Site icon Vistara News

Road Accident : ಸಿಎಂ‌ ಬರುವ ದಾರಿಯಲ್ಲಿ ಅಪಘಾತ; ಆಂಬ್ಯುಲೆನ್ಸ್‌ ಬಾರದೆ ವ್ಯಕ್ತಿ ನರಳಾಟ

road Accident

ಬೆಳಗಾವಿ/ಹೊಸುರು: ಸಿಎಂ ಸಿದ್ದರಾಮಯ್ಯ ಬರುವ ರಸ್ತೆಯಲ್ಲಿ ಅಪಘಾತ (Road Accident) ನಡೆದು, ವ್ಯಕ್ತಿಯೊಬ್ಬರು ನರಳಾಡಿದರು. ಫೋನ್‌ ಮಾಡಿದರೂ ಸೂಕ್ತ ಸಮಯಕ್ಕೆ ಆಂಬ್ಯುಲೆನ್ಸ್‌ ಬಾರದ ಕಾರಣಕ್ಕೆ ಪೊಲೀಸರು ಪಿಕ್ ಅಪ್ ವಾಹನದಲ್ಲಿ ಗಾಯಾಳಾನ್ನು ರವಾನಿಸಿದರು.

ಸಾಂಬ್ರಾ ವಿಮಾನ‌ ನಿಲ್ದಾಣದಿಂದ ಬೆಳಗಾವಿ ನಗರ ಸಂಪರ್ಕಿಸುವ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿದೆ. ಪರಿಣಾಮ ಮಹೇಶ ದುಡಗುಂಡಿ ಎಂಬುವವರು ಗಂಭೀರ ಗಾಯಗೊಂಡು ನರಳಾಡಿದರು. ಇತ್ತ ಅಪಘಾತ ನಡೆಯುತ್ತಿದ್ದಂತೆ ಸ್ಥಳೀಯರೆಲ್ಲರೂ ಸಹಾಯಕ್ಕೆ ಧಾವಿಸಿದರೂ, ಆಂಬ್ಯುಲೆನ್ಸ್‌ ಕರೆ ಮಾಡಿದರು. ಆದರೆ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್‌ ಬಾರದ ಕಾರಣಕ್ಕೆ 15 ನಿಮಿಷಕ್ಕೂ ಹೆಚ್ಚು ಕಾಲ ಮಹೇಶ್‌ ನರಳಾಡಿದರು.

ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಗಾಯಾಳನ್ನು ಚಿಕಿತ್ಸೆಗೆ ರವಾನೆ ಮಾಡಲಾಗಿದೆ. ಸೂಕ್ತ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ್ದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದರು. ಇತ್ತ ತ್ವರಿತವಾಗಿ ಗಾಯಾಳನ್ನು ಆಸ್ಪತ್ರೆಗೆ ರವಾನಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸರ್ಕಾರಿ ಬಸ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ!

ರಾಜ್ಯ ಗಡಿಭಾಗ ತಮಿಳುನಾಡಿನ ಹೊಸೂರು – ಬಾಗಲೂರು ರಸ್ತೆಯ ಜೀಮಂಗಲಂ ಬಳಿ ಸರ್ಕಾರಿ ಬಸ್‌ ಹಾಗೂ ಶಾಲಾ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎರಡು ಬಸ್‌ಗಳ ಮುಂಭಾಗ ಛಿದ್ರಗೊಂಡಿದೆ.

ಶಾಲಾ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದರೆ, ಸರ್ಕಾರಿ ಬಸ್‌ನಲ್ಲಿದ್ದ ಓರ್ವ ಬಾಲಕಿಯ ಸ್ಥಿತಿ‌ ಚಿಂತಾಜನಕವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ ಬಸ್‌ನಲ್ಲಿ ಸಿಲುಕಿಕೊಂಡಿರುವ ಗಾಯಾಳುಗಳನ್ನು ಸ್ಥಳೀಯರು ಹೊರತೆಗೆಯುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version