Site icon Vistara News

Road Accident | ಖಾಸಗಿ ಬಸ್‌-ಇನ್ನೋವಾ ಕಾರಿನ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

beltangadi accident ಇನ್ನೋವಾ ಕಾರು-ಖಾಸಗಿ ಬಸ್‌ ಅಪಘಾತ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಗಾರ್ಡಾಡಿ ಗ್ರಾಮದ ಮೋಗೆರಡ್ಕದಲ್ಲಿ ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ (Road Accident) ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಡಬಿದಿರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ನೌಷದ್ ಹಾಜಿ (47) ಮತ್ತು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್ (21) ಮೃತರು.

ಮೂಡಬಿದಿರೆಯಿಂದ ಬೆಳ್ತಂಗಡಿ ಕಡೆಗೆ ಇನ್ನೋವಾ ಕಾರು ಬರುತ್ತಿತ್ತು. ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ಬಸ್ ಹೋಗುತ್ತಿತ್ತು. ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ | Road Accident | ನಿಂತಿದ್ದ ಟಿಪ್ಪರ್‌ ಲಾರಿಗೆ ಬೈಕ್‌ ಡಿಕ್ಕಿ; ಬೈಕ್‌ ಸವಾರ ಸಾವು, ಇನ್ನೊಬ್ಬ ಗಂಭೀರ

Exit mobile version