ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಪಘಾತಗಳ ಸರಣಿ ಮುಂದುವರಿದಿದ್ದು, ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಕಾರೊಂದು ಸೇತುವೆಯಿಂದ ಹಾರಿ (Road Accident) ಕೆಳಗೆ ಬಿದ್ದಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಕಾರು ಚಲಿಸುತ್ತಿತ್ತು ಎಂಬ ಮಾಹಿತಿ ಬಂದಿದೆ. ಚಾಲಕ ಸೇರಿ ಐವರು ಪ್ರಯಾಣಿಸುತ್ತಿದ್ದಾರೆ.
ಐವರಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಮೂವರ ಸ್ಥಿತಿ ಗಂಭೀರವಾಗಿದೆ. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇವರು ಸ್ನೇಹಿತನ ಮದುವೆಗೆಂದು ಸಿಂಧನೂರಿಗೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯಕ್ಕೆ ವಾಹನದಲ್ಲಿದ್ದವರೆಲ್ಲರೂ ಬೆಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ.
ಬೆಳಗ್ಗೆಯಷ್ಟೇ ನಡೆದಿದ್ದ ಅಪಘಾತ
ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಬುಧವಾರ (ಡಿ.೧೪) ಬೆಳಗ್ಗೆ ಕ್ಯಾಂಟರ್ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ (Road accident) ಸಂಭವಿಸಿ ನಾಲ್ವರು ಮೃತಪಟ್ಟಿದ್ದರು.
ಇದನ್ನೂ ಓದಿ | Road accident | ಗುಬ್ಬಿ ಬಳಿ ಕ್ಯಾಂಟರ್ ಲಾರಿ, ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು