Site icon Vistara News

Road Accident: ಕುಡಿದ ಮತ್ತು ತಂದ ಆಪತ್ತು; ಲಾರಿ ಚಕ್ರದ ಕೆಳಗೆ ಬಿದ್ದು ಕುಡುಕ ಮೃತ್ಯು

#image_title

ಆನೇಕಲ್/ತುಮಕೂರು: ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೇವರಕೊಂಡಪ್ಪ ವೃತ್ತದಲ್ಲಿ ಲಾರಿ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ (Road Accident) ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಚಲಿಸುತ್ತಿದ್ದ ಲಾರಿ ಚಕ್ರದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬೆಳಗ್ಗೆಯಿಂದಲೂ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಅಡ್ಡಲಾಗಿ ಹೋಗುತ್ತಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಲಾರಿ ಬರುವ ಸಂದರ್ಭದಲ್ಲಿ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವುದು ತಿಳಿದು ಬಂದಿದೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆನೇಕಲ್ ಪೊಲೀಸರು ಆಗಮಿಸಿದ್ದು, ಕ್ರೈನ್ ಮೂಲಕ ಲಾರಿ ಮೇಲೆತ್ತಿಸಿ ಮೃತದೇಹವನ್ನು ಹೊರತೆಗೆಯಲಾಗಿದೆ. ಘಟನೆಯಿಂದಾಗಿ ಆನೇಕಲ್- ಚಂದಾಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಿಂಗರೆಡ್ಡಿ ಹಳ್ಳಿ ಬಳಿ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತಕ್ಕೀಡಾಗಿದೆ. ವೈಎನ್ ಹೊಸಕೋಟೆ ಬಳಿಯಿಂದ ಪಾವಗಡ ಕಡೆ ಕೆಎಸ್‌ಆರ್‌ಟಿಸಿ ಸಿಂಗರೆಡ್ಡಿ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಹೋಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್‌ನ ಮುಂಭಾಗದಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Janardhana Reddy : ಸ್ಪರ್ಧೆಯಿಂದ ಹಿಂದೆ ಸರಿಯಲ್ಲ; ಜನಾರ್ದನ ರೆಡ್ಡಿ, ಪತ್ನಿಗೆ ಸೆಡ್ಡು ಹೊಡೆದ ಸೋಮಶೇಖರ ರೆಡ್ಡಿ

Exit mobile version