Site icon Vistara News

Road Accident: ವಡಗೆರೆ ಶಾಲೆ ಬಳಿ ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ಸಾವು

Accident near Tumkur

accident

ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ ಬೈಕ್ ಅಪಘಾತವಾಗಿ (Accident) ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ.ಕೆ. (24) ಎಂದು ಗುರುತಿಸಲಾಗಿದೆ.

ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್‌ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದ್ದು, ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Exit mobile version