Road accident between bikes in Bangarpet Two bikers die Road Accident: ಬಂಗಾರಪೇಟೆಯಲ್ಲಿ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರ ಸಾವು - Vistara News

ಕರ್ನಾಟಕ

Road Accident: ಬಂಗಾರಪೇಟೆಯಲ್ಲಿ ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರ ಸಾವು

ಬಂಗಾರಪೇಟೆ ತಾಲೂಕು ಪರವನಹಳ್ಳಿ ಗ್ರಾಮದ ಬಳಿ ವೇಗವಾಗಿ ಬರುತ್ತಿದ್ದ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಇದರಿಂದ ಬೈಕ್‌ ಸವಾರರಿಬ್ಬರೂ ತೀವ್ರವಾಗಿ ಗಾಯಗೊಂಡಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident in Kanakagiri taluk
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಬಂಗಾರಪೇಟೆ ತಾಲೂಕು ಪರವನಹಳ್ಳಿ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆ ಗ್ರಾಮದ ಗೋಪಾಲ್ (25) ಹಾಗೂ ಪರವನಹಳ್ಳಿ ಗ್ರಾಮದ ನವೀನ್ (26) ಮೃತರು ಎಂದು ಗುರುತಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಸ್ಥಳಕ್ಕೆ ಕಾಮಸಮುದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಗಾಗಿ ರವಾನೆ ಮಾಡಲಾಗಿದೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Lokayukta Raid: ಮಾಡಾಳ್‌ ವಿರೂಪಾಕ್ಷಪ್ಪ ಈಗ ವಿಚಾರಣಾಧೀನ ಕೈದಿ ನಂಬರ್‌ 3411

ನಾಯಂಡಹಳ್ಳಿ ಬಳಿ ಭೀಕರ ಅಪಘಾತಕ್ಕೆ ಮಹಿಳೆ ತಲೆ ಛಿದ್ರ

ಬೆಂಗಳೂರು: ನಾಯಂಡಹಳ್ಳಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗು ಮತ್ತು ಅಜ್ಜಿ ಬಚಾವ್‌ ಆಗಿದ್ದಾರೆ. ಲಾರಿ ಟಯರ್‌ ತಲೆ ಮೇಲೆ ಹತ್ತಿದ್ದರಿಂದ ಮಹಿಳೆ ತಲೆ ಛಿದ್ರವಾಗಿದೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅನುಷಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು ಶನಿವಾರ ರಜೆ ಇದ್ದರಿಂದ ವಸ್ತುಗಳ ಖರೀದಿಗಾಗಿ ಕುಟುಂಬದವರ ಜತೆ ಹೊರಗೆ ಬಂದಿದ್ದರು ಎಂದು ಹೇಳಲಾಗಿದೆ. ನಾಯಂಡಹಳ್ಳಿ ಬಳಿ ಮಹಿಳೆಯು ತಮ್ಮ ಮಗು ಹಾಗೂ ತಾಯಿಯನ್ನು ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಲಾರಿಯು ಡಿಕ್ಕಿ ಹೊಡೆದಿದ್ದರಿಂದ ಎಲ್ಲರೂ ಕೆಳಕ್ಕೆ ಬಿದ್ದಿದ್ದಾರೆ. ಆದರೆ, ಅಷ್ಟರಲ್ಲಿ ಲಾರಿ ಚಕ್ರವು ಮಹಿಳೆಯ ತಲೆ ಮೇಲೆ ಹರಿದಿದ್ದರಿಂದ ತಲೆಯು ಅಲ್ಲಿಯೂ ಒಡೆದು ಚೂರಾಗಿದೆ. ಮಗಳು ಕಣ್ಣೆದುರಿಗೇ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ.

ಕೆಎಸ್‌ಆರ್‌ಟಿಸಿ ಬಸ್‌ ಗುದ್ದಿ ನಿಂತ ಲಾರಿ

ಅತಿ ವೇಗವಾಗಿ ಲಾರಿಯನ್ನು ಓಡಿಸಲಾಗುತ್ತಿತ್ತು ಎಂದು ಹೇಳಲಾಗಿದ್ದು, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಹಾಗೇ ಮುಂದೆ ಹೋಗಿದ್ದು ಬಸ್‌ಗೆ ಡಿಕ್ಕಿ ಹೊಡೆದು ನಿಂತಿದೆ ಎಂದು ತಿಳಿದು ಬಂದಿದೆ. ಇದನ್ನು ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದಾರೆ. ಲಾರಿ ಚಾಲಕನ ಅಜಾಗರೂಕ ಚಾಲನೆಯೇ ಘಟನೆಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಕೆಲವರು ರಸ್ತೆ ಮಧ್ಯೆಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಭಾರಿ ಗಾತ್ರದ ವಾಹನಗಳಿಗೆ ನಿಯಮ ರೂಪಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಟ್ರಾಫಿಕ್‌ ಪೊಲೀಸರು ಬಂದಿದ್ದು, ಅವರ ಜತೆ ನಾಗರಿಕರು ವಾಗ್ವಾದವನ್ನು ನಡೆಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಅನುಷಾ ಅವರ ತಾಯಿ ಕಾಲಿಗೂ ಗಂಭೀರ ಗಾಯಗಳಾಗಿದ್ದು, ಕಾಲುಗಳು ಮುರಿದಿವೆ. ಏಳು ವರ್ಷದ ಆರ್ಯ ಪವಾಡ ಸದೃಶ ರೂಪದಲ್ಲಿ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಅಪಘಾತದಿಂದ ಭಯಗೊಂಡ ಲಾರಿ ಚಾಲಕನು ಲಾರಿಯನ್ನು ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದರಿಂದ ರೊಚ್ಚಿಗೆದ್ದ ನಾಗರಿಕರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸಿಸಿ ಕ್ಯಾಮೆರಾದಲ್ಲಿ ಸೆರೆ

ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕನು ಲಾರಿಯನ್ನು ಅಲ್ಲಿಯೇ ಬಿಟ್ಟು ಕಾಲ್ಕಿತ್ತಿರುವ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತ ಸ್ಥಳದಿಂದ ವೇಗವಾಗಿ ಓಡಿ ತಪ್ಪಿಸಿಕೊಂಡಿದ್ದಾನೆ. ಈ ವೇಳೆ ಸಾರ್ವಜನಿಕರು ಹಿಡಿಯಲು ಪ್ರಯತ್ನಪಟ್ಟರಾದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಅಲ್ಲದೆ, ಗಾಯಗೊಂಡ ವೃದ್ಧೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಗುವಿನ ತಲೆಗೆ ಸ್ವಲ್ಪ ಏಟಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Karnataka Election 2023: ಕಾಂಗ್ರೆಸ್‌ಗೆ ಗುಂಡಿಗೆಯೇ ಇಲ್ಲ, ಇನ್ನು ಗಂಡಸ್ತನ ಎಲ್ಲಿ ಬರುತ್ತೆ?; ಆನಂದ್‌ ಸಿಂಗ್‌

3 ಕಿ.ಮೀ. ಟ್ರಾಫಿಕ್‌ ಜಾಂ

ಅಪಘಾತವಾದ ಹಿನ್ನೆಲೆಯಲ್ಲಿ ಜನರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದರಿಂದ 3 ಕಿಲೋ ಮೀಟರ್‌ಗೂ ಅಧಿಕ ದೂರದಲ್ಲಿ ಟ್ರಾಫಿಕ್ ಜಾಂ ಉಂಟಾಗಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ಸಮಸ್ಯೆಯಾಗಿದೆ. ಜನರನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

Tungabhadra Dam: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

Koo

ವಿಜಯನಗರ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಡ್ಯಾಮೇಜ್ ಆದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಭೇಟಿ ನೀಡಿ ಪರಿಶೀಲಿಸಿದ್ದು, ದುರಸ್ತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಜಲಾಶಯ ವೀಕ್ಷಣೆ ವೇಳೆ ಡಿಸಿಎಂ ಡಿಕೆಶಿಗೆ ಬಳ್ಳಾರಿ, ವಿಜಯನಗರ, ಕೊಪ್ಪಳದ ಸಂಸದರು, ಶಾಸಕರು, ಟಿಬಿ ಬೋರ್ಡ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಜಲಾಶಯಕ್ಕೆ ಮಂಗಳವಾರ ಭೇಟಿ ನೀಡದ್ದಾರೆ ಸಿಎಂ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು, ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Tungabhadra Dam
ತುಂಗಭದ್ರಾ ಜಲಾಶಯ

ಕೊಪ್ಪಳ / ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಒಂದೇ ಗೇಟ್‌ನಿಂದ 35 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗಿರುವುಸಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಸಂಪೂರ್ಣ ಭರ್ತಿಯಾಗಿದ್ದ ಜಲಾಶಯ ಗೇಟ್‌ಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಹೀಗಾಗಿ ತನ್ನಿಂದ ತಾನೇ ಓಪನ್ ಆಗಿದೆ. ಜಲಾಶಯ ಇತಿಹಾಸದಲ್ಲೇ ಗೇಟ್ ಕಿತ್ತೋಗಿರುವುದು ಇದು ಮೊದಲ ಬಾರಿ.

ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು

ಶನಿವಾರ ರಾತ್ರಿ ಗೇಟ್‌ ಓಪನ್‌ ಆಗಿದ್ದು, ಕೂಡಲೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ವಿಜಯನಗರ ಜಿಲ್ಲಾ ಎಸ್‌ಪಿ ಶ್ರೀ ಹರಿಬಾಬು ಬಿ.ಎಲ್‌. ಆಗಮಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾತ್ರವಲ್ಲ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳು, ಅದಿಕಾರಿಗಳು ಅಲರ್ಟ್‌ ಆಗಿದ್ದಾರೆ. ವಿಜಯನಗರ ಶಾಸಕ ಗವಿಯಪ್ಪ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಮಧ್ಯರಾತ್ರಿಯಿಂದಲೇ ಡ್ಯಾಂ ಗೇಟ್ ಬಳಿ ಪೊಲೀಸರು ಜಮಾಯಿಸಿದ್ದು, ಪ್ರವೇಶ ನಿರಾಕರಿಸಲಾಗಿದೆ.

ಜಲಾಶಯದ 20 ಗೇಟ್‌ಗಳಿಂದ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ತಿಳಿಸಿದರು. ʼʼಗೇಟ್ ಕಟ್ ಆಗಿರುವ ಕುರಿತು ಜಲ ಸಂಪನ್ಮೂಲ ಸಚಿವರಿಗೆ ಮಾಹಿತಿ ನೀಡಿಲಾಗಿದೆ. ಮುಖ್ಯಮಂತ್ರಿಗೂ ಮಾಹಿತಿ ನೀಡುವ ಪಯತ್ನ ನಡೆದಿದೆ. ಸುಮಾರು 60 ಟಿಎಂಸಿ ನೀರು ಜಲಾಶಯದಿಂದ ನದಿ ಮೂಲಕ ಹೊರ ಬಿಡಬೇಕಿದೆ. ಇಷ್ಟು ಪ್ರಮಾಣದ ನೀರು ಹೊರ ಹೋಗಲು ನಾಲ್ಕಕ್ಕೂ ಹೆಚ್ಚು ದಿನ ಬೇಕು. ಚೈನ್ ಲಿಂಕ್ ಕಟ್ ಆಗಿರುವ ಗೇಟ್ ಸರಿಪಡಿಸುವ ಬಗ್ಗೆ ವಿಶೇಷ ತಾಂತ್ರಿಕ ತಂಡ ಆಗಮಿಸಲಿದೆʼʼ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

ತುಂಗಭದ್ರಾ ಜಲಾಶಯದ 19ನೇ ಗೇಟ್ ಸಂಪೂರ್ಣ ಡ್ಯಾಮೇಜ್ ಆಗಿರುವ ಸುದ್ದಿ ತಿಳಿಯುತ್ತಲೇ ವಿಜಯನಗರ ಶಾಸಕ ಗವಿಯಪ್ಪ ಅವರು ಸ್ವತಃ ಕಾರು ಚಲಾಯಿಸಿಕೊಂಡು ಡ್ಯಾಂಗೆ ಬಳಿಗೆ ಮಧ್ಯರಾತ್ರಿಯೇ ಆಗಮಿಸಿದರು. ಸ್ಥಳಕ್ಕೆ ಭೇಟಿ ನೀಡಿದ ವಿಜಯನಗರ ಎಸ್.ಪಿ ಹರಿಬಾಬು ಅವರಿಂದ ಶಾಸಕ ಗವಿಯಪ್ಪ ಮಾಹಿತಿ ಪಡೆದುಕೊಂಡರು.

Continue Reading

ಧಾರವಾಡ

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Assault Case : ಧಾರವಾಡದಲ್ಲಿ ಅಪರಿಚಿತ ಗ್ಯಾಂಗ್‌ವೊಂದು ಚಾಕು ಹಿಡಿದು ಅಂಜುಮನ್‌ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಬೆದರಿಕೆ ಹಾಕಿದೆ. ಕುಟುಂಬಸ್ಥರೊಂದಿಗೆ ಅಸಭ್ಯವಾಗಿ ವರ್ತಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

assault case
Koo

ಧಾರವಾಡ: ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. 10ಕ್ಕೂ ಹೆಚ್ಚು ಅಪರಿಚಿತ ಯುವಕರು ಹಲ್ಲೆಗೆ (assault case) ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಅಪರಿಚಿತ ಗ್ಯಾಂಗ್‌ ಮೊದಲು ಅಂಜುಮನ್ ಸಂಸ್ಥೆಯ ಕಚೇರಿಗೆ ತೆರಳಿ ಹಲ್ಲೆಗೆ ಮುಂದಾಗಿದ್ದಾರೆ. ಆದರೆ ಅಲ್ಲಿ ಇಸ್ಮಾಯಿಲ್‌ ಇಲ್ಲದ ಕಾರಣ ಮನೆಗೆ ನುಗ್ಗಿದ್ದಾರೆ. ಚಾಕು ಹಿಡಿದುಕೊಂಡು ಮನೆಗೆ ನುಗ್ಗಿದ ಯುವಕರು, ಇಸ್ಮಾಯಿಲ್ ತಮಟಗಾರ್ ಮನೆಯಲ್ಲಿ ಇಲ್ಲದ ಕಾರಣ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಇಸ್ಮಾಯಿಲ್ ಕೊಲ್ಲಲು ಬಂದಿದ್ದೇವೆ ಎಂದು ಕಿರುಚಾಡುತ್ತಿದ್ದರಂತೆ. ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ ಹಲ್ಲೆಗೆ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಸದ್ಯ ಇಸ್ಮಾಯಿಲ್ ಇಲ್ಲದ ಕಾರಣಕ್ಕೆ ಮನೆಯವರೊಂದಿಗೆ ಜಗಳ ತೆಗೆದಿದ್ದಾರೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಗೂಂಡಾಗಿರಿ (Assault Case) ತೋರಿಸಿದ್ದಾನೆ. ಕಾರು ಚಾಲಕನ ಮುಖಕ್ಕೆ ಉಗಿದು ಬಳಿಕ ಕಾರಿನ ಮಿರರ್‌ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಮಾರತಹಳ್ಳಿಯ ಯಮಲೂರು ಸಿಗ್ನಲ್ ಬಳಿ ಆಗಸ್ಟ್ 5ರಂದು ಈ ಘಟನೆ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಕಾರು ಚಾಲಕ ಹಾಗೂ ಆಟೋ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಕಾರು ಚಾಲಕ ವಿಡಿಯೊ ರೆಕಾರ್ಡ್‌ ಮಾಡುತ್ತಿರುವುದನ್ನು ನೋಡಿದ ಆತ ಆಟೋದಿಂದ ಇಳಿದು ಬಂದವನೇ ಅವಾಚ್ಯ ಶಬ್ಧಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ಬಳಿಕ ಕಾರು ಚಾಲಕ ಮುಖಕ್ಕೆ ಉಗಿದು, ಕಾರಿಗೆ ಹೊಡೆದು, ಮಿರರ್‌ ಕಿತ್ತು ಹಾಕಿದ್ದಾನೆ.

ಕಾರು ಚಾಲಕ ಅಲೆಕ್ಸ್ ಬೋಬಿ ವೆಂಪಲ ಎಂಬಾತ ಈ ಸಂಬಂಧ ದೂರು ನೀಡಿದ್ದರು. ಆಟೋ ಚಾಲಕನ ಅನುಚಿತ ವರ್ತನೆ ಬಗ್ಗೆ ಎಚ್ಎಲ್‌ಎಲ್ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಕಾರು ಚಾಲಕ‌ ದೂರಿನ ಮೇಲೆ ಆಟೋ ಚಾಲಕನ ಪತ್ತೆ ಮಾಡಿ ಪೊಲೀಸರು ಬಂಧಿಸಿದ್ದಾರೆ. ಚಾಲಕನ ವಿರುದ್ಧ ಬಿ.ಎನ್.ಎಸ್ ಸೆಕ್ಷನ್ 126(2), 324(4), 351(2), 352 ಅಡಿ ಎಫ್.ಐ.ಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Murder Case : ತುಮಕೂರಿನಲ್ಲಿ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ದುಷ್ಕರ್ಮಿಗಳು ಚಿನ್ನಾಭರಣ ಕದ್ದು ಪರಾರಿ ಆಗಿದ್ದಾರೆ. ಆನೇಕಲ್‌ನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

murder case
Koo

ತುಮಕೂರು/ಬೆಂಗಳೂರು ಗ್ರಾಮಾಂತರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವೃದ್ಧೆಯೊಬ್ಬರ ಬರ್ಬರ (Murder Case) ಕೊಲೆಯಾಗಿದೆ. ಮದ್ದಮ್ಮ (68) ಮೃತ ದುರ್ದೈವಿ. ತುಮಕೂರಿನ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ.

ಮದ್ದಮ್ಮ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿಕೊಂಡು ರಾತ್ರಿ ಮನೆಗೆ ತೆರಳುತ್ತಿದ್ದರು. ಈ ವೇಳೆ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ನಂತರ ಆಕೆಯ ಮೈ ಮೇಲೆ ಇದ್ದ ಚಿನ್ನದ ಸರ ಕದ್ದಿದ್ದಾರೆ. ಬಳಿಕ ಶವವನ್ನು ನಿರ್ಮಾಣ ಹಂತದ ಕಟ್ಟಡದ ಬಳಿ ಎಸೆದು ಪರಾರಿ ಆಗಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಿರಾ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

ಆನೇಕಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಕೊಣನಕುಂಟೆ ನಿವಾಸಿ ಅಮರನಾಥ (43) ಮೃತ ದುರ್ದೈವಿ.

ಅಮರನಾಥ ಹೊಸ ಪಂಚೆ ಖರೀದಿಸಿ ಅದರಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Teachers Protest: ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ.

VISTARANEWS.COM


on

Teachers Protest
Koo

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ಸಮರ ಸಾರಿದ್ದಾರೆ. ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲಾಖೆ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಭಾಗಿಯಾಗುವ ಸಾಧ್ಯತೆ ಇದೆ. ಇತ್ತ ನಾಳೆ ಶಾಲೆ ಬಂದ್ ಮಾಡದಂತೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಆದೇಶಕ್ಕೂ ಕ್ಯಾರೆ ಎನ್ನದೇ 1.30 ಲಕ್ಷ ಶಿಕ್ಷಕರಿಂದ ಪ್ರತಿಭಟನ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ನಾಗೇಶ್ ಮಾಹಿತಿ ನೀಡಿದ್ದಾರೆ.

ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. 2016ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು ಎಂಬುದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯಾಗಿದೆ.

ಇದನ್ನೂ ಓದಿ | Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು, ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು, ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

Continue Reading
Advertisement
ವಿಜಯನಗರ5 mins ago

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

assault case
ಧಾರವಾಡ40 mins ago

Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

Serial Killer
ದೇಶ59 mins ago

Serial Killer: ಚಿಕ್ಕಮ್ಮನ ಮೇಲಿನ ದ್ವೇಷಕ್ಕೆ 9 ಅಮಾಯಕ ಮಹಿಳೆಯರನ್ನು ಕೊಂದ! ಇಲ್ಲಿದೆ ವಿಲಕ್ಷಣ ಹಂತಕನ unusual story!

Kannada New Movie Gopilola cinema Song Out
ಸ್ಯಾಂಡಲ್ ವುಡ್59 mins ago

Kannada New Movie: `ಗೋಪಿಲೋಲ’ ಸಿನಿಮಾದ ಎರಡನೇ ಹಾಡು ರಿಲೀಸ್ !

Job Alert
ಉದ್ಯೋಗ1 hour ago

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

murder case
ತುಮಕೂರು1 hour ago

Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

Abhinav Bindra
ಕ್ರೀಡೆ1 hour ago

Abhinav Bindra: ‘ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ

Teachers Protest
ಕರ್ನಾಟಕ1 hour ago

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Bear attack
ಹಾಸನ2 hours ago

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Viral Video
ವೈರಲ್ ನ್ಯೂಸ್2 hours ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌