Site icon Vistara News

Car Accident : ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ಕಾರು ಪಲ್ಟಿಯಾಗಿ ಇಬ್ಬರ ಸಾವು, 2 ವರ್ಷದ ಮಗು ಸೇರಿ ಮೂವರಿಗೆ ಗಾಯ

Road accident in Haveri, Two killed and three injured

#image_title

ಹಾವೇರಿ: ರಾಷ್ಟ್ರೀಯ ಹೆದ್ದಾರಿ-4ರ ಹಾವೇರಿ ಬೈಪಾಸ್ ಬಳಿ ಕಾರು ಪಲ್ಟಿಯಾಗಿ (Car Accident) ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ | Child Death: ಆಟವಾಡುತ್ತಾ ಹೋದ ಆರು ವರ್ಷದ ಬಾಲಕಿ ಲಿಫ್ಟ್‌ಗಾಗಿ ತೋಡಿದ್ದ ಗುಂಡಿಗೆ ಬಿದ್ದು ಸಾವು

ಚೇತನಾ (35), ದುಂಡೆಪ್ಪ (60) ಮೃತರು. ಹಾವೇರಿ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದಲ್ಲಿ ಚೇತನಾ ಸ್ಥಳದಲ್ಲೇ ಮೃತಪಟ್ಟಿದ್ದು, ದುಂಡೆಪ್ಪ ಅವರು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರವಾಗಿ ಗಾಯಗೊಂಡಿರುವ ಮಗುವನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

Exit mobile version