Site icon Vistara News

Road Accident: ಜಗಳೂರು ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಎಎಸ್‌ಐ ಮೃತ್ಯು

Road Accident between two bikes near Jagalur ASI dies

ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ (Road Accident) ಎಎಸ್‌ಐ ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ ಶಬೀರ್ ಹುಸೇನ್ (59) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರು ಮಗಳ ಮನೆಗೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಎಎಸ್ಐ ಶಬೀರ್ ಹುಸೇನ್ ಅವರು ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಾಳಾಪುರದಲ್ಲಿ ನಡೆದಿದ್ದ ಗಲಾಟೆ ಸಂಬಂಧ ತನಿಖೆಗೆ ಆಗಮಿಸಿದ್ದರು. ಈ ಗಲಾಟೆ ವಿಚಾರವಾಗಿ ಮಾಹಿತಿ ಕಲೆ ಹಾಕಲು ಬಂದಿದ್ದರು. ವಿಚಾರಣೆ ಮುಗಿಸಿದ ಬಳಿಕ ಚಿತ್ರದುರ್ಗದಲ್ಲಿನ ಮಗಳ ಮನೆಗೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road accident : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ: ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

ಇನ್ನೊಂದು ಬೈಕಿನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಬ್ಬೀರ್ ಹುಸೇನ್ ಅವರು ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣವನ್ನು ದಾಖಲು ಮಾಡಲಾಗಿದೆ.

ಅಥಣಿ ಘಟನಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ; ಒಬ್ಬ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ಕಂಟೇನರ್ ಹಾಗೂ ಕ್ರೂಸರ್ ವಾಹನದ ಮಧ್ಯೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಒಬ್ಬ ಮೃತಪಟ್ಟಿದ್ದರೆ, ಆರು ಜನರಿಗೆ ಗಾಯಗಳಾಗಿವೆ. ಎಲ್ಲರೂ ದೇವರ ದರ್ಶನ ಪಡೆದುಕೊಂಡ ವಾಪಸ್‌ ಆಗುವಾಗ ಅಪಘಾತ ಸಂಭವಿಸಿದೆ.

ವಿಜಯಪುರ ಸಿಂದಗಿ ತಾಲೂಕಿನ ಚಿಕ್ಕ ಯರಗಲ್ಲ (ಕೇಡಿ) ಗ್ರಾಮಸ್ಥರು ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ದೇವಕಿ ನಿಂಗಣ್ಣ ಕೀಚಡಿ (೬೫) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಗಂಭೀರವಾಗಿ ಗಾಯಗೊಂಡ ಮೂವರನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದರೆ, ಇನ್ನುಳಿದ ಗಾಯಾಳುಗಳಿಗೆ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದುಕೊಂಡು ಎಲ್ಲರೂ ವಾಪಸಾಗುತ್ತಿದ್ದರು. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Agniveer Recruitment: ಅಗ್ನಿವೀರ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ, ಏನಿದು?

ಅಪಘಾತವಾದ ಕೂಡಲೇ ಸಮೀಪದಲ್ಲಿದ್ದ ನಾಗರಿಕರು ರಕ್ಷಣೆಗೆ ದಾವಿಸಿದ್ದಾರೆ. ಕೂಡಲೇ ಪೊಲೀಸರಿಗೆ ಹಾಗೂ ಆಂಬ್ಯುಲೆನ್ಸ್‌ಗೆ ಮಾಹಿತಿ ಮುಟ್ಟಿಸಲಾಗಿದೆ. ತಕ್ಷಣವೇ ಆಂಬ್ಯುಲೆನ್ಸ್‌ ವ್ಯವಸ್ಥೆಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

Exit mobile version