ಶಿವಮೊಗ್ಗ: ಇಲ್ಲಿನ ಆಯನೂರು ಸಮೀಪ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರನೊಬ್ಬ (Bike Accident) ಮೃತಪಟ್ಟಿರುವ ಘಟನೆ ನಡೆದಿದೆ. ಪುನೀತ್ ಮೃತ ದುರ್ದೈವಿ.
ದಾವಣಗೆರೆಯ ಬೆಳಗುತ್ತಿ ಗ್ರಾಮದ ನಿವಾಸಿಯಾದ ಪುನೀತ್ ಬೈಕ್ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಿಂದ ಹಾರಿ ಬಿದ್ದ ಪುನೀತ್, ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪುನೀತ್ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Shivamogga Rural Election Results: ಶಿವಮೊಗ್ಗ ಗ್ರಾಮಾಂತರದಲ್ಲಿ ಶಾರದೆಗೆ ಕೃಪೆ; ಮತ್ತೆ ಜೆಡಿಎಸ್ ತೆಕ್ಕೆಗೆ ಕ್ಷೇತ್ರ
ಕುಂಸಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.