ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸರಣಿ ಅಪಘಾತ ಸಂಭವಿಸಿ ಐದು ಕಾರುಗಳು ಜಖಂಗೊಂಡಿವೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಸರಣಿ ಅಪಘಾತ ನಡೆದಿದೆ. ವಾಹನಗಳು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದವು. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ (Road Accident).
ಕೆಲವು ದಿನಗಳ ಹಿಂದೆಯಷ್ಟೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅವಘಡ ನಡೆದು ನಾಲ್ವರು ಗಾಯಗೊಂಡಿದ್ದರು. ಓವರ್ ಸ್ಪೀಡ್‌ನಲ್ಲಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಸಂಕಲಗೆರೆ ಗೇಟ್ ಬಳಿ ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಅಪಘಾತ ಸಂಭವಿಸಿತ್ತು. ಸ್ಕೋಡಾ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಅವಘಡ ನಡೆದಿತ್ತು. ಓವರ್ ಸ್ಪೀಡ್‌ನಿಂದ ಸರ್ವಿಸ್ ರಸ್ತೆಗೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಸಿನಿಮಾ ಸ್ಟೈಲ್‌ನಲ್ಲಿ ಕಾರು ಕೆರೆಗೆ ಹಾರಿತ್ತು.
ಚಿತ್ರದುರ್ಗದಲ್ಲಿ ಭೀಕರ ಅಪಘಾತ; ನಾಲ್ಕು ಮಂದಿ ಸಾವು
ಚಿತ್ರದುರ್ಗ: ಶನಿವಾರ ಮುಂಜಾನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿದೆ. ನ್ಯಾಷನಲ್ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ.
ಇದನ್ನೂ ಓದಿ: Actor Darshan: ಇಂದು ನಟ ದರ್ಶನ್ ಭವಿಷ್ಯ ನಿರ್ಧಾರ; ಕೋರ್ಟ್ ತೀರ್ಪು ಏನಿರಲಿದೆ?
ಉಡುಪಿ: ಕಾರು ಪಲ್ಟಿಯಾಗಿ ಗಾಯ
ಉಡುಪಿ: ಡಿವೈಡರ್ ಕಲ್ಲುಗಳಿಗೆ ಬಡಿದ ಕಾರು ಪಲ್ಟಿಯಾದ ಘಟನೆ ಉಡುಪಿ-ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಫೋರ್ಡ್ ಫಿಗೊ ಕಾರು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.
ಬೈಕ್‌ಗೆ ಹಾನಿ
ಆರಂಭದಲ್ಲಿ ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದಿತ್ತು. ತಕ್ಷಣ ಕಲ್ಲಿನ ತುಂಡು ಹಾರಿ ಸಮೀಪದಲ್ಲಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕಿಗೂ ತೀವ್ರ ಹಾನಿಯಾಗಿದ್ದು, ಅದೃಷ್ಟವಶಾತ್ ಬೈಕ್ ಸವಾರ ಬಚಾವಾಗಿದ್ದಾನೆ. ರಸ್ತೆ ಮಧ್ಯೆ ವಿಭಜಕವಾಗಿ ಬಳಸುತ್ತಿದ್ದ ಕಲ್ಲುಗಳು ಎಗರಿದ್ದು, ಟ್ರಾಫಿಕ್ ಪೊಲೀಸ್ ಮತ್ತು ಹೈವೇ ಅಥಾರಿಟಿ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.