Site icon Vistara News

Road Accident : ಪಲ್ಸರ್‌- ಥಾರ್‌ ಮುಖಾಮುಖಿ; ಊಟಕ್ಕೆ ಹೋಗಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳು ಮೃತ್ಯುವಶ

Two dead in Mysore accident

ಮೈಸೂರು: ಇಲ್ಲಿನ ಲಲಿತ ಮಹಲ್‌ ಹೋಟೆಲ್‌ ಸಮೀಪ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ (Road accident) ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗಳು ಮೃತಪಟ್ಟಿದ್ದಾರೆ (Two Constables dead). ಪಲ್ಸರ್ ಬೈಕ್‌ ಮತ್ತು ಮಹೀಂದ್ರಾ ಥಾರ್ ನಡುವೆ ಅಪಘಾತ (Accident between Pulor bike and Mahindra thar) ಸಂಭವಿಸಿದ್ದು, ಬೈಕ್‌ನಲ್ಲಿದ್ದ ಕಾನ್‌ಸ್ಟೇಬಲ್‌ಗಳು ರಸ್ತೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ಪಿ.ಮಹೇಶ್(23), ಬಿಜಾಪುರ ಜಿಲ್ಲೆ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟಿ (24) ಮೃತ ದುರ್ದೈವಿಗಳು.

ರಾಜ್ಯ ಮೀಸಲು ಪಡೆಯ 5ನೇ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೇಬಲ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದ ಮಹೇಶ್‌ ಮತ್ತು ಅಮರನಾಥ ಅವರು ಫುಡ್ ಸ್ಟ್ರೀಟ್‌ನಲ್ಲಿ ಊಟ ಮಾಡಿದ ಬಳಿಕ ತಮ್ಮ ಪಲ್ಸರ್ ಬೈಕ್ ನಲ್ಲಿ ಕೆಎಸ್ಆರ್ ಪಿ ಬೆಟಾಲಿಯನ್ ಕಡೆ ಹೋಗುವಾಗ ದುರ್ಘಟನೆ ಸಂಭವಿಸಿದೆ.

ಪಲ್ಸರ್‌ ಬೈಕ್‌ ಮತ್ತು ಮಹೀಂದ್ರಾ ಥಾರ್‌ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ಗೆ ಡಿಕ್ಕಿ ಹೊಡೆದು ಎಸ್ಕೇಪ್‌ ಆಗುತ್ತಿದ್ದ ಚಾಲಕನನ್ನು ಸಾರ್ವಜನಿಕರು ಹಿಡಿದುಕೊಂಡಿದ್ದಾರೆ. ಸಿದ್ಧಾರ್ಥ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಧಾರವಾಡದಲ್ಲಿ ಕಾರಿನಲ್ಲಿ ಊಟಕ್ಕೆ ಹೋಗಿ ಮರಳುತ್ತಿದ್ದಾಗ ಇಬ್ಬರು ಮೃತ್ಯು

ಧಾರವಾಡ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ (Car hits divider) ಹೊಡೆದು ಪಲ್ಟಿಯಾದ (Road accident) ಹಿನ್ನೆಲೆಯಲ್ಲಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಾಣ (Two died in Accident) ಕಳೆದುಕೊಂಡಿದ್ದಾರೆ. ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾನುವಾರ ತಡರಾತ್ರಿ ದುರಂತ ಸಂಭವಿಸಿದೆ.

ವಿನಯ ಹಿರೇಮಠ (28) ಹಾಗೂ ಸಂದೀಪ್ (29) ಸಾವನ್ನಪ್ಪಿದ ದುರ್ದೈವಿಗಳು. ಅವರು ತಡ ರಾತ್ರಿ ಧಾರವಾಡದಿಂದ ಹೊರಟು ತೇಗೂರು ಗ್ರಾಮದ ಬಳಿಯ ಧಾಬಾಕ್ಕೆ ಊಟಕ್ಕೆ ಹೋಗಿದ್ದರು. ಅಲ್ಲಿ ಊಟ ಮುಗಿಸಿ ವಾಪಸ್‌ ಬರುವಾಗ ಹೆದ್ದಾರಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಮತ್ತೊಬ್ಬರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದ್ದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Road Accident: ಬಸ್-ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ, ಮಗ ಸ್ಥಳದಲ್ಲೇ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Exit mobile version