Site icon Vistara News

Road Accident | 12 ಜನರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್‌ ಆಟೋ ನಿಯಂತ್ರಣ ತಪ್ಪಿ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ

ರಾಯಚೂರು: ಇಲ್ಲಿನ ಲಿಂಗಸುಗೂರು ತಾಲೂಕಿನ ಮುದಗಲ್‌ನ ಬಾಬಾಕಟ್ಟಿ ಬಳಿ ಗೂಡ್ಸ್ ಆಟೋ ಪಲ್ಟಿಯಾಗಿ ನಾಲ್ವರು ಗಂಭೀರವಾಗಿ (Road Accident) ಗಾಯಗೊಂಡಿದ್ದಾರೆ. ಮುದಗಲ್‌ಗೆ ಬಂದಿದ್ದ 12 ಜನ ಮಸ್ಕಿ ಪಟ್ಟಣದ ನಿವಾಸಿಗಳಾಗಿದ್ದು, ಗೂಡ್ಸ್‌ ಆಟೋದಲ್ಲಿ ವಾಪಸ್‌ ಆಗುವಾಗ ದುರ್ಘಟನೆ ಸಂಭವಿಸಿದೆ.

ಆಟೋ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ್ದು, ಪಲ್ಟಿಯಾಗಿದೆ. ಈ ವೇಳೆ ಆಟೋದಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Suicide Case | ಅನಾರೋಗ್ಯದಿಂದ ಬೇಸತ್ತ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Exit mobile version