Site icon Vistara News

Road Accident: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; 8 ತಿಂಗಳ ಮಗು ಸೇರಿ ಮೂವರಿಗೆ ಗಂಭೀರ ಗಾಯ

#image_title

ರಾಮನಗರ: ಇಲ್ಲಿನ ಬಿಡದಿಯ ಕಲ್ಲುಗೋಪಹಳ್ಳಿ ಬಳಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೈವೆನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ (Road Accident) ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪುರುಷೋತ್ತಮ್ ಬಾಬು (37) ನಂದಿನಿ (30) ಮತ್ತು 8 ತಿಂಗಳ ಹೆಣ್ಣು ಮಗುವಿಗೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ.

ಕನಕಪುರದ ಕುಂಬಾರಬೀದಿ ನಿವಾಸಿಗಳಾದ ಗಾಯಾಳುಗಳು ದಶಪಥ ಹೆದ್ದಾರಿಯಲ್ಲಿ ಬೆಂಗಳೂರಿನ ಕಡೆಗೆ ಸಾಗುವ ಟಿಪ್ಪರ್‌ ಲಾರಿಗೆ ಕಾರು ಡಿಕ್ಕಿಯಾಗಿದೆ. ಪುರುಷೋತ್ತಮ್ ಬಾಬು ಕಾರು ಚಾಲನೆ ಮಾಡುತ್ತಿದ್ದರು. ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಶಂಕಿಸಲಾಗಿದೆ. ಅಪಘಾತದಲ್ಲಿ ಮಗುವಿನ ತಲೆಗೆ ಪೆಟ್ಟು ಬಿದ್ದಿದ್ದು ಗಂಭೀರವಾಗಿ ಗಾಯಗಳಾಗಿವೆ.

ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version