ಬಾಗಲಕೋಟೆ: ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಎರಡು ಟ್ರ್ಯಾಕ್ಟರ್‌ಗಳ ಚಾಲಕ ಹುಚ್ಚಾಟಕ್ಕೆ ಅಪಘಾತ (Road Accident) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಮೂವರ ಕಾಲುಗಳ ಮೂಳೆ ಮುರಿದಿದೆ.
ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಗೋವಿಂದ್ ಪಾಟೀಲ್ (೨೦), ಹನಮಂತ್ ಬೊಮ್ಮಕ್ಕನವರ್ (೨೦) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸದಾಶಿವ ಬೆಳಗಲಿ (೧೮) ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಹನಮಂತ್ ಹುನಸಿಕಟ್ಟಿ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದೆ. ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋದಾಗ ದುರಂತ ಸಂಭವಿಸಿದೆ.
ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಗುದ್ದಿದ್ದರಿಂದ ಡಿಕ್ಕಿ ಹೊಡೆದ ರಭಸಕ್ಕೆ ಮುಂದಿನ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂವರ ಕಾಲಿಗೆ ಫ್ರಾಕ್ಚರ್ ಆಗಿದ್ದು, ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಧೋಳ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ಹೋಗಿ ನಾವಲಗಿ ಗ್ರಾಮಕ್ಕೆ ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಡಬಲ್ ಟ್ರ್ಯಾಲಿ ಹೊಂದಿತ್ತು.
ಇದನ್ನೂ ಓದಿ | Bomb threat : ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ