Road Accident : ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ಸಾವು - Vistara News

ಉತ್ತರ ಕನ್ನಡ

Road Accident : ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ಸಾವು

Independence Day 2023 : 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟ ದಾರುಣ ಘಟನೆ ಕಾರವಾರದಲ್ಲಿ (Karwar News) ನಡೆದಿದೆ.

VISTARANEWS.COM


on

Teacher dead as Bolero hits bike
ಮೃತ ಶಿಕ್ಷಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ್ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ (Road Accident) ಶಿಕ್ಷಕರೊಬ್ಬರು (Govt School Teacher) ಮೃತಪಟ್ಟಿದ್ದಾರೆ. ಹೆಗಡೆ ಗ್ರಾಮದ ನಿವಾಸಿ ಗೋಪಾಲ ಪಟಗಾರ (50) ಮೃತ ದುರ್ದೈವಿ.

ಸ್ವಾತಂತ್ರ್ಯ ದಿನಾಚರಣೆ (Independence Day 2023) ಪ್ರಯುಕ್ತ ಶಾಲೆಯಲ್ಲಿ ಧ್ವಜಾರೋಹಣಕ್ಕೆ ತೆರಳುತ್ತಿದ್ದಾಗ ಶಿಕ್ಷಕನಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದಿದೆ. ಗೋಪಾಲ ಗುಡೇಅಂಗಡಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದರು. ಬೈಕ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಎದುರಿಗೆ ಬಂದ ಬುಲೆರೋ ವಾಹನ ಡಿಕ್ಕಿ ಹೊಡೆದಿದೆ.

ಪರಿಣಾಮ ಗಂಭೀರ ಗಾಯಗೊಂಡು ಶಿಕ್ಷಕ ಗೋಪಾಲ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕುಮಟಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವೀಲಿಂಗ್‌ ಪುಂಡರ ಹುಚ್ಚಾಟಕ್ಕೆ ಸವಾರ ಬಲಿ, ಮತ್ತೊಬ್ಬ ಗಂಭೀರ

ದೇವನಹಳ್ಳಿ: ವೀಲಿಂಗ್ (Wheeling Effect) ಪುಂಡರ ಹಾವಳಿಯಿಂದ ಈಗಾಗಲೇ ಸಾಕಷ್ಟು ಅಪಘಾತಗಳು (road Accident) ನಡೆದಿದೆ. ವೀಲಿಂಗ್‌ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣ ಬಿಟ್ಟಿದ್ದಾನೆ. ನಂದಿಬೆಟ್ಟದ ರಸ್ತೆಯಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ ಆಗಿದೆ. ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತ ದುರ್ದೈವಿ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ರಜೆ ಇರುವುದರಿಂದ ಕೆಲ ವೀಲಿಂಗ್‌ ಪುಂಡರ ಹಾವಳಿ ನಂದಿಬೆಟ್ಟದ ರಸ್ತೆಯಲ್ಲಿ ಹೆಚ್ಚಿದೆ.

Bike wheeling on public place
ರೋಡ್‌ ಮಧ್ಯೆ ವೀಲಿಂಗ್‌ ಪುಂಡರ ಹುಚ್ಚಾಟ

ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಸವಾರ ಸಾವು

ದೇವನಹಳ್ಳಿ ತಾಲೂಕಿನ ಕಾಮೇನಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುನೇಗೌಡ (೪೦) ಮೃತ ದುರ್ದೈವಿ.

Bike wheeling Effect road accident in nandi hills rider dead

ಮುನೇಗೌಡ ಕುಟುಂಬದ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಲೆಗೆ ಹೆಲ್ಮೆಟ್ ಹಾಕದ ಕಾರಣ ಬಲವಾದ ಪೆಟ್ಟಾಗಿ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಸವಾರನಿಗೂ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆ ದಾಖಲು ಮಾಡಲಾಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಉತ್ತರ ಕನ್ನಡ

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿಗಳು

Murder Case : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜತೆಗೆ ಇದ್ದವರೆ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

VISTARANEWS.COM


on

Murder case

ಉತ್ತರ ಕನ್ನಡ : ಗಾರೆ ಕೆಲಸಕ್ಕೆ ಬಂದಿದ್ದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ (Murder Case) ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಸರ್ಕಾರಿ ಆಸ್ಪತ್ರೆ ಕ್ವಾರ್ಟರ್ಸ್ ಬಳಿ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಇಮ್ತಿಯಾಝ್(25) ಕೊಲೆಯಾದವನು.

ಗಾರೆ ಕೆಲಸಕ್ಕಾಗಿ ಇಮ್ತಿಯಾಝ್‌ ಕಳೆದೊಂದು ತಿಂಗಳಿನಿಂದ ಕುಮಟಾ ಸರಕಾರಿ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ತಂಗಿದ್ದ. ಈತನ ಜತೆ ಹುಬ್ಬಳ್ಳಿ ಮೂಲದ ಮೊಯುದ್ದೀನ್, ಮೌನೇಶ್ ಹಾಗೂ ಸಾದಿಕ್ ಎಂಬುವವರು ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಗಾರೆ ಕೆಲಸಕ್ಕಾಗಿಯೇ ಕುಮಟಾಕ್ಕೆ ಬಂದು, ನಾಲ್ವರು ಒಂದೇ ರೂಮಿನಲ್ಲಿ ತಂಗಿದ್ದ. ಇಮ್ತಿಯಾಝ್ ಕೊಲೆಯ ಬಳಿಕ ಜತೆಗಿದ್ದ ಮೂವರು ಪರಾರಿ ಆಗಿದ್ದಾರೆ.

ಇನ್ಸ್‌ಪೆಕ್ಟರ್ ಯೋಗೀಶ್ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading
Advertisement
Latest3 minutes ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest3 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest20 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest21 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest21 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking21 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest23 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest1 day ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌