Site icon Vistara News

Road Accident | ಸ್ಕೂಟಿಯಲ್ಲಿ ತೆರಳುತ್ತಿದ್ದ ದಂಪತಿಗೆ ಯಮಸ್ವರೂಪಿಯಾದ ಕಂಟೇನರ್‌; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

ಕಾರವಾರ: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಗೇರುಸೊಪ್ಪಾ ವೃತ್ತದ ಬಳಿ ಸ್ಕೂಟಿಗೆ ಕಂಟೇನರ್‌ ಡಿಕ್ಕಿ (Road Accident) ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿರುವ ಘಟನೆ ನಡೆದಿದೆ. ಸಾವಿತ್ರಿ ಭಟ್ (64) ಮೃತ ದುರ್ದೈವಿ.

ಸಾವಿತ್ರಿ ಭಟ್‌ ತಮ್ಮ ಪತಿ ಜತೆಗೆ ಸ್ಕೂಟಿಯಲ್ಲಿ ಕುಮಟಾ ಭಾಗದಿಂದ ಹೊನ್ನಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಂಟೇನರ್‌ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಾವಿತ್ರಿ ಅವರ ದೇಹವು ಛಿದ್ರ ಛಿದ್ರವಾಗಿದೆ. ಸಾವಿತ್ರಿ ಪತಿ ಗಂಭೀರ ಗಾಯಗೊಂಡಿದ್ದು ಹೊನ್ನಾವರ ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ನಿವೃತ್ತ ಬಿಎಸ್ಎನ್ಎಲ್ ಉದ್ಯೋಗಿಯಾಗಿದ್ದ ಸಾವಿತ್ರಿ ಭಟ್‌ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದ ರಭಸಕ್ಕೆ ಮಹಿಳೆ ದೇಹ ಛಿದ್ರ ಛಿದ್ರವಾಗಿದ್ದು ಭೀಕರ ಅಪಘಾತ ಕಂಡು ವಾಹನ ಸವಾರರು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇನ್ನು ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಸ್ಥಳಾಂತರಿಸುವ ಕಾರ್ಯ ಮಾಡಿದ್ದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಕಂಟೇನರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | kantara in Oscar | ಕಾಂತಾರ ಮುಕುಟಕ್ಕೆ ಮತ್ತೊಂದು ಗರಿ, ಆಸ್ಕರ್‌ ಪ್ರಶಸ್ತಿಯ 2 ವಿಭಾಗದಲ್ಲಿ ಸ್ಪರ್ಧಾರ್ಹತೆ

Exit mobile version