ಬೆಂಗಳೂರು: ಇಲ್ಲಿನ ಸುಮ್ಮನಹಳ್ಳಿ ಸಮೀಪ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ (Road Accident) ನಡೆದಿದೆ. ಸೋಮವಾರ ಬೆಳಗ್ಗೆ 10ರ ಸುಮಾರಿಗೆ ಅಪಘಾತ ನಡೆದಿದ್ದು, ಕೆಲ ಕಾಲ ಸಮ್ಮನಹಳ್ಳಿ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.
ಕಾಮಾಕ್ಷಿಪಾಳ್ಯ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರು ಚಾಲಕನೊಬ್ಬ ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕ ವೇಗವಾಗಿ ಕಾರು ಚಾಲನೆ ಮಾಡಿದ್ದು, ಈ ವೇಳೆ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಹಿಂದಿನಿಂದ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.
ಇದನ್ನೂ ಓದಿ: Drunken Teacher: ಶಾಲೆಗೆ ಕುಡಿದು ಟೈಟ್ ಆಗಿ ಬಂದ ಶಿಕ್ಷಕ; ಕ್ರಮಕ್ಕೆ ಸ್ಥಳೀಯರ ಆಗ್ರಹ
ಘಟನೆಯಲ್ಲಿ ಕೇವಲ ಕಾರುಗಳಿಗೆ ಮಾತ್ರ ಹಾನಿ ಆಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.