ಚಿಕ್ಕಮಗಳೂರು: ಸ್ಕೂಟಿ-ಕಾರು ನಡುವೆ ಭೀಕರ ಅಪಘಾತ ನಡೆದು, ದಂಪತಿ ಸ್ಥಳದಲ್ಲೇ ದುರ್ಮರಣ (Road Accident) ಹೊಂದಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನ ವಂಗಲ ಗ್ರಾಮದಲ್ಲಿ ನಡೆದಿದೆ.
ಅರ್ಜುನ್ ಹಾಗೂ ಶ್ವೇತ ಮೃತ ದುರ್ದೈವಿಗಳು. ಕಾರು ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Murder Case: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ; ಸ್ನೇಹಿತರಿಂದಲೇ ಕೃತ್ಯ!
ಶಿರಾದಲ್ಲಿ ಈಜಲು ಹೋದ ವಿದ್ಯಾರ್ಥಿ ಹೊಂಡದಲ್ಲಿ ಮುಳುಗಿ ಸಾವು
ಶಿರಾ: ಹೊಂಡದಲ್ಲಿ ಈಜಲು ಹೋಗಿ, ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಭುವನಹಳ್ಳಿ ಬಳಿ ಮಂಗಳವಾರ (Tumkur News) ಜರುಗಿದೆ. ತಾಲೂಕಿನ ಮದಲೂರು ದಾಸರಹಳ್ಳಿಯ ಮನು (17) ಮೃತ ವಿದ್ಯಾರ್ಥಿ.
ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿಯು ಕಾಲೇಜಿನಲ್ಲಿ ಬೆಳಿಗ್ಗೆ ಮೊದಲ ಅವಧಿಯ ತರಗತಿ ಮುಗಿಸಿಕೊಂಡು ಕಾಲೇಜು ಸಮೀಪದ ಹೊಂಡಕ್ಕೆ ಈಜಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ಸಾವಿಗೆ ಕಾಲೇಜಿನ ಅಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿ, ಆಕ್ರೋಶ ವ್ಯಕ್ತಪಡಿದ್ದಾರೆ. ಈ ಬಗ್ಗೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Murder Case: ಎಣ್ಣೆ ಏಟಲ್ಲಿ ಲಾಂಗ್‌ನಿಂದ ಸ್ನೇಹಿತನ ಕತ್ತು ಸೀಳಿ ಕೊಂದ; ಸಿಕ್ಕಿ ಬಿದ್ದಿದ್ದು ಹೇಗೆ?
ಶಾಸಕ ಟಿ.ಬಿ. ಜಯಚಂದ್ರ ಅವರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದರು. ಬಳಿಕ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಮಾತನಾಡಿದ ಅವರು, ಈ ಘಟನೆಯು ಮೇಲ್ನೋಟಕ್ಕೆ ಕಾಲೇಜಿನ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದ್ದು, ಈ ಕುರಿತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿ, ಮಾತನಾಡಿ ಈ ಕೂಡಲೇ ಪ್ರಾಂಶುಪಾಲರ ವಿರುದ್ಧ ತನಿಖೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಸಿದರು.