Site icon Vistara News

Road Accident : ಸವಾರನ ಎದೆಗೆ ಅಪ್ಪಳಿಸಿತ್ತು ಮತ್ತೊಂದು ಬೈಕ್‌!

Bike Accident

ಬೆಂಗಳೂರು: ಜಸ್ಟ್‌ 20 ಸೆಕೆಂಡ್‌ನಲ್ಲೇ ಸವಾರನ ಪ್ರಾಣಪಕ್ಷಿ ಹಾರಿ ಹೋಗಿದೆ. ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರನ ಎದೆಗೆ ನೇರವಾಗಿ ಬೈಕ್‌ (Road Accident) ಅಪ್ಪಳಿಸಿದೆ. ಪರಿಣಾಮ ಆನಂದ್ (26) ಎಂಬಾತ ಮೃತಪಟ್ಟಿದ್ದಾನೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ (cctv footage) ಸೆರೆಯಾಗಿದೆ. ನಿನ್ನೆ ಭಾನುವಾರ (ಜು.9) ಮಧ್ಯಾಹ್ನ 12.50ರ ಸುಮಾರಿಗೆ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಳ್ಳಿ ರಸ್ತೆಯಲ್ಲಿ ನಡೆದಿದೆ.

ರಸ್ತೆ ಬದಿಯಲ್ಲಿ ನಿಂತಿದ್ದ ಆನಂದ್‌ ಬೈಕ್‌ ಏರಿದವರೇ ಏಕಾಏಕಿ ರಸ್ತೆಯ ಮಧ್ಯೆ ಭಾಗಕ್ಕೆ ಬಂದಿದ್ದಾರೆ. ಈ ವೇಳೆ ಎದುರಿಗೆ ವೇಗವಾಗಿ ಬರುತ್ತಿದ್ದ ಮತ್ತೊಂದು ಬೈಕ್‌ ನೇರವಾಗಿ ಆನಂದ್‌ಗೆ ಗುದ್ದಿದೆ. ಪರಿಣಾಮ ಎರಡು ಬೈಕ್‌ನಲ್ಲಿದ್ದ ಮೂವರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಹೆಲ್ಮೆಟ್ ಧರಿಸದ ಆನಂದ್‌ ಡಿಕ್ಕಿಯ ರಭಸಕ್ಕೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ಇದರಿಂದಾಗಿ ತಲೆಗೆ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿದೆ.

ಕೂಡಲೇ ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆನಂದ್‌ ಉಸಿರು ಚೆಲ್ಲಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಸವಾರರಿಗೂ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿ ಮೂಲದ ಆನಂದ್ ಖಾಸಗಿ ಕಂಪನಿಯಲ್ಲಿ ಹೌಸ್ ಕೀಪಿಂಗ್‌ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಡಿಕ್ಕಿ ಹೊಡೆದು ಟೊಮ್ಯಾಟೊ ತೋಟಕ್ಕೆ ನುಗ್ಗಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು (Road accident) ಟೊಮ್ಯಾಟೊ ತೋಟಕ್ಕೆ ನುಗ್ಗಿದ ಘಟನೆ ಕೋಲಾರ ಜಿಲ್ಲೆಯ (Kolara News) ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಕ್ರಾಸ್‌ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು (two bike riders dead) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ತಾಡಿಗೋಳ್ ಗ್ರಾಮದ ಶಂಕರಪ್ಪ ಹಾಗೂ ಮ್ಯಾಕಲಗಡ್ಡ ಗ್ರಾಮದ ಮುನಿಸ್ವಾಮಿ ಎಂದು ಗುರುತಿಸಲಾಗಿದೆ. AP13AC6570 ನಂಬರಿನ ಮಹಿಂದ್ರಾ XUV ಕಾರು ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಕಾರು ಮದನಪಲ್ಲಿ ರಸ್ತೆಯಿಂದ ಬೆಂಗಳೂರಿನ ಕಡೆ ಹೋಗುತ್ತಿದ್ದು, ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ‌. ಕಾರು ಡಿಕ್ಕಿ ಹೊಡದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಬಳಿಕ ಕಾರು ಪಕ್ಕದಲ್ಲಿದ್ದ ಟೊಮ್ಯಾಟೊ ತೋಟಕ್ಕೆ ನುಗ್ಗಿದೆ‌. ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗೌನಿಪಲ್ಲಿ ಪೋಲಿಸರು ಬಂದು ಪರಿಶೀಲನೆ ನಡೆಸಿದರು. ಈ ನಡುವೆ ಕಾರು ಟೊಮ್ಯಾಟೊ ತೋಟಕ್ಕೆ ನುಗ್ಗಿ ಹಾನಿ ಮಾಡಿದ್ದರಿಂದ ರೈತರು ಸಿಟ್ಟಿಗೆದ್ದಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version