Site icon Vistara News

Road Accident | ಬೈಕ್-ಟಾಟಾ ಏಸ್ ನಡುವೆ ಅಪಘಾತ; ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಬೈಕ್‌

Road Accident bike fire

ರಾಮನಗರ: ಇಲ್ಲಿನ ಮಾಯಗಾನಹಳ್ಳಿ ಸಮೀಪ ಬೈಕ್ ಹಾಗೂ ಟಾಟಾ ಏಸ್ ನಡುವೆ ಅಪಘಾತ (Road Accident) ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.

ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವ ಉಂಟಾಗಿದೆ. ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ | Double Murder | ಬೆಂಗಳೂರು ಉದ್ಯಮಿ ಮನೆಯಲ್ಲಿ ಜೋಡಿ ಕೊಲೆ, ದರೋಡೆ; ಹಳೇ ಡ್ರೈವರ್​​ ಮೇಲೆ ಬಲವಾದ ಶಂಕೆ

Exit mobile version