಿಯಾಗಿ ನೆರವೇರಿಸಲಾಯಿತು.

ರಾಜ್ಯದ 67 ಜನ ಸಾಧಕರಿಗೆ ‘ರಾಜ್ಯೋತ್ಸವ ಪ್ರಶಸ್ತಿ-2022’ ಹಾಗೂ ಸಾಮಾಜಿಕವಾಗಿ ಉತ್ತಮ ಸೇವೆಗೈದ 10 ಸಂಘ-ಸಂಸ್ಥೆಗಳಿಗೆ ‘ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ-2022 ನೀಡಿ ಗೌರವಿಸಲಾಗಿದೆ. 2022ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಕರ್ನಾಟಕ ರತ್ನ’ ಗೌರವ ಪ್ರಶಸ್ತಿಯನ್ನು ದಿ. ಪುನೀತ್ ರಾಜ್‌ಕುಮಾರ್ ರವರಿಗೆ ಮರಣೋತ್ತರವಾಗಿ ಪ್ರದಾನ ಮಾಡಲಾಗಿದೆ .

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50,000 ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ ರೂ.1.5 ಲಕ್ಷ ಪ್ರಾರಂಭಿಕ ಧನವನ್ನು ನೀಡಲಾಗುತ್ತಿದ್ದು, 5.00 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಬೆಂಬಲ ನೀಡುವ ಗುರಿಯನ್ನು ಹೊಂದಿದೆ. ಬಾಲ್ಯವಿವಾಹ ತಡೆಗಟ್ಟುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡ “ಸ್ಫೂರ್ತಿ” ಯೋಜನೆಯನ್ನು ಬಾಗಲಕೋಟೆ, ವಿಜಯಪುರ, ರಾಯಚೂರು, ಬೆಳಗಾವಿ ಮತ್ತು ಕಲಬುರಗಿ ಜಿಲ್ಲೆಗಳ 11 ತಾಲೂಕುಗಳಿಗೆ ವಿಸ್ತರಿಸಲಾಗುತ್ತಿದೆ. 12.51 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೂಲಕ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ರಸ್ತೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ಮೂಲಕ ಸುರಕ್ಷಿತ ಮತ್ತು ವಾಹನಗಳ ಸುಲಭ ಸಂಚಾರವನ್ನು ಒದಗಿಸಲು ಉತ್ತಮ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲು ಸರ್ಕಾರವು ಬದ್ಧವಾಗಿದ್ದು, ರೂ.5140 ಕೋಟಿ ಮೊತ್ತದ ಮಂಜೂರಾತಿಯನ್ನು ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಜನರಿಗೆ ಸಂಪರ್ಕ ಯೋಜನೆಯಡಿ ಕಲ್ಪಿಸಲು “ಗ್ರಾಮಬಂಧು ಸೇತು” 1411 ಸಂಕಗಳ ಸೇತುವೆ ನಿರ್ಮಾಣವನ್ನು ಕೈಗೊಳ್ಳಲಾಗಿದೆ. 90 ಕೋಟಿ ರೂಗಳ ಮೊತ್ತದ ವೆಚ್ಚದಲ್ಲಿ 135 ಸೇತುವೆಗಳ ನಿರ್ಮಾಣ ಪೂರ್ಣಗೊಂಡಿದೆ. “ರಸ್ತೆ ಸುರಕ್ಷತಾ ಕಾರ್ಯಕ್ರಮ ಯೋಜನೆಯ ಅಡಿಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು165 ಕೋಟಿ ರೂಗಳ ಮೊತ್ತದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ.

ರಾಷ್ಟ್ರೀಯ ಯುವ ನೀತಿ ಪ್ರಕಟ
26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ 12-01-2023 ರಿಂದ 16-01-2023 ರವರೆಗೆ ಯಶಸ್ವಿಯಾಗಿ ಆಯೋಜಿಸಲಾಗಿದ್ದು, ಭಾರತದ ಮಾನ್ಯ ಪ್ರಧಾನ ಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಸುಮಾರು 7500 ಕ್ಕೂ ಹೆಚ್ಚು ಯುವ ಪ್ರತಿನಿಧಿಗಳು ಭಾಗವಹಿಸಿದ್ದರು. “ಯುವ ಅಭಿವೃದ್ಧಿ ಮತ್ತು ಅಭಿವೃದ್ಧಿಗಾಗಿ ಯುವ” ಯುವ ನೀತಿಯನ್ನು ಪ್ರಾರಂಭಿಸಲಾಗಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದ ಸೂಕ್ಷ್ಮ ಉದ್ಯಮಗಳನ್ನು ಬೆಂಬಲಿಸಲು ಪ್ರಾರಂಭಿಸಲಾಗಿದೆ. ಸುಮಾರು 5.00 ಲಕ್ಷ ಯುವ ಜನರು ಇದರ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿನ 19 ವಿವಿಧ ನಿಗಮಗಳಿಗೆ 857.75 ಕೋಟಿ ರೂ. ಗಳ ಹೆಚ್ಚುವರಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಇದು ಹೆಚ್ಚಿನ ಯುವಜನತೆಗೆ ಅವರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಹಾಯ ಮಾಡುತ್ತದೆ.

ಅಮೃತ ಜ್ಯೋತಿ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ದಿನಾಂಕ:01-05-2022 ರಿಂದ ಅನ್ವಯಿಸುವಂತೆ ಮಾಸಿಕ 75 ಯೂನಿಟ್ ರವರೆಗೆ ಉಚಿತ ವಿದ್ಯುತ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಹೆಚ್.ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್ ಸೆಟ್ ಸ್ಥಾವರಗಳ ವಿದ್ಯುತ್ ಶುಲ್ಕವನ್ನು ಫಲಾನುಭವಿಗಳಿಗೆ DBT ವ್ಯವಸ್ಥೆಯಡಿ ಮರುಪಾವತಿಸಲಾಗುತ್ತಿದೆ.

ರಾಜ್ಯಪಾಲರಿಗೆ ವಂದನೆ ಸಲ್ಲಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

2021-22ನೇ ಸಾಲಿನಲ್ಲಿ ರಾಜ್ಯದ ರೈತರಿಂದ 2.1 ಲಕ್ಷ ಮೆಟ್ರಿಕ್ ಟನ್ ಭತ್ತ, 4.4 ಲಕ್ಷ ಮೆಟ್ರಿಕ್ ಟನ್ ರಾಗಿ ಮತ್ತು 1 ಲಕ್ಷ ಮೆಟ್ರಿಕ್ ಟನ್ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಯೋಜನೆಯಡಿ ಖರೀದಿಸಲಾಗಿದೆ. ಈ ಆಹಾರ ಧಾನ್ಯಗಳನ್ನು ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಫಲಾನುಭವಿಗಳಿಗೆ ವಿತರಿಸಲಾಗಿದೆ. 2022-23ನೇ ಸಾಲಿನಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿರುವ ಅನರ್ಹರನ್ನು ಗುರುತಿಸಿ 2.76 ಲಕ್ಷ ಅನರ್ಹ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದುಪಡಿಸಿ, 4.31 ಲಕ್ಷ ಹೊಸ ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲಾಗಿದೆ.

ರಾಜ್ಯದಲ್ಲಿ ನೀರಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆಯು ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 97 ಟ್ಯಾಂಕ್‌ಗಳನ್ನು ವೃಷಭಾವತಿ ಕಣಿವೆಯ ದ್ವಿತೀಯ ಸಂಸ್ಕರಿಸಿದ ನೀರನ್ನು ಬಳಸಿ, ತುಂಬಿಸುವ ಕಾಮಗಾರಿ ಸೇರಿದೆ ಹಾಗೂ ಘಟಪ್ರಭಾ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಐದು ಬ್ಯಾರೇಜ್‌ಗಳಲ್ಲಿ ತುಂಬಿಸುವ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಚಾಮರಾಜನಗರ, ಕೊಡಗು, ಬೀದರ್, ಹಾವೇರಿ, ಕೊಪ್ಪಳ ಬಾಗಲಕೋಟೆ ಮತ್ತು ಹಾಸನ ಸೇರಿದಂತೆ ಏಳು ಹೊಸ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ. ಐಐಟಿ ಮಾದರಿಯಲ್ಲಿ ಏಳು ಎಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ. ಟೆಕ್ನಾಲಜಿಯಾಗಿ ಕರ್ನಾಟಕ ಸರ್ಕಾರವು ಐತಿಹಾಸಿಕ ನಿರ್ಣಯವನ್ನು ಕೈಗೊಂಡು, ರಾಜ್ಯ ಸೇವೆಗಳ ನೇಮಕಾತಿ ಮತ್ತು ಪದೋನ್ನತಿಗಾಗಿ ಇದ್ದ ಮೀಸಲಾತಿಯನ್ನು ಪರಿಶಿಷ್ಟ ಜಾತಿಗೆ ಶೇಕಡ 15 ರಿಂದ 17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇಕಡ 3 ರಿಂದ 7ಕ್ಕೆ ಹೆಚ್ಚಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳಲ್ಲಿನ ಗುರಿಯಲ್ಲಿ ಎಸ್.ಸಿ / ಎಸ್.ಟಿ ಮಹಿಳೆಯರಿಗೆ .25 ರಷ್ಯನ್ನು ಕಾಯ್ದಿರಿಸಲು ಕ್ರಮವಹಿಸಲಾಗುತ್ತಿದೆ. ಪುಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ 1.89 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ನಿರ್ಮಿಸಲು, ರಾಜ್ಯದ ಎಲ್ಲಾ ಐದು ಶೈಕ್ಷಣಿಕ ವಲಯಗಳಲ್ಲಿ ತಲಾ 1,000 ವಿದ್ಯಾರ್ಥಿಗಳ ಸಾಮರ್ಥ್ಯದ ಪಂಡಿತ್‌ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 100 ಅಂಬೇಡ್ಕರ್ ವಸತಿ ನಿಲಯಗಳು ಮತ್ತು ಹಿಂದುಳಿದ ವರ್ಗಗಳಿಗೆ 50 ಕನಕದಾಸ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬಡ ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಭೂಮಿ ಒದಗಿಸುವ “ಭೂ ಒಡೆತನ” ಯೋಜನೆಯ ಘ0 ಕ ವೆಚ್ಚವನ್ನು ಪ್ರತಿ ಎಕರೆಗೆ 15.00 ಲಕ್ಷ ರೂ.ಗಳಿಂದ 20.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಪ.ಜಾ / ಪ.ಪಂಗಡದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಹಾಯಧನವನ್ನು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪ.ಜಾ / ಪ.ಪಂಗಡದವರಿಗೆ ವಿವಿಧ ವಸತಿ ಯೋಜನೆಗಳಡಿ ನೀಡಲಾಗುತ್ತಿದ್ದ ಸಹಾಯಧನವನ್ನು 2.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರ ಬಹುಕಾಲದ ಬೇಡಿಕೆಯಂತೆ ನಗರ ಸ್ಥಳೀಯ ಸಂಸ್ಥೆಗಳ ನೇರ ವೇತನದಲ್ಲಿರುವ 11,133ಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಪೌರಾಡಳಿತ ಸೇವೆಗೆ ಒಳಪಡಿಸಲಾಗುತ್ತಿದೆ.

ಸೇವಾ ಸಿಂಧು ಯೋಜನೆಗೆ ಪ್ರಧಾನ ಮಂತ್ರಿ ಪ್ರಶಸ್ತಿ

ಗ್ರಾಮೀಣ ಭಾಗದ ನಾಗರಿಕರಿಗೆ ತಮ್ಮ ಗ್ರಾಮದಲ್ಲಿಯೇ ಎಲ್ಲಾ ಇಲಾಖೆಗಳ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಸರ್ಕಾರವು “ಗ್ರಾಮ್ ಒನ್ ಪ್ರಾಜೆಕ್ಟ್ ಅಡಿಯಲ್ಲಿ, 31 ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 80 ಇಲಾಖೆಗಳ 850 ಸರ್ಕಾರಿ ಸೇವೆಗಳನ್ನು ನಾಗರಿಕರಿಗೆ ಒದಗಿಸುತ್ತಿರುವ ಸೇವಾ ಸಿಂಧು ಯೋಜನೆಗೆ ಪ್ರಧಾನ ಮಂತ್ರಿ ಪ್ರಶಸ್ತಿ ನೀಡಲಾಗಿದೆ.

FRUITS (Farmers Registration and Unified Beneficiary Information system) – (e-Saala) ಯೋಜನೆಯು ಕೃಷಿ ಸಾಲ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿರುವುದನ್ನು ಗುರುತಿಸಲಾಗಿದೆ ಮತ್ತು ಇತರ ರಾಜ್ಯಗಳಲ್ಲಿ FRUITS ವ್ಯವಸ್ಥೆಯ ಅನುಷ್ಠಾನಕ್ಕಾಗಿ ಶಿಫಾರಸ್ಸು ಮಾಡಲಾಗಿದೆ. 2022 ರಲ್ಲಿ ನಡೆದ ಇ-ಆಡಳಿತದ ರಾಷ್ಟ್ರೀಯ ಸಮ್ಮೇಳನದಲ್ಲಿ ಕುಟುಂಬ ಯೋಜನೆಯನ್ನು ಗುರುತಿಸಿ ರಜತ ಪದಕವನ್ನು ನೀಡಲಾಗಿದೆ.

ಗೌರವಯುತ ಮತ್ತು ವಿಕಸಿತ ಭಾರತದ ನಿರ್ಮಾಣದ ಮುಂದಿನ 25 ವರ್ಷಗಳ ಅಮೃತ ಕಾಲವು ನಮ್ಮ ದೇಶವನ್ನು ಪ್ರಪಂಚದ ಕೀರೀಟ ಪ್ರಾಯವನ್ನಾಗಿಸುವ ಕರ್ತವ್ಯ ಕಾಲವಾಗಿದೆ. ನೀವೆಲ್ಲರೂ ಸಾರ್ವಜನಿಕ ಜೀವನದಲ್ಲಿ, ಸಕ್ರಿಯ ಪಾತ್ರವನ್ನು ನಿಭಾಯಿಸುವುದಲ್ಲದೆ, ರಾಷ್ಟ್ರದ ಪ್ರಗತಿಗೆ ಎಲ್ಲರೂ ತಮ್ಮ ಕೊಡುಗೆಯನ್ನು ನೀಡಲು ಪ್ರೇರೇಪಣೆ ನೀಡಲಿದೆ.

ಇದನ್ನೂ ಓದಿ | Republic day 2023 : ಚಾಮರಾಜಪೇಟೆ ಮೈದಾನದಲ್ಲಿ ನಡೆಯಿತು ಗಣರಾಜ್ಯೋತ್ಸವ, ಇನ್ನು ಎಲ್ಲ ಹಬ್ಬವೂ ನಡೀತದೆ ಅಂದ್ರು ಪಿ.ಸಿ. ಮೋಹನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Ramanagara News: ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದ ಮದುವೆ ಸಮಾರಂಭದಲ್ಲಿ ಐಸ್‌ ಕ್ರೀಂ ಸೇವಿಸಿದ್ದ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

VISTARANEWS.COM


on

Ramanagara News
Koo

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ (Channapatna News) ಸಾತನೂರು ಸರ್ಕಲ್ ಬಳಿ ನಡೆದಿದೆ. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಊಟದ ನಂತರ ಐಸ್ ಕ್ರೀಂ ತಿಂದಿದ್ದ 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಅಸ್ವಸ್ಥರಾಗಿದ್ದು, ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ | Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥರ ಕುಟುಂಬಸ್ಥರು ಜಮಾಯಿಸಿದ್ದಾರೆ. ಅಸ್ವಸ್ಥರಿಗೆ ಡ್ರಿಪ್ಸ್ ಹಾಕಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef smuggling suspected Hindu activists pelt stones at vehicle

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

Prajwal Revanna Case: ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ ನಂ.
6360938947 ಅನ್ನು ಬೆಳಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದು. ತಪ್ಪಿದರೆ ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಸಂಬಂಧ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಶಾಸಕ ಎಚ್.ಡಿ.ರೇವಣ್ಣ ಅವರ ಕೈಯಲ್ಲಿ ಸದಾ ನಿಂಬೆ ಹಣ್ಣು ಇರುತ್ತದೆ ಎಂಬುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಹಲವರು ಹಾಸ್ಯ ಮಾಡಿದರೂ ರೇವಣ್ಣ ಅವರು ಮಾತ್ರ ಎಲ್ಲವನ್ನೂ ನಗುತ್ತಲೇ ಸ್ವೀಕರಿಸಿ ಮುಂದೆ ಸಾಗುತ್ತಿದ್ದರು. ಇದೀಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧಪಟ್ಟಂತೆ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ಸಂಜೆ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಸಾಗುತ್ತಿದ್ದದ್ದು ಕಂಡುಬಂದಿದೆ.

ಈ ಹಿಂದೆ ಕುಟುಂಬಕ್ಕೆ ಸಂಕಷ್ಟ ಬಂದಾಗ ಹೋಮ-ಹವನ, ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳ ಮೊರೆ ಹೋಗುವ ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಓಡಾಡುತ್ತಿದ್ದರು. ಆದರೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ ಬಂಧನವಾದ ನಂತರ ಅವರಿಗೆ ಜ್ಯೋತಿಷ್ಯ, ನಿಂಬೆಹಣ್ಣು ಕೂಡ ಕೈಹಿಡಿಯಲಿಲ್ಲ ಎಂದು ಸಾರ್ವಜನಿಕರು ವ್ಯಂಗ್ಯವಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ರೇವಣ್ಣ ಅವರು ಎಡಗೈನಲ್ಲಿ ನಿಂಬೆಹಣ್ಣಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿಗೆ ಬರುವ ಮುನ್ನ ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು ಎನ್ನಲಾಗಿದೆ. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಆದರೆ, ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಮಾಜಿ ಸಚಿವ ಎಚ್‌.ಡಿ. ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ; ಮತ್ತೆ ತೀವ್ರ ವಿಚಾರಣೆ

Prajwal Revanna Case HD Revanna sent to judicial custody Shift to Parappana Agrahara

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

Continue Reading

ಕರ್ನಾಟಕ

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

Fire Accident: ಬೆಂಗಳೂರಿನ ಎಂಜಿ‌ ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಭಾನುವಾರ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದೆ.

VISTARANEWS.COM


on

Fire Accident
Koo

ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಆಪ್ಟಿಕಲ್ಸ್ ಮಳಿಗೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಡ (Fire Accident) ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಂಜಿ‌ ರೋಡ್ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ramanagara News
ಕರ್ನಾಟಕ2 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ2 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ2 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ2 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ2 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ3 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ3 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ3 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest3 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ6 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ8 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ8 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌