Site icon Vistara News

Road Accident : ಓವರ್‌ಟೇಕ್‌ ಮಾಡುವಾಗ ಬಸ್‌ಗೆ ಸಿಲುಕಿ ಬೈಕ್‌ ಸವಾರ ಸಾವು

Bike Accident

ಕಾರವಾರ: ಬಸ್‌ ಓವರ್‌ಟೇಕ್‌ ಮಾಡುವಾಗ ಕೆಳಗೆ ಬಿದ್ದ ಸವಾರನ ಮೇಲೆ ಬಸ್‌ ಹರಿದು (Road Accident) ಮೃತಪಟ್ಟಿರುವ ಘಟನೆ ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಘಟ್ಟದಲ್ಲಿ ನಡೆದಿದೆ. ಜೀತೇಂದ್ರ ಗೌಡ ಮೃತ ದುರ್ದೈವಿ.

ಜೀತೇಂದ್ರ ಅಂಕೋಲಾ ತಾಲೂಕಿನ ಶಿರಗುಂಜಿ ಗ್ರಾಮದ ನಿವಾಸಿಯಾಗಿದ್ದು, ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಬಸ್ ಓವರ್‌ಟೇಕ್ ಮಾಡುವಾಗ ಕಂಟೇನರ್ ವಾಹನವೊಂದು ಎದುರಾಗಿದೆ. ಈ ವೇಳೆ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿದ್ದಾನೆ. ಆದರೆ ಈ ವೇಳೆ ಸ್ಕಿಡ್‌ ಆಗಿ ಬಸ್ ಕೆಳಗೆ ಬಿದ್ದು, ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಕಾರವಾರ ಸಂಚಾರಿ ಠಾಣೆ ಪೊಲೀಶರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಣ್ಣ ಪುಟ್ಟ ಗಾಯಗೊಂಡಿರುವ ಸವಾರ

2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಟಿ.ಬಿ.ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಗಿರೀಶ್ ಎಂಬ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ತಲೆ ಹಿಂಭಾಗ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ಕೂಡಲೇ ಸವಾರನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನೋರ್ವ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯವಾಗಿದೆ. ಮಾಯಸಂದ್ರ ಉಪಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version