Site icon Vistara News

Road accident : ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಬೈಕ್‌, ಇಬ್ಬರೂ ಸವಾರರ ಸ್ಥಳದಲ್ಲೇ ಮೃತ್ಯು

ವಿಜಯಪುರ ಅಪಘಾತ

ವಿಜಯಪುರ: ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ (Road accident ಹಿನ್ನೆಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ ಜೋಡ ಗುಡಿಯ ಬಳಿ ಘಟನೆ ನಡೆದಿದೆ

ಪ್ರಭು ಖ್ವಾಯಗೋಳ (೩೪) ಮತ್ತು ರಾಮಗೊಂಡ ಖ್ವಾಯಗೋಳ (23) ಅವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಬೈಕ್‌ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಅಪಘಾತಕ್ಕೆ ಬೈಕ್ ಸವಾರನ ಅತಿ ವೇಗವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ಇದರ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಾಗಿದೆ. ಬೈಕ್‌ ರಸ್ತೆ ಪಕ್ಕದ ರೇಲಿಂಗ್ಸ್‌ಗಳಿಗೆ ಡಿಕ್ಕಿ ಹೊಡೆದ ರಭಸಕ್ಕೆ ಶವಗಳು ಅದಕ್ಕೇ ನೇತುಹಾಕಿದಂತಾಗಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿಸಂಗಾಪುರ ಗ್ರಾಮದ ಕೆರೆಯಲ್ಲಿ ಸುಮಾರು 40-45 ವಯಸ್ಸಿನ ವ್ಯಕ್ತಿಯ ಶವ ಪತ್ತೆ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ |

Exit mobile version