ಕೊಡಗು: ಇಲ್ಲಿನ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಕಾವಾಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ (Road Accident) ಪಲ್ಟಿಯಾಗಿದೆ. ಕೇರಳದ ಎರ್ಣಾಕೊಳಂನಿಂದ ಹಾಸನಕ್ಕೆ ಬರುವಾಗ ಕೆಎಸ್‌ಆರ್‌ಟಿಸಿ ಬಸ್ ಮಗುಚಿಬಿದ್ದಿದೆ.
ಸುಮಾರು 40 ರಿಂದ 50 ಜನ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ, ನಸುಕಿನ ಜಾವ 3:45ರ ಸುಮಾರಿಗೆ ಕಾವಾಡಿ ಸಮೀಪ ಚಾಲಕ ತಿರುವು ತೆಗೆದುಕೊಳ್ಳುತ್ತಿದ್ದಾಗ ನಿಯಂತ್ರಣ ಸಿಗದೆ ಒಮ್ಮೆ ಪಲ್ಟಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿದ್ದ ಪ್ರಯಾಣಿಕರೆಲ್ಲರೂ ಬಸ್ ಪಲ್ಟಿ ಆಗುತ್ತಿದ್ದಂತೆ ಭಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರ ನೆರವಿನಿಂದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ವಿರಾಜಪೇಟೆ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಲ್ಟಿ ಹೊಡೆದ ಬಸ್‌ನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯಿತು.
ಇದನ್ನೂ ಓದಿ: IPL 2023: ಆರ್ಸಿಬಿಗೆ ಗಾಯದ ಚಿಂತೆ; ಸ್ಟಾರ್ ಆಟಗಾರರು ಟೂರ್ನಿಯಿಂದ ಔಟ್?
ಬೈಕ್-ಓಮ್ನಿ ವ್ಯಾನ್ ಮುಖಾಮುಖಿ ಡಿಕ್ಕಿ
ಕೊಡಗಿನ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದ ತಿತಿಮತಿ ರಸ್ತೆಯಲ್ಲಿ ಓಮ್ನಿ ವ್ಯಾನ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಣಸೂರು ನಿವಾಸಿ ಕೆಂಪನಾಯಕ (35) ಮೃತ ದುರ್ದೈವಿ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಕ್ರೀಡಾ ಸುದ್ದಿಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ