Road Accident | ಡಿವೈಡರ್‌ಗೆ ಬೈಕ್‌ ಡಿಕ್ಕಿ; ಲಾರಿ ಹರಿದು ಸವಾರ ಸಾವು - Vistara News

ಕರ್ನಾಟಕ

Road Accident | ಡಿವೈಡರ್‌ಗೆ ಬೈಕ್‌ ಡಿಕ್ಕಿ; ಲಾರಿ ಹರಿದು ಸವಾರ ಸಾವು

ರಸ್ತೆ ಅಪಘಾತವೊಂದರಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರರೊಬ್ಬರಿಗೆ ಗಂಭೀರ (Road Accident) ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ.

VISTARANEWS.COM


on

Accident
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಇಲ್ಲಿನ ಯಲಬುರ್ಗಾ ತಾಲೂಕಿನ ಹುಣಿಸ್ಯಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ (Road Accident) ಮೃತಪಟ್ಟಿದ್ದು, ಹಿಂಬದಿ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತರಲಕಟ್ಟಿ ಗ್ರಾಮದ ಹನುಮಂತಪ್ಪ ಶೀಲಿ (43) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿ. ಹನುಮಂತಪ್ಪ‌ ಮೇಟಿ (46) ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನುಮಂತಪ್ಪ ಶೀಲಿ ಹಾಗೂ ಹನುಮಂತಪ್ಪ ಮೇಟಿ ಬೈಕ್‌ನಲ್ಲಿ ತೆರಳುವಾಗ ಕಾಣದೇ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಎದುರಿನಿಂದ ಬಂದ ಲಾರಿಯೊಂದು ಮೈಮೇಲೆ ಹಾಯ್ದು ಶೀಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಮೇಟಿ ಅವರಿಗೆ ಗಂಭೀರ ಗಾಯಗಳಾಗಿವೆ. ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident | ಬೈಕ್‌-ಮಿನಿ ಬಸ್‌ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

Prajwal Revanna Case: ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಪ್ರಜ್ವಲ್‌ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

VISTARANEWS.COM


on

Prajwal Revanna Case Prajwal likely to arrive in Bengaluru today SIT decides to arrest him at airport
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ವಿಜಯಪುರ

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Accident News : ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಇಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ವಿಜಯಪುರದಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟರೆ, ಮೈಸೂರಲ್ಲಿ ರೈತರೊಬ್ಬರು ವಿದ್ಯುತ್‌ ತಂತಿ ತುಳಿದು ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

Accident News Drowned in water
Koo

ವಿಜಯಪುರ: ವಿಜಯಪುರ ತಾಲೂಕಿನ ಮಖಣಾಪುರ ಗ್ರಾಮದಲ್ಲಿ ಸ್ನೇಹಿತರ ಜತೆಗೆ ಕೆರೆಯಲ್ಲಿ (Drowned in water) ಈಜಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ (Accident News) ಮೃತಪಟ್ಟಿದ್ದಾರೆ. ರಾಜಶೇಖರ (37) ಮೃತ ದುರ್ದೈವಿ.

ವಿಜಯಪುರದಲ್ಲಿ ರಣ ಬಿಸಿಲಿನಿಂದ ಸೆಕೆ ಹೆಚ್ಚಾಗಿದ್ದಕ್ಕೆ ರಾಜಶೇಖರ ಮಖಣಾಪುರ ಗ್ರಾಮದಲ್ಲಿನ ಕೆರೆಯಲ್ಲಿ ಈಜಲು ಹೋಗಿದ್ದರು. ಎಂಟು ಮಂದಿ ಸ್ನೇಹಿತರ ಜತೆಯಾಗಿ ಕೆರೆಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ.

ಕೆರೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ರಾಜಶೇಖರ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಜತೆಗೆ ಇದ್ದವರು ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನ ಆಗಲಿಲ್ಲ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಮೈಸೂರಲ್ಲಿ ವಿದ್ಯುತ್ ತಂತಿ ತುಳಿದು ರೈತ ಸಾವು

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ರೈತರಿಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ರಾಚನಾಯಕ (70) ಮೃತ ದುರ್ದೈವಿ. ಮೇದಿನಿ ಗ್ರಾಮದ ನಿವಾಸಿ ರಾಚನಾಯಕ ಅವರು ಗದ್ದೆಗೆ ನೀರು ಹಾಯಿಸಲು ಹೋಗಿದ್ದರು.

ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದಿತ್ತು. ಆದರೆ ಇದನ್ನು ಗಮನಿಸಿದ ರಾಚನಾಯಕ ವಿದ್ಯುತ್ ತುಳಿದಿದ್ದಾರೆ. ದಿಢೀರ್‌ ವಿದ್ಯುತ್‌ ಪ್ರವಹಿಸಿದ್ದು ಕ್ಷಣಾರ್ಧದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಲಕಾಡು ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder case : ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

ಸಡನ್‌ ಬ್ರೇಕ್‌ಗೆ ಸರಣಿ ಅಪಘಾತ

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 5 ಕಾರುಗಳು ಜಖಂಗೊಂಡಿವೆ. ಕಾರೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬಂದ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿಯಾಗಿವೆ. ಸರಣಿ ಅಪಘಾತದಿಂದ 1 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

accident News

ಹೆದ್ದಾರಿಯಲ್ಲಿ ಪಲ್ಟಿಯೊಡೆದ ಪೆಟ್ರೋಲ್ ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಮುಗುಚಿ ಬಿದ್ದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಪೆಟ್ರೋಲ್ ಸೋರಿಕೆಯಾಗಿತ್ತು.

ಕೂಡಲೇ ಸ್ಥಳಕ್ಕಾಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಮಗುಚಿ ಬಿದ್ದ ಟ್ಯಾಂಕರ್ ಕ್ರೈನ್ ಮೂಲಕ ಮೇಲೆತ್ತಿದ್ದರು. ಇನ್ನೂ ರಸ್ತೆಯಲ್ಲಿ ಅಪಾರ ಪ್ರಮಾಣದಲ್ಲಿ ಸೋರಿಕೆಯಾಗಿದ್ದ ಪೆಟ್ರೋಲ್ ತೆರವು ಮಾಡಲಾಯಿತು. ಮಂಗಳೂರಿನಿಂದ ಅತ್ತಿಬೆಲೆ ಕಡೆಗೆ ಬರುತ್ತಿದ್ದ ಟ್ಯಾಂಕರ್‌ ಹೆದ್ದಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Vijay Sankeshwar: ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Vijay Sankeshwar
Koo

ಹುಬ್ಬಳ್ಳಿ: 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ (Narendra Modi) ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ (Vijay Sankeshwar) ಟೀಕಿಸಿದರು.

ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, 2014ರಲ್ಲಿ ಇನ್ನೊಂದೇ ತಿಂಗಳು ಕಳೆದಿದ್ದರೂ ಯುಪಿಎ ಕೈಯಲ್ಲಿ ದೇಶ ಅಧೋಗತಿಗೆ ಹೋಗುತ್ತಿತ್ತು ಎಂದು ಹೇಳಿದರು.

ಯುಪಿಎ ಆಡಳಿತದ ಕೊನೇ ಗಳಿಗೆಯಲ್ಲಿ ದೇಶದ ತೈಲ ಸಂಗ್ರಹ ಮುಗಿದೇ ಹೋಗಿತ್ತು. ಸರ್ಕಾರದ ಮೇಲೆ ಸಾಲದ ಹೊರೆ ಬಿದ್ದಿತ್ತು. ಈ ರೀತಿ ನರೇಂದ್ರ ಮೋದಿ ಅವರ ಕೈಗೆ ಅಂದು ಕಾಂಗ್ರೆಸ್ ಖಾಲಿ ಚೊಂಬನ್ನೇ ಕೊಟ್ಟಿದ್ದು ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ ತೈಲ ರಾಷ್ಟ್ರಗಳಿಗೆ ದಯವಿಟ್ಟು ಪೆಟ್ರೋಲಿಯಂ ಉತ್ಪನ್ನ ನಿಲ್ಲಿಸಬೇಡಿ ಎಂದು ಮನವಿ ಮಾಡಿದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಂಥ ದಯನೀಯ ಸ್ಥಿತಿ ದೇಶಕ್ಕಿಲ್ಲ ಎಂದು ಹೇಳಿದರು.

ಅನೇಕ ಸುಧಾರಣೆಗಳ ಮೂಲಕ ದೇಶದಲ್ಲಿ ಶಾಂತಿ ನೆಲೆಸುವಂತೆ ಮೋದಿ ಮಾಡಿದ್ದಾರೆ. ಆದರೆ ಯುಪಿಎ ಕಾಲದ ಇಟಲಿ ಮೇಡಂ, ಮೌನಿ ಬಾಬಾ ಆಡಳಿತದಲ್ಲಿ ಭಾರತದಲ್ಲಿ ಯಾವುದೇ ಸಾಧನೆ ಆಗಲಿಲ್ಲ ಎಂದರು. ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ಮೋದಿ ನಮ್ಮ ಪ್ರಧಾನಿ ಮಾತ್ರವಲ್ಲ, ಜಗತ್ತಿನ ನಾಯಕರಾಗಿ ಎತ್ತರಕ್ಕೆ ಬೆಳೆದಿದ್ದಾರೆ ಎಂದು ಸಂಕೇಶ್ವರ ಬಣ್ಣಿಸಿದರು. ಈ ಲೋಕ ಕದನವನ್ನು ವಿಶ್ವದ ರಾಷ್ಟ್ರಗಳು ಬಹಳ ಕುತೂಹಲದಿಂದ ನೋಡುತ್ತಿವೆ. ಹಾಗಾಗಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲಿಸಬೇಕು ಎಂದು ಕರೆ ನೀಡಿದರು.

ಸಂವಿಧಾನ ಬದಲಾವಣೆ ಇಲ್ಲ

ತಮ್ಮ ಜೀವಿತಾವಧಿಯಲ್ಲಿ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಸ್ವತಃ ಮೋದಿ ಅವರೇ ಹೇಳಿದ್ದಾರೆ. ಆದರೂ ಚುನಾವಣೆ ಬಂದಾಗ ರಾಹುಲ್​ ಗಾಂಧಿಯಂತವರು ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುತ್ತಾರೆ ಎಂದು ವಿಜಯ ಸಂಕೇಶ್ವರ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಕಾಂಗ್ರೆಸ್ ಸಂವಿಧಾನದ ವಿರುದ್ಧವಾಗಿ ಬರೋಬ್ಬರಿ 82 ಸರ್ಕಾರಗಳನ್ನು ಕೆಡವಿದೆ. ಆದರೆ ಅಟಲ್​ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರು ಒಂದೇ ಒಂದು ಸರ್ಕಾರವನ್ನು ಉರುಳಿಸುವ ಕೆಲಸ ಮಾಡಿಲ್ಲ ಎಂದರು. ದೇಶದ ಹಲವು ರಾಜ್ಯಗಳಲ್ಲಿ ಈಗಲೂ ಅರಾಜಕತೆ ಇದೆ. ಹಾಗಿದ್ದರೂ ಮೋದಿ ಅವರು ಚುನಾಯಿತ ಸರ್ಕಾರ ಕೆಡವದೇ ಸಂವಿಧಾನಕ್ಕೆ ಗೌರವ ತೋರುವ ಔದಾರ್ಯ ತೋರಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

49 ವರ್ಷಗಳ ಕಾಲ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್​ ಆಡಳಿತವೇ ಇತ್ತು. 3 ಬಾರಿ ಜನ ನನಗೆ ಆಶೀರ್ವಾದ ಮಾಡಿದರು. 4ನೇ ಬಾರಿ ಪ್ರಲ್ಹಾದ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಈ ಬಾರಿಯೂ ಗೆಲುವು ಅವರದ್ದೇ ಆಗಬೇಕು ಎಂದು ಕೋರಿದರು.

ಸರಳ ವ್ಯಕ್ತಿ ಜೋಶಿ

ಪ್ರಲ್ಹಾದ ಜೋಶಿ ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದರೂ ಯಾವುದೇ ಹಮ್ಮು-ಬಿಮ್ಮು ಇಲ್ಲದ ಸರಳ ವ್ಯಕ್ತಿ ಆಗಿದ್ದಾರೆ. ಎಲ್ಲ ಕಾರ್ಯಕರ್ತರು ಮತ್ತು ಜನರೊಂದಿಗೆ ಬೆರೆಯುವ ವ್ಯಕ್ತಿತ್ವದವರು ಎಂದು ಹೊಗಳಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಬಿಜೆಪಿಯ ಈ ನಿಷ್ಠಾವಂತ ನಾಯಕ ಪ್ರಲ್ಹಾದ ಜೋಶಿ ಅವರನ್ನು ಈ ಬಾರಿ 3.5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಡಾ. ಸಂಕೇಶ್ವರ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಎಪಿಎಂಸಿ ಮಾಜಿ ಸದಸ್ಯ ಚನ್ನು ಹೊಸಮನಿ, ಜಿಪಂ ಮಾಜಿ ಅಧ್ಯಕ್ಷ ಟಿ.ಜಿ. ಬಾಳಣ್ಣವರ, ಶಾಸಕ ಎಂ.ಆರ್​.ಪಾಟೀಲ, ವಿಆರ್​ಎಲ್​ ಸಂಸ್ಥೆ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Gold Rate Today: ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ (Gold Market) ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸ್ಥಿರವಾಗಿದೆ. ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ (Gold price today)ಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,585ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹52,680 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹65,850 ಮತ್ತು ₹6,58,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,183 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,464 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹71,830 ಮತ್ತು ₹7,18,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.60, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹826ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,260 ಮತ್ತು 1 ಕಿಲೋಗ್ರಾಂಗೆ ₹82,600 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,00071,980
ಮುಂಬಯಿ65,85071,830
ಬೆಂಗಳೂರು65,85071,830
ಚೆನ್ನೈ66,00072,000

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?


ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ:Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Prajwal Revanna Case Prajwal likely to arrive in Bengaluru today SIT decides to arrest him at airport
ಕ್ರೈಂ6 mins ago

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

viral news
ಕ್ರೀಡೆ22 mins ago

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

Kareena Kapoor appointed Unicef India National Ambassador
ಸಿನಿಮಾ23 mins ago

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Accident News Drowned in water
ವಿಜಯಪುರ35 mins ago

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Sunidhi Chauhan audience member throws bottle at her
ಬಾಲಿವುಡ್48 mins ago

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Vijay Sankeshwar
Lok Sabha Election 202449 mins ago

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Gold Rate
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Virat- Anushka
ಕ್ರೀಡೆ1 hour ago

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Jyotika Trolled For Claiming Online Private Voting
ಕಾಲಿವುಡ್1 hour ago

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Prajwal Revanna Case
ಕರ್ನಾಟಕ1 hour ago

Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌