Site icon Vistara News

Road Accident | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Bus accident Sirsi KSRTC Bus

ಶಿರಸಿ: ಎದುರಿಗೆ ಬಂದ ಬಸ್ ತಪ್ಪಿಸಲು ಹೋಗಿ ಕೆಎಸ್ಆರ್‌ ಟಿಸಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ (Road Accident) ಹೊಡೆದ ಪರಿಣಾಮ ಕಂಬ ಬಸ್ ಮೇಲೆ ಬಿದ್ದ ಘಟನೆ ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಹುಡೇಲಕೊಪ್ಪ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಅದೃಷ್ಣವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ೨೫ ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬನವಾಸಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ‌.

ಇದನ್ನೂ ಓದಿ | Amit shah | ಮಂಡ್ಯ ಅರ್ಥ ಮಾಡಿಕೊಂಡರೆ ಇಡೀ ಇಂಡಿಯಾವನ್ನೇ ಅರ್ಥ ಮಾಡಿಕೊಂಡಂತೆ: ನಿರ್ಮಲಾನಂದನಾಥ ಶ್ರೀ

Exit mobile version