Site icon Vistara News

Road Accident | ಹೆಬ್ರಿ ಕರಿಯಾಲು ಕ್ರಾಸ್‌ ಬಳಿ ಕಾರು ಪಲ್ಟಿ; ಇಬ್ಬರು ಗಂಭೀರ

car accident in hebri

ಉಡುಪಿ: ಹೆಬ್ರಿ ತಾಲೂಕು ವ್ಯಾಪ್ತಿಯ ಹೆಬ್ರಿ ಅಂಡಾರು ಕರಿಯಾಲು ಕ್ರಾಸ್‌ ಬಳಿ ಕಾರೊಂದು (Road Accident) ಪಲ್ಟಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕಾರ್ಕಳ ಅಜೆಕಾರು ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರುವಾಶೆಯ ಮೂಲಕ ಅಜೆಕಾರಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident | ಖಾಸಗಿ ಬಸ್‌-ಇನ್ನೋವಾ ಕಾರಿನ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

Exit mobile version