Site icon Vistara News

Republic Day 2023: ವಿಶ್ವದ ಉದ್ದಗಲಕ್ಕೂ ಭಾರತದ ಕೀರ್ತಿ ಸಾರೋಣ: ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್

Yallapura republic day

ಯಲ್ಲಾಪುರ: ನಮ್ಮ ಮೂಲಭೂತ ಹಕ್ಕುಗಳ ಸದುಪಯೋಗ, ಮೂಲಭೂತ ಕರ್ತವ್ಯಗಳ ಪಾಲನೆ ಪ್ರತಿಯೊಬ್ಬ ನಾಗರಿಕನಿಂದ ಆಗಲೇಬೇಕು. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದನ್ನು ನಾವು ಗಮನಿಸಬಹುದು. ಭಾರತದ ಕೀರ್ತಿ ಪತಾಕೆಯನ್ನು ವಿಶ್ವದ ಉದ್ದಗಲಕ್ಕೂ ಸಾರುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದು ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಗಣರಾಜ್ಯೋತ್ಸವ (Republic Day 2023) ಕಾರ್ಯಕ್ರಮದಲ್ಲಿ ಹೇಳಿದರು.

ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ , ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಕವಾಳೆ ಗಣಪತಿ ಭಾಗ್ವತ್, ಡಾಕ್ಟರೇಟ್ ಪದವಿ ಪಡೆದ ಗೀತಾ ಸಿದ್ದಿ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸುಧಾಕರ ನಾಯಕ ಅವರನ್ನು ಸನ್ಮಾನಿಸಲಾಯಿತು.

ಪಟ್ಟಣದ ಕಾಳಮ್ಮ ನಗರದ ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತ ಇಂದು ಆರ್ಥಿಕತೆಯಲ್ಲಿ ಸಾಧನೆ ಮಾಡುತ್ತಿದೆ. ಕೋವಿಡ್‌ ಹೊರತಾಗಿಯೂ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತಿದೆ ಎಂದು ಹೇಳಿದರು.

ಪಂಚಾಯತ್ ರಾಜ್ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ ಪ್ರಮೋದ್‌ ಹೆಗಡೆ ಮಾತನಾಡಿ, ಅಭಿವೃದ್ಧಿ ಪಥದಲ್ಲಿರುವ ದೇಶವನ್ನು ಇನ್ನಷ್ಟು ಮುನ್ನಡೆಸುತ್ತ ನಾವೆಲ್ಲ ಶ್ರಮಿಸಬೇಕಿದೆ ಎಂದರು.

ಇದನ್ನೂ ಓದಿ | Rani Gaidinliu : 16ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜೈಲು ಸೇರಿದ್ದ ಸೇನಾನಿ ರಾಣಿ ಗೈಡಿನ್ಲ್ಯೂ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಆರ್.ಎನ್. ಹೆಗಡೆ ಗೋರ್ಸಗದ್ದೆ, ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಕವಾಳೆ ಗಣಪತಿ ಭಾಗ್ವತ್, ಡಾಕ್ಟರೇಟ್ ಪದವಿ ಪಡೆದಿರುವ ಗೀತಾ ಸಿದ್ದಿ ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸುಧಾಕರ ನಾಯಕ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕಮ್ಮಾರ, ಪ.ಪಂ. ಮುಖ್ಯಾಧಿಕಾರಿ ಸಂಗನಬಸಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ, ಸಿಪಿಐ ಸುರೇಶ್ ಯಳ್ಳೂರ್, ವಿವಿಧ ಇಲಾಖೆಯ ಅಧಿಕಾರಿಗಳು. ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಇದನ್ನೂ ಓದಿ | Athiya Shetty-KL Rahul Wedding: ಸುನೀಲ್ ಶೆಟ್ಟಿ-ಮಾನಾ ಶೆಟ್ಟಿ ಮಗಳನ್ನು ತಬ್ಬಿಕೊಂಡು ಹೂ ಮಳೆ ಸುರಿಸಿ ಆಶೀರ್ವದಿಸಿದ್ದು ಹೀಗೆ!

ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ತಂಡ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Exit mobile version