Site icon Vistara News

Road Accident : ತಡೆಗೋಡೆಗೆ ಬೈಕ್‌ ಡಿಕ್ಕಿ; ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ

Bike Accident at NH 54

ದಾವಣಗೆರೆ: ದಾವಣಗೆರೆ (Davanagere News) ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ (NH 54) ತಡೆಗೋಡೆಗೆ ಬೈಕ್‌ ಡಿಕ್ಕಿ (Bike Accident)ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಿ ರೆಡ್‌ಗೆಂದು ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ (Road Accident) ಪ್ರಾಣ ಕಳೆದುಕೊಂಡಿದ್ದಾರೆ.

ಬೈಕ್‌ಗೆ ಕಾರು ಡಿಕ್ಕಿ

ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ಪ್ರಾಥಮಿಕ ಮಾಹಿತಿ‌ ನೀಡಿದ್ದಾರೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

ರಸ್ತೆಯ ಮಧ್ಯೆ ಬಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಮೂಲದ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Robbery Case: ಬಸ್‌ ಸಿಗಲಿಲ್ಲ ಅಂತ ಸಿಕ್ಕ ಕಾರ್‌ನಲ್ಲಿ ಡ್ರಾಪ್‌ ತಗೋತೀರಾ? ದರೋಡೆ ಆ‌ಗ್ತೀರಿ ಹುಷಾರ್!

ನಿಲ್ದಾಣದ ಬಳಿ ನಿಂತಿದ್ದ ಮಕ್ಕಳ ಮೇಲೆಯೇ ನುಗ್ಗಿದ ಬಸ್‌; ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru News) ಭೀಕರ ರಸ್ತೆ ದುರಂತವೊಂದು (Road accident) ಸಂಭವಿಸಿದೆ. ವಿಪರೀತ ವೇಗದಲ್ಲಿ ಸಾಗುತ್ತಿದ್ದ ಬಸ್‌ (Overspeading bus) ಒಂದು ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಕ್ಕಳ (Bus Rams into Children) ಮೇಲೆಯೇ ಹರಿದಿದೆ. ಒಮ್ಮಿಂದೊಮ್ಮೆಗೇ ನುಗ್ಗಿದ ಬಸ್ಸಿನಡಿ ಸಿಲುಕಿದ ಮಕ್ಕಳಲ್ಲಿ ಇಬ್ಬರ ಸ್ಥಿತಿ (Two childrens seriuosly injured) ಗಂಭೀರವಾಗಿದೆ.

ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಮತ್ತು ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

Accident at Tarikere

ಮಕ್ಕಳು ಶಾಲೆಗೆ ಹೋಗುವುದಕ್ಕಾಗಿ ಬಸ್‌ ನಿಲ್ದಾಣದ ಬಳಿ ನಿಂತಿದ್ದರು. ಆಗ ಎಂಡಿಎಸ್‌ ಎಂಡ್‌ ಸನ್ಸ್‌ ಕಂಪನಿಗೆ ಸೇರಿದ ಖಾಸಗಿ ಬಸ್‌ ಎಂದಿನಂತೆ ಬಂದಿತ್ತು. ಆದರೆ, ಅತಿಯಾದ ವೇಗದಲ್ಲಿದ್ದ ಪರಿಣಾಮವಾಗಿ ಮಕ್ಕಳ ಎದುರು ನಿಲ್ಲಬೇಕಾಗಿದ್ದ ಬಸ್‌ ಅವರ ಮೇಲೆಯೇ ಹರಿದಿದೆ.

ಕೊನೆಗೆ ಈ ಬಸ್‌ ಪಕ್ಕದ ಮನೆಗಳತ್ತ ಧಾವಿಸಿದ್ದು ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಚಾವಣಿ ಸಂಪೂರ್ಣ ಹಾನಿಯಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿದ್ದರು.

Accident at Tarikere

ಈ ನಡುವೆ ಬಸ್ಸಿನಡಿ ಸಿಲುಕಿ ಕೆಲವು ಮಕ್ಕಳು ಗಾಯಗೊಂಡಿದ್ದು, ಅವರ ಪೈಕಿ ತುಳಸಿ (15), ನಿವೇದಿತ (14) ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ನಡುವೆ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಈ ಭಾಗದಲ್ಲಿ ಖಾಸಗಿ ಬಸ್‌ಗಳು ವಿಪರೀತ ವೇಗದಿಂದ ಸಂಚರಿಸುತ್ತಿದ್ದು, ಇದರ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಿದ್ದರೂ ಯಾರೂ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version