Site icon Vistara News

Revant Reddy : ತೆಲಂಗಾಣ ಸಿಎಂ ಪ್ರಮಾಣವಚನ ಸ್ವೀಕಾರಕ್ಕೆ ಡಿಕೆಶಿ, ಸಿದ್ದರಾಮಯ್ಯ ಸಾಥ್‌

Siddaramaiah Revant Reddy

ಹೈದರಾಬಾದ್‌: ಕಾಂಗ್ರೆಸ್‌ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿದ ತೆಲಂಗಾಣದಲ್ಲಿ ನೂತನ ಮುಖ್ಯಮಂತ್ರಿಯಾಗಿ (telangana New Chief Minister) ರೇವಂತ್‌ ರೆಡ್ಡಿ (Revant Reddy) ಅವರು ಅಧಿಕಾರ ಮತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷದ ಗೆಲುವಿನಲ್ಲಿ ಮಾರ್ಗದರ್ಶನ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಸಾಥ್‌ ನೀಡಿದರು.

ತೆಲಂಗಾಣ ಸಿಎಂ ಆಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಹೈದರಾಬಾದ್‌ನ ಲಾಲ್‌ ಬಹಾದೂರ್‌ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಹಾಗೂ ಡಿಸಿಎಂ ನೂತನ ಸಿಎಂಗೆ ಶುಭ ಹಾರೈಸಿದರು. ಕರ್ನಾಟಕದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಆಧಾರದಲ್ಲೇ ತೆಲಂಗಾಣದಲ್ಲೂ ಕಾಂಗ್ರೆಸ್‌ ಮತಗಳನ್ನು ಕೇಳಿತ್ತು. ರೇವಂತ್‌ ರೆಡ್ಡಿ ಅವರು ಈ ವಿಚಾರದಲ್ಲಿ ಡಿ.ಕೆ. ಶಿವಕುಮಾರ್‌ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದರು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ರೇವಂತ್‌ ಅವರು ತಮ್ಮ ಭಾಷಣವನ್ನು ಜೈ ಸೋನಿಯಾ ಅಮ್ಮ ಎಂದು ಘೋಷಿಸುವ ಮೂಲಕ ಮುಗಿಸಿದ್ದು ವಿಶೇಷವಾಗಿತ್ತು.

ಮಾತು ಉಳಿಸಿಕೊಳ್ಳುತ್ತೇವೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ಜನರಿಗೆ ಧನ್ಯವಾದಗಳು. ಅವರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈದರಾಬಾದ್‌ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಹೇಳಿದರು.

“ತೆಲಂಗಾಣ ರಾಜ್ಯದ ಜನರು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಗೌರವ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಾವು ಅವರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ತಿಳಿಸಿದರು.

ಯತ್ನಾಳ್ ಆಸ್ಪತ್ರೆಗೆ ಸೇರಿಸೋಣ

ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ನಿನ್ನೆ ರಾತ್ರಿ ಮಾಧ್ಯಮಗಳು, “ಸಿಎಂ ಭಯೋತ್ಪಾದಕರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ” ಎಂಬ ಬಿಜೆಪಿ ಶಾಸಕ ಯತ್ನಾಳ್ ಅವರ ಆರೋಪದ ಬಗ್ಗೆ ಕೇಳಿದಾಗ “ಯತ್ನಾಳ್ ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಒಳ್ಳೆಯ ಆಸ್ಪತ್ರೆಗೆ ಸೇರಿಸೋಣ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದರು. ಪಂಚರಾಜ್ಯ ಚುನಾವಣೆಯಲ್ಲಿ ನಿರೀಕ್ಷೆಗೆ ತಕ್ಕ ಫಲಿತಾಂಶ ಬಂದಿಲ್ಲ ಎಂದು ಕೇಳಿದಾಗ, “ಜನರ ತೀರ್ಪಿಗೆ ನಾವು ಗೌರವ ನೀಡುತ್ತೇವೆ” ಎಂದು ತಿಳಿಸಿದರು. ನೀವು ಸದನದಲ್ಲಿ ಹಾಜರಾಗಿಲ್ಲ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಅವರು ಹುಡುಕಾಡಲಿ. ಕಾಳು, ಬಲೆ ಹಾಕಿಕೊಂಡು ಹುಡುಕಾಡಲಿ” ಎಂದರು.

Exit mobile version