ರಾಯಚೂರು: ಇಲ್ಲಿನ ಮಸ್ಕಿ ತಾಲೂಕಿನ ಕುಣೆಕೆಲ್ಲೂರು ಗ್ರಾಮದ ಬಳಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಖಾಸಗಿ ವಾಹನ (Road Accident) ಪಲ್ಟಿಯಾಗಿದೆ. ಪರಿಣಾಮವಾಗಿ 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. 7 ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಬಸ್ ಸೌಕರ್ಯವಿಲ್ಲದ ಕಾರಣಕ್ಕೆ ಖಾಸಗಿ ವಾಹನದಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಶುಕ್ರವಾರವೂ ಖಾಸಗಿ ವಾಹನದಲ್ಲಿ ಹೋಗಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಸಂತೆಕೆಲ್ಲೂರಿನ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸುಮಾರು 30 ಮಕ್ಕಳು ವಾಹನದಲ್ಲಿದ್ದರು ಎಂಬ ಮಾಹಿತಿ ಇದ್ದು, ಗಂಭೀರ ಗಾಯಗೊಂಡ ಮಕ್ಕಳನ್ನು ರಾಯಚೂರಿಗೆ ರವಾನಿಸಲಾಗಿದೆ. 13 ಮಕ್ಕಳಿಗೆ ಲಿಂಗಸಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಮಸ್ಕಿ ಶಾಸಕ ಬಸನಗೌಡ ತುರ್ವೀಹಾಳ ಭೇಟಿ ನೀಡಿ ಪೋಷಕರಿಗೆ ಸ್ವಾಂತನ ಹೇಳಿದರು. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ | Woman Slapped | ಸೂಪರ್ ಮಾರ್ಕೆಟ್‌ನಲ್ಲಿ ಬಿಲ್ಲಿಂಗ್ ವಿಚಾರಕ್ಕೆ ಕಿರಿಕ್: ಮಹಿಳಾ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಯುವಕ