Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ - Vistara News

ಕರ್ನಾಟಕ

Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ

Road Accident : ಜಾಲಿ ರೈಡ್‌ಗೆಂದು ಕೇರಳದಿಂದ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಯುವಕರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ (Davanagere News) ನಡೆದಿದೆ.

VISTARANEWS.COM


on

Bike Accident at NH 54
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ದಾವಣಗೆರೆ (Davanagere News) ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ (NH 54) ತಡೆಗೋಡೆಗೆ ಬೈಕ್‌ ಡಿಕ್ಕಿ (Bike Accident)ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಿ ರೆಡ್‌ಗೆಂದು ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ (Road Accident) ಪ್ರಾಣ ಕಳೆದುಕೊಂಡಿದ್ದಾರೆ.

Car hits bike in Nh 54
ಬೈಕ್‌ಗೆ ಕಾರು ಡಿಕ್ಕಿ

ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ಪ್ರಾಥಮಿಕ ಮಾಹಿತಿ‌ ನೀಡಿದ್ದಾರೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

ರಸ್ತೆಯ ಮಧ್ಯೆ ಬಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Robbery Case: ಬಸ್‌ ಸಿಗಲಿಲ್ಲ ಅಂತ ಸಿಕ್ಕ ಕಾರ್‌ನಲ್ಲಿ ಡ್ರಾಪ್‌ ತಗೋತೀರಾ? ದರೋಡೆ ಆ‌ಗ್ತೀರಿ ಹುಷಾರ್!

ನಿಲ್ದಾಣದ ಬಳಿ ನಿಂತಿದ್ದ ಮಕ್ಕಳ ಮೇಲೆಯೇ ನುಗ್ಗಿದ ಬಸ್‌; ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru News) ಭೀಕರ ರಸ್ತೆ ದುರಂತವೊಂದು (Road accident) ಸಂಭವಿಸಿದೆ. ವಿಪರೀತ ವೇಗದಲ್ಲಿ ಸಾಗುತ್ತಿದ್ದ ಬಸ್‌ (Overspeading bus) ಒಂದು ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಕ್ಕಳ (Bus Rams into Children) ಮೇಲೆಯೇ ಹರಿದಿದೆ. ಒಮ್ಮಿಂದೊಮ್ಮೆಗೇ ನುಗ್ಗಿದ ಬಸ್ಸಿನಡಿ ಸಿಲುಕಿದ ಮಕ್ಕಳಲ್ಲಿ ಇಬ್ಬರ ಸ್ಥಿತಿ (Two childrens seriuosly injured) ಗಂಭೀರವಾಗಿದೆ.

ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಮತ್ತು ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

Accident at Tarikere

ಮಕ್ಕಳು ಶಾಲೆಗೆ ಹೋಗುವುದಕ್ಕಾಗಿ ಬಸ್‌ ನಿಲ್ದಾಣದ ಬಳಿ ನಿಂತಿದ್ದರು. ಆಗ ಎಂಡಿಎಸ್‌ ಎಂಡ್‌ ಸನ್ಸ್‌ ಕಂಪನಿಗೆ ಸೇರಿದ ಖಾಸಗಿ ಬಸ್‌ ಎಂದಿನಂತೆ ಬಂದಿತ್ತು. ಆದರೆ, ಅತಿಯಾದ ವೇಗದಲ್ಲಿದ್ದ ಪರಿಣಾಮವಾಗಿ ಮಕ್ಕಳ ಎದುರು ನಿಲ್ಲಬೇಕಾಗಿದ್ದ ಬಸ್‌ ಅವರ ಮೇಲೆಯೇ ಹರಿದಿದೆ.

ಕೊನೆಗೆ ಈ ಬಸ್‌ ಪಕ್ಕದ ಮನೆಗಳತ್ತ ಧಾವಿಸಿದ್ದು ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಚಾವಣಿ ಸಂಪೂರ್ಣ ಹಾನಿಯಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದರು.

Accident at Tarikere

ಈ ನಡುವೆ ಬಸ್ಸಿನಡಿ ಸಿಲುಕಿ ಕೆಲವು ಮಕ್ಕಳು ಗಾಯಗೊಂಡಿದ್ದು, ಅವರ ಪೈಕಿ ತುಳಸಿ (15), ನಿವೇದಿತ (14) ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ನಡುವೆ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಈ ಭಾಗದಲ್ಲಿ ಖಾಸಗಿ ಬಸ್‌ಗಳು ವಿಪರೀತ ವೇಗದಿಂದ ಸಂಚರಿಸುತ್ತಿದ್ದು, ಇದರ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾರೂ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Electric Bike Taxi: ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

VISTARANEWS.COM


on

electric bike taxi
Koo

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ʼಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ಗಳನ್ನು ನಿಷೇಧಿಸಿ (Electric Bike Taxi) ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ನಿನ್ನೆ ಶಾಂತಿನಗರ ಸಾರಿಗೆ ಆಯುಕ್ತರ (Transport commissioner) ಕಚೇರಿಯಲ್ಲಿ ಖಾಸಗಿ ಸಾರಿಗೆ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಸಂಘಟನೆಗಳ ಒತ್ತಾಯದ ಬಳಿಕ ಇಂದು ಹಾಗೂ ನಾಳೆ ಕಾರ್ಯಾಚರಣೆಗೆ ಇಳಿಯಲಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಎಲೆಕ್ಟ್ರಿಕ್ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಮತ್ತು ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಬಗ್ಗೆ 11 ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದು, ನಗರದ ನಾನಾ ಭಾಗಗಳಲ್ಲಿರುವ ಅನಧಿಕೃತ ಬೈಕ್ ಟ್ಯಾಕ್ಸಿಗಳಿಗೆ ಬಿಸಿ ಮುಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಮೂಲಕ ಆಟೋ, ಕ್ಯಾಬ್‌ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್‌ ಮಾಡಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಜು.5ರಿಂದ ಕಡ್ಡಾಯವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ಹೊರಡಿಸಿರುವ ನೋಟೀಸ್‌ ಹೀಗಿದೆ:

“ಸರ್ಕಾರದ 14-07-2021ರ ಸೂಚನೆಯನ್ವಯ ಸಾರ್ವಜನಿಕ ಸಾರಿಗೆಗಾಗಿ ಮೊದಲ ಮತ್ತು ಕೊನೆಯ ಹಂತದ ಸಾರಿಗೆ ಸಂಪರ್ಕವನ್ನು ಕಲ್ಪಿಸುವ ಮತ್ತು ಸ್ವಯಂ ಉದ್ಯೋಗ ಅವಕಾಶವನ್ನು ಒದಗಿಸುವ ಉದ್ದೇಶದಿಂದ, ಮೋಟಾರು ವಾಹನ ಕಾಯ್ದೆ 1988ರ (1998ರ ಕೇಂದ್ರ ಅಧಿನಿಯಮ 59)ರ ಕಲಂ 2ರ ಉಪಕಲಂ (1) ಕ್ರಮ ಸಂಖ್ಯೆ: 38(ಎ) ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ರಾಜ್ಯದಲ್ಲಿನ ಎಲ್ಲಾ ನಗರ ಪ್ರದೇಶಗಳಿಗೆ ಅನ್ವಯಿಸುವಂತೆ “ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021″ನ್ನು ಜಾರಿಗೆ ತರಲಾಗಿತ್ತು.

ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯ ಅಗತ್ಯತೆ ಮತ್ತು ಜಾರಿಯ ಬಗ್ಗೆ ವ್ಯವಸ್ಥಾಪಕ ನಿರ್ದೇಶಕರು, BMRCL ರವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಬೈಕ್ ಟ್ಯಾಕ್ಸಿ ಯೋಜನೆಗೆ ಸಂಬಂಧಿಸಿದಂತೆ ವರದಿಯು ಪೂರಕವಾಗಿರುವುದಿಲ್ಲವೆಂದು ತಿಳಿಸಿದೆ. ಪ್ರಸ್ತುತ ಕೆಲವು ಖಾಸಗಿ ಆಪ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ಮತ್ತು ಅದರಡಿ ರಚಿತವಾದ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಾರಿಗೇತರ (Non-transport) ದ್ವಿಚಕ್ರ ವಾಹನಗಳನ್ನು ಸಾರಿಗೆ (Transport) ವಾಹನಗಳನ್ನಾಗಿ ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಖಾಸಗಿ ಸಾರಿಗೆ ಕ್ಷೇತ್ರಗಳಲ್ಲಿನ ಇತರೆ ಆಟೋರಿಕ್ಷಾ, ಮ್ಯಾಕ್ಸಿ ಕ್ಯಾಬ್ ಮತ್ತು ಟ್ಯಾಕ್ಸಿ ಸಂಘಗಳು / ಚಾಲಕರುಗಳು, ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಹಲವಾರು ಬಾರಿ ಸಂಘರ್ಷಣೆಗಳು ನಡೆದು, ಮೊಕದ್ದಮೆಗಳು ದಾಖಲಾಗುತ್ತಿರುವುದನ್ನು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಹಾಗೂ ಮಹಿಳೆಯರಿಗೆ ಈ ಯೋಜನೆ ಅಸುರಕ್ಷಿತವಾಗಿರುವುದನ್ನು ಸಹ ಗಮನಿಸಲಾಗಿದೆ. ಸಾರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಗೆ ಮತ್ತು ಪವರ್ತನ ಚಟುವಟಿಕೆಯ ಸಮರ್ಥ ಕಾರ್ಯನಿರ್ವಹಣೆಗೆ ಈ ಯೋಜನೆಯಿಂದ ಕಷ್ಟವಾಗುತ್ತಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ, “ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ 2021″ ನ್ನು ಜಾರಿಗೊಳಿಸಿ ಹೊರಡಿಸಲಾದ ಸರ್ಕಾರದ ಅಧಿಸೂಚನೆ ಸಂಖ್ಯೆ: ಟಿಡಿ 160 ಟಿಡಿಓ 2020, ದಿನಾಂಕ:14-07-2021ನ್ನು ಈ ಮೂಲಕ ರದ್ದುಗೊಳಿಸಿ ಆದೇಶಿಸಿದೆ.”

ಇದನ್ನೂ ಓದಿ: Electric Bike taxi Service : ನಿರ್ಬಂಧ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗೆ ಮಾತ್ರ; ರ‍್ಯಾಪಿಡೊ ಸೇವೆಗೆ ತೊಂದರೆ ಇಲ್ಲ

Continue Reading

ಕರ್ನಾಟಕ

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

SCSP TSP Scheme: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ಶುಕ್ರವಾರ ನಡೆಯಿತು.

VISTARANEWS.COM


on

SCSP TSP Scheme
Koo

ಬೆಂಗಳೂರು: ಎಸ್‌ಸಿ-ಎಸ್‌ಟಿ ಸಮುದಾಯ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ (SCSP TSP Scheme) ಬಿಡುಗಡೆಯಾಗುವ ಅನುದಾನವನ್ನು ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು. ಒಂದು ವೇಳೆ ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಾವು ಮಾತ್ರ. ನಮ್ಮ ಸರ್ಕಾರ ಮಾತ್ರ. 2024-25ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ 99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧಿ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆಇದನ್ನೂ ಓದಿ |

ಸಭೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಗಳು

  • ಇಂದು ನಡೆದ ರಾಜ್ಯ ಪರಿಷತ್‌ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್‌.ಪಿ. / ಟಿಎಸ್‌.ಪಿ. ಅಡಿ ಒಟ್ಟಾರೆ ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ.
  • ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11 ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌.ಸಿ.ಎಸ್‌.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ.
  • ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ.
  • ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಾಗೂ ಬಿಡುಗಡೆಗೆ ಎದುರಾಗಿ ಶೇ. 99.64 ರಷ್ಟು ಸಾಧನೆಯಾಗಿದೆ.
  • ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದೆ ಉಳಿಕೆ (lapse) ಆಗಬಾರದು. ಅದೇ ವರ್ಷ ವೆಚ್ಚವಾಗಬೇಕು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ.
  • ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು.
  • ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ.
  • ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಪರಿಷತ್ತಿನ ಸದಸ್ಯರಾಗಿರುವ ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಲೋಕಸಭಾ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಗೋಯೆಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Continue Reading

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Valmiki Corporation Scam: ಈಗಾಗಲೇ ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ ಮತ್ತು ಅಕೌಟೆಂಟ್ ಪರಶುರಾಮ್ ಬಂಧನವಾಗಿದ್ದಾರೆ.‌ ಜೊತೆಗೆ ಪ್ರಕರಣದ ಕಿಂಗ್ ಪಿನ್ ಸತ್ಯನಾರಾಯಣ ವರ್ಮ, ಸಾಯಿ ತೇಜ ಕೂಡ ಆರೆಸ್ಟ್ ಆಗಿದ್ದಾರೆ. ಅಕ್ರಮವಾಗಿ ಆಂಧ್ರದ ಫಸ್ಟ್ ಬ್ಯಾಂಕ್‌ಗೆ ಹಣ ರವಾನಿಸಿದ ಎಂಡಿ ಹಾಗೂ ಸಚಿವ ನಾಗೇಂದ್ರರ ಪಿಎಸ್ ಆಗಿದ್ದ ದೇವಂದ್ರರನ್ನು ಎಸ್ಐಟಿ ವಿಚಾರಣೆ ನಡೆಸಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ (Valmiki Corporation Scam) ವಿಚಾರಣೆಗೆ ಸಂಬಂಧಿಸಿ ಮಾಜಿ ಸಚಿವ ನಾಗೇಂದ್ರಗೆ (Ex minister Nagendra) ಢವಢವ ಶುರುವಾಗಿದೆ. ನಾಗೇಂದ್ರ ಆಪ್ತ ಕಾರ್ಯದರ್ಶಿಯನ್ನು ಎಸ್ಐಟಿ ತನಿಖೆ (SIT Enquiry) ನಡೆಸುತ್ತಿದ್ದು, ಮುಂದಿನ ಹಂತದಲ್ಲಿ ನಾಗೇಂದ್ರ ಕೂಡ ತನಿಖೆಗೆ ಹಾಜರಾಗಬೇಕಿದೆ.

ಈಗಾಗಲೇ ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ ಮತ್ತು ಅಕೌಟೆಂಟ್ ಪರಶುರಾಮ್ ಬಂಧನವಾಗಿದ್ದಾರೆ.‌ ಜೊತೆಗೆ ಪ್ರಕರಣದ ಕಿಂಗ್ ಪಿನ್ ಸತ್ಯನಾರಾಯಣ ವರ್ಮ, ಸಾಯಿ ತೇಜ ಕೂಡ ಆರೆಸ್ಟ್ ಆಗಿದ್ದಾರೆ. ಅಕ್ರಮವಾಗಿ ಆಂಧ್ರದ ಫಸ್ಟ್ ಬ್ಯಾಂಕ್‌ಗೆ ಹಣ ರವಾನಿಸಿದ ಎಂಡಿ ಹಾಗೂ ಸಚಿವ ನಾಗೇಂದ್ರರ ಪಿಎಸ್ ಆಗಿದ್ದ ದೇವಂದ್ರರನ್ನು ಎಸ್ಐಟಿ ವಿಚಾರಣೆ ನಡೆಸಿದೆ.

ಅಕ್ರಮವಾಗಿ ಕೋಟಿ ಕೋಟಿ ಹಣ ಪಡೆದಿರುವುದಾಗಿ ಸತ್ಯನಾರಾಯಣ ವರ್ಮ ಹೇಳಿದ್ದ. ಹೀಗಾಗಿ ಪಿಎಸ್ ದೇವೇಂದ್ರಪ್ಪಗೆ ಎಸ್ಐಟಿ ನೋಟೀಸ್ ನೀಡಿ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ, ದೇವೇಂದ್ರಪ್ಪಗೆ 4.4 ಕೋಟಿ ಹಣ ನೀಡಿರುವುದು ಬೆಳಕಿಗೆ ಬಂದಿದೆ. ಈ ಹಣದಲ್ಲಿ 4 ಕೋಟಿ ರಿಕವರಿಯಾಗಿದ್ದು, ಇನ್ನೂ ಸುಮಾರು 40 ಲಕ್ಷ ಹಣ ಮರಳಿ ಸಿಗಬೇಕಿದೆ.

ಆದರೆ ಪಿಎಸ್ ದೇವೇಂದ್ರಪ್ಪ ಸೇರಿದಂತೆ ಬಂಧಿತ ಆರೋಪಿಗಳು ಮಾಜಿ ಸಚಿವ ನಾಗೇಂದ್ರ ಹೆಸರನ್ನು ಎಲ್ಲೂ ಬಾಯಿ ಬಿಟ್ಟಿಲ್ಲ. ನಿನ್ನೆ ಸಿಐಡಿ ದೇವೇಂದ್ರಪ್ಪ ವಿಚಾರಣೆ ನಡೆಸಿದೆ. ಮತ್ತೆ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ. ಇಂದು ನಿಗಮದ ಅಧ್ಯಕ್ಷ ಗದ್ದಲ್ ಪಿಎಸ್ ಹಂಪಣ್ಣಗೂ‌‌‌ ಎಸ್ಐಟಿ ಬುಲಾವ್‌ ಮಾಡಿದೆ. ನೋಟೀಸ್ ಹಿನ್ನಲೆ ಇಂದು ಹಂಪಣ್ಣ ವಿಚಾರಣೆಗೆ ಹಾಜರಾಗಬೇಕಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಶಾಸಕರ ಸಭೆಯಲ್ಲಾಗಲೀ, ಕ್ಷೇತ್ರದ ಕಾರ್ಯಕ್ರಮಗಳಲ್ಲಾಗಲೀ ಭಾಗವಹಿಸಿಲ್ಲ. ನಾಗೇಂದ್ರ ನಡೆ ನಿಗೂಢವಾಗಿದ್ದು, ಈ ಪ್ರಕರಣದಿಂದ ಪಾರಾಗುವ ಕಾನೂನು ಸಾಧ್ಯತೆಗಳನ್ನು ವಕೀಲರ ಜತೆ ಸಮಾಲೋಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

28 ಕೋಟಿ ಹಣ ರಿಕವರಿ

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು. ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ ವರ್ಗಾವಣೆ. ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆ.
ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆ.

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Continue Reading
Advertisement
Retirement Panning
ಮನಿ-ಗೈಡ್4 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

electric bike taxi
ಪ್ರಮುಖ ಸುದ್ದಿ21 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ23 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ30 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್44 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ46 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ49 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest54 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ58 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್59 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ46 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌