ರಾಯಚೂರು: ಲಿಂಗಸುಗೂರು ರಸ್ತೆಯ ಬೈಪಾಸ್‌ನಲ್ಲಿ ವೇಗವಾಗಿ ಸಾಗಿದ ಕಾರೊಂದು ಕುರಿ ಹಿಂಡಿನ (Road Accident) ಮೇಲೆ ಹರಿದಿದೆ. ಘಟನೆಯಲ್ಲಿ 30 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, 10 ಕುರಿಗಳು ಗಾಯಗೊಂಡಿವೆ.
ಬೈಪಾಸ್ ರಸ್ತೆಯ ಬದಿಯಲ್ಲಿ ಕುರಿಗಳು ನಿಂತಿದ್ದವು, ಈ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ 30 ಕುರಿಗಳು ಸಾವನ್ನಪ್ಪಿದ್ದರೆ, ಇನ್ನುಳಿದ 10 ಕುರಿಗಳ ಕಾಲು ಮುರಿದಿದೆ. ಕಾರು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿಯಾಗಿದೆ.
ಇದನ್ನೂ ಓದಿ: Bharat Jodo Yatra: ಹವಾಮಾನ ವೈಪರೀತ್ಯ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸ ರದ್ದು
ಗೋವಾದಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದಲ್ಲಿ ಮೂರು ಲಕ್ಷ ರೂ. ಮೌಲ್ಯದ ಕುರಿಗಳು ಮೃತಪಟ್ಟಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.