ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಿಂದ ಕಾರುವೊಂದು ಹೊತ್ತಿ ಉರಿದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರದಲ್ಲಿ ಘಟನೆ ನಡೆದಿದೆ.
ಅತೀ ವೇಗವಾಗಿ ಬಂದು ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮುಂಭಾಗದಲ್ಲಿ ಇದ್ದ ಹಲವು ಕಾರುಗಳಿಗೆ ಗುದ್ದಿ ಸರಣಿ ಅಪಘಾತ ಸಂಭವಿಸಿದೆ. ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದ ಮಂಡ್ಯ ಎಸ್‌ಪಿ ಯತೀಶ್ ಅವರ ವಾಹನಕ್ಕೂ ಕಾರು ಡಿಕ್ಕಿ ಹೊಡೆದಿದೆ.
ಕೂಡಲೇ ಕಾರಿನಲ್ಲಿ ಸಿಲುಕಿದವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಇರುವಾಗಲೇ ಕಾರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಿಟಕಿ ಗಾಜು ಹೊಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಬಳಿಕ ಕ್ಷಣಾರ್ಧಲ್ಲೇ ಕಾರು ಹೊತ್ತಿ ಉರಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Love Case : ಪ್ರೀತಿಯ ಮೋಸದಾಟಕ್ಕೆ ಮನನೊಂದು ವಿಷ ಸೇವಿಸಿದ ವಿದ್ಯಾರ್ಥಿನಿ ಸಾವು
ಹೊತ್ತಿ ಉರಿದ ಕಂಟೈನರ್!
ಕೊಪ್ಪಳ ನಗರದ ಬಸವೇಶ್ವರ ವೃತ್ತದ ಬಳಿ ಶುಕ್ರವಾರ ತಡರಾತ್ರಿ ನಿಂತಿದ್ದ ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಕಂಟೈನರ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ನಿಖರ ಕಾರಣ ತಿಳಿದುಬಂದಿಲ್ಲ. ಕಂಟೈನರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಅಕ್ಕ ಪಕ್ಕದಲ್ಲಿ ಯಾರು ಇಲ್ಲದ ಕಾರಣಕ್ಕೆ ಭಾರಿ ಅನಾಹುತವೊಂದು ತಪ್ಪಿದೆ.
ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಪೈಪ್ ಲೈನ್ ರೋಡ್ ಜೋಗುಪಾಳ್ಯದಲ್ಲಿರುವ ಅಗರಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಹತ್ತಿಕೊಂಡ ಬೆಂಕಿಯು ಒಮ್ಮೆಲೆ ರಸ್ತೆಗೆ ಆವರಿಸಿತ್ತು. ರಸ್ತೆ ಬದಿಯಲ್ಲಿ ನಿಂತಿದ್ದ 8 ಬೈಕ್‌ಗಳು ಸುಟ್ಟು ಭಸ್ಮವಾಗಿದ್ದವು. ದೊಡ್ಡ ಪ್ರಮಾಣದ ಬೆಂಕಿಯಿಂದ ಜನರು ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಈ ಅವಘಡದಲ್ಲಿ ಅದೃಷ್ಟವಾಶತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಫ್ಯಾಕ್ಟರಿಯಲ್ಲಿ ಬೆಂಕಿ ಹೇಗೆ ಕಾಣಿಸಿಕೊಳ್ಳುತ್ತು ಎಂಬುದರ ಬಗ್ಗೆ ತಿಳಿದು ಬಂದಿಲ್ಲ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ