Site icon Vistara News

Road Accident : ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ; ಕಾಲ್ಕಿತ್ತ ಚಾಲಕ

Accident between car and bus

ಶಿವಮೊಗ್ಗ: ಗೋ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ (Illegal transportation of beef) ಸಾಗರದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸಾಗರ ತಾಲೂಕಿನ ಐಗಿನಬೈಲು ಬಳಿ ಗೋ ಮಾಂಸ ಸಾಗಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ವೊಂದು ಡಿಕ್ಕಿ (Road Accident) ಹೊಡೆದಿದೆ.

ಕಾರಿನಲ್ಲಿ ಗೋಮಾಂಸ ಪತ್ತೆ

ಅಪಘಾತ ನಡೆಯುತ್ತಿದ್ದಂತೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಕಾರು ಬಿಟ್ಟು ಪರಾರಿ ಆಗಿದ್ದಾರೆ. ಅನುಮಾನ ಬಂದು ಕಾರು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್‌ನಲ್ಲಿ ಗೋ ಮಾಂಸ ಪತ್ತೆಯಾಗಿದೆ. ಸೀಟ್‌ನ ಅಡಿಯಲ್ಲಿ ಹಾಗೂ ದೊಡ್ಡ ಟ್ರಮ್‌ನಲ್ಲಿ ಗೋಮಾಂಸ ಬಚ್ಚಿಟ್ಟು ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಕಾರು ಬಿಟ್ಟು ಪರಾರಿಯಾದ ಕಿಡಿಗೇಡಿಗಳು

ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿಗೂ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪ್ರಾಯ ಸಂಭವಿಸಿಲ್ಲ. ಸಾಗರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಗೋ ಮಾಂಸವನ್ನು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪರಾರಿ ಆಗಿರುವವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಅಪಘಾತದಲ್ಲಿ ಜಖಂಗೊಂಡ ಬಸ್‌ ಕಾರು

ಇದನ್ನೂ ಓದಿ: Gruha Lakshmi Scheme : ಜುಲೈ 17 ಇಲ್ಲವೇ 19ಕ್ಕೆ ಗೃಹಲಕ್ಷ್ಮಿಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

ಬೈಕ್‌ ವೀಲಿಂಗ್‌ ಮಾಡುತ್ತಿದ್ದ ಯುವಕರ ಬಂಧನ

ವೀಲಿಂಗ್‌ ಮಾಡುತ್ತಿದ್ದವರ ಬಂಧನ

ಬೈಕ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ ಮಾಡಲಾಗಿದೆ. ಶಿವಮೊಗ್ಗ ನಗರದ ಕಸ್ತೂರಬಾ ಕಾಲೇಜು, ಡಿವಿಎಸ್ ಕಾಲೇಜು ಸುತ್ತಮುತ್ತಲಿನ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಹೀಗಾಗಿ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿ, ಐಎಂವಿ ಕಾಯ್ದೆಯಡಿ ದಂಡ ವಿಧಿಸಿ ಕಾನೂನು ರೀತಿ ಕ್ರಮ ಕೈಗೊಂಡಿದ್ದಾರೆ.

ಹಾಲಿನ ಕ್ಯಾಂಟರ್‌ ಪಲ್ಟಿ

ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮನಗೂಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ಕ್ಯಾಂಟರ್ ಪಲ್ಟಿಯಾಗಿದೆ. ಅಪಘಾತದಲ್ಲಿ ಕ್ಯಾಂಟರ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ಹಾಲಿನ ಪ್ಯಾಕೇಟ್‌ ಹಾಳಾಗಿವೆ. ಆದರೆ ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version