Site icon Vistara News

Road Accident | ಸಾಗರ ರಸ್ತೆಯಲ್ಲಿ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ; ಒಬ್ಬಳ ಸಾವು

sagara accident pratima ಸಾಗರ ಅಪಘಾತ ಟಿಪ್ಪರ್‌ ಲಾರಿ

ಶಿವಮೊಗ್ಗ: ಸಾಗರ ಸಮೀಪ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ.

ಸಾಗರದ ಸಣ್ಣಮನೆ ಬಳಿ ನಡೆದ ದುರ್ಘಟನೆ ನಡೆದಿದೆ. ಸಾಗರದ ಬಿಸಿಎಂ ಹಾಸ್ಟೆಲ್‌ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿನಿಯರಾದ ಅಂಕಿತಾ, ಐಶ್ವರ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ವಿದ್ಯಾರ್ಥಿನಿಯರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 18 ವರ್ಷದ ಪ್ರತಿಮಾ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾರೆ.

ಪ್ರತಿಮಾ ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದವರು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ | Devadasi system | ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ, ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ

Exit mobile version