Site icon Vistara News

Road Accident | ಬಸ್‌- ಕಾರು ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದವರಿಗೆ ಗಂಭೀರ ಗಾಯ

ಶಿರಸಿ: ಇಲ್ಲಿನ ಕುಮಟಾ ರಸ್ತೆ ಕೊಳಗಿಬಿಸ್ ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಶಿರಸಿಯಿಂದ ಕುಮಟಾ ಕಡೆಗೆ ಹೊರಟಿದ್ದ ಬಸ್ ಹಾಗೂ ಕುಮಟಾ ಮಾರ್ಗವಾಗಿ ಶಿರಸಿ ಕಡೆಗೆ‌ ಬರುತ್ತಿದ್ದ ಕಾರಿನ ನಡುವೆ ಅಪಘಾತವಾಗಿದೆ.

Road Accident

ಕಾರಿನಲ್ಲಿದ್ದ ೪ ಪ್ರಯಾಣಿಕರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ.

Road Accident

ಶಿರಸಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Selfie Tragedy | ಸೆಲ್ಫಿ ತಂದ ಆಪತ್ತು; ಶಿವಗಂಗೆ ಬೆಟ್ಟದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಸಾವು

Exit mobile version