Site icon Vistara News

Road Accident: ಟ್ಯಾಂಕರ್-ಕ್ಯಾಂಟರ್ ವಾಹನಗಳ ನಡುವೆ ಭೀಕರ ಅಪಘಾತ; ಚಾಲಕನ ಎರಡೂ ಕಾಲು ತುಂಡು

Fatal accident between tanker and canter vehicles Both leg pieces of the driver

ಗದಗ: ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿ ಬಳಿ ಟ್ಯಾಂಕರ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಎರಡು ವಾಹನ ಸಂಪೂರ್ಣ ಜಖಂ ಆಗಿವೆ. ಈ ವೇಳೆ ಒಬ್ಬ ಚಾಲಕನ ಎರಡೂ ಕಾಲುಗಳೂ ತುಂಡಾಗಿವೆ.

ಟ್ಯಾಂಕರ್ ಚಾಲಕನ ೨ ಕಾಲುಗಳೂ ತುಂಡಾಗಿದ್ದು, ರಕ್ತದ ಮಡುವಿನಲ್ಲಿ ನರಳಾಡಿದ್ದಾರೆ. ಸ್ಥಳಕ್ಕೆ ಕೂಡಲೇ ಪೊಲೀಸರು ಹಾಗೂ ಸ್ಥಳೀಯರು ದಾವಿಸಿದ್ದು, ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಸಾವು ಬದುಕಿನ ಮಧ್ಯ ಹೋರಾಡುತ್ತಿರುವ ಚಾಲಕನನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಯಾಂಟರ್ ವಾಹನ ಚಾಲಕ ಹಾಗೂ ಕ್ಲೀನರ್ ಅಪಘಾತವಾಗುತ್ತಿದ್ದಂತೆ ಪರಾರಿಯಾಗಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವ ಚಾಲಕ ಹಾಗೂ ಕ್ಲೀನರ್‌ಗಾಗಿ ಶೋಧ ಕಾರ್ಯ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: KM Shivalingegowda : ಕಾಂಗ್ರೆಸ್‌ ಸೇರುವ ದಾರಿಯಲ್ಲಿರುವ ಶಿವಲಿಂಗೇ ಗೌಡರಿಗೆ ನಂಬಿದವರೇ ಕೈಕೊಡುತ್ತಿದ್ದಾರಾ?: ಸ್ಫೋಟಕ ಆಡಿಯೋದಲ್ಲಿ ಏನಿದೆ?

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ದಾರುಣ ಮೃತ್ಯು

ಬೆಂಗಳೂರಿನ ಯಶವಂತಪುರ ಬಳಿ ಮಂಗಳವಾರ ಮುಂಜಾನೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಖಾಸಗಿ ಬಸ್‌ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಸ್‌ ಬಳಿಕ ಸವಾರೆಯ ಮೇಲೆ ಹರಿಯಿತು. ಮಹಿಳೆಯ ತಲೆ ಮೇಲೆಯೇ ಬಸ್‌ ಹರಿದಿದಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಯಶವಂತಪುರದ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ನಿವೃತ್ತ ಎಎಸ್‌ಐ ಅಪಘಾತಕ್ಕೆ ಬಲಿ

ಶಿವಮೊಗ್ಗದಲ್ಲಿ ನಡೆದ ಅಪಘಾತದಲ್ಲಿ ನಿವೃತ್ತ ಎಎಸ್ಐ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕುರುತ್ಯಪ್ಪ (64) ಮೃತಪಟ್ಟವರು. ಸೋಮವಾರ (ಜ.೨೩) ಹೊನ್ನಾಳಿ ರಸ್ತೆಯ ಮಡಿಕೆಚಿಲೂರ್ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ. ಇವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ (ಜ.೨೪) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: ಬಿಬಿಸಿಯ ಗುಜರಾತ್ ದಂಗೆ ಸಾಕ್ಷ್ಯ ಚಿತ್ರ ನಿಷೇಧಕ್ಕೆ ಕೇಂದ್ರ ಬಳಸಿದ ಅಧಿಕಾರ ಯಾವುದು? ಕಾನೂನು ಏನು ಹೇಳುತ್ತದೆ?

ಹೊಸಕೋಟೆಯಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯ

ಹೊಸಕೋಟೆ- ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಹಲವು ಮಂದಿ ಗಂಭೀರ ಗಾಯಗಳಾಗಿವೆ. ರಾಷ್ಟ್ರೀಯ ಹೆದ್ದಾರಿಯ ಹೊಸಕೋಟೆ ಎಂವಿಜೆ ಮೆಡಿಕಲ್ ಕಾಲೇಜು ಬಳಿ ಭೀಕರ ರಸ್ತೆ ಸರಣಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಚಾಲಕನ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಕ್ಯಾಂಟರ್‌ ಡಿಕ್ಕಿಯಾದ ರಭಸಕ್ಕೆ ಟಿಟಿ ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಬೈಕ್ ಸವಾರರಿಗೆ ಹಾಗೂ ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Exit mobile version