ಉಡುಪಿ
Road Accident: ಬೈಕ್‌ಗೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿ ಸ್ಥಳದಲ್ಲೇ ಸಾವು
bike Accident: ತಂದೆ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ಆನೇಕಲ್‌ನಲ್ಲಿ ನಡೆದಿದೆ.
ಆನೇಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಶಾಲಾ ಬಾಲಕಿಯೊಬ್ಬಳು (Road Accident) ಮೃತಪಟ್ಟಿದ್ದಾಳೆ. ಲಕ್ಷ್ಮೀ ಪ್ರಿಯಾ ಜಾಮಿ (7) ಮೃತ ಬಾಲಕಿ. ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ತಂದೆ ಜತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಲಾರಿ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಶಾಲೆಯಿಂದ ಮಗಳನ್ನು ಬೈಕ್‌ನಲ್ಲಿ ಕರೆತರುತ್ತಿದ್ದಾಗ ಚಂದಾಪುರ ರೈಲ್ವೆ ಅಂಡರ್ ಪಾಸ್ ಬಳಿ ಲಾರಿ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ರಭಸಕ್ಕೆ ಲಕ್ಷ್ಮೀ ಉಸಿರು ಚೆಲ್ಲಿದ್ದಾಳೆ. ತಂದೆ ತೇಜಸ್ವರ್ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಲಂ ಮೂಲದ ತೇಜಸ್ವರ್ ದಂಪತಿ ಅಡಿಸೊನ್ನಟ್ಟಿ ರಸ್ತೆಯ ಗ್ರೀನ್ ಆಪಲ್ ಹೈಕ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಹಳೇ ಚಂದಾಪುರದ ನಜರತ್ ಶಾಲೆಯಲ್ಲಿ ಲಕ್ಷ್ಮೀ ಮೂರನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ಚಂದಾಪುರ ರೈಲ್ವೆ ಅಂಡರ್ ಪಾಸ್ ಕಳೆದ ಹದಿನೈದು ದಿನಗಳಲ್ಲಿ ಇದು ಮೂರನೇ ಅಪಘಾತವಾಗಿದ್ದು, ಸಾರ್ವಜನಿಕರು ಕಿಡಿಕಾರಿದ್ದಾರೆ. ಹೆದ್ದಾರಿ ಪ್ರಾಧಿಕಾರ ಹಾಗೂ ಜನಪ್ರತಿನಿಧಿಗಳು ಯಾರು ಕೂಡ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ
ಚಿಕ್ಕಬಳ್ಳಾಪುರದ ಆಂಧ್ರಪ್ರದೇಶ- ಕರ್ನಾಟಕ ಗಡಿಯ ಚೀಲಮತ್ತೂರು ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಕಾರು ಮತ್ತು ಬುಲೆರೋ ಗೂಡ್ಸ್ ವಾಹನ ನಡುವೆ ಮುಖಮುಖಿ ಡಿಕ್ಕಿಯಾಗಿ, ಬುಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಬಾಗೇಪಲ್ಲಿಯ ವೆಂಕಟೇಶ್ ಎಂಬ ವ್ಯಕ್ತಿಗೆ ಸೇರಿದ ಫರ್ಚುನರ್ ವಾಹನ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚೀಲಮತ್ತೂರು ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಉಳಿದ ಗಾಯಳುಗಳನ್ನು ಚೀಲಮತ್ತೂರು ಮತ್ತು ಹಿಂದೂಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ಇದೆ. ಫಾರ್ಚುನರ್ ವಾಹನದ ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಶಾಸಕರಿದ್ದ ಕಾರಿನ ಟಯರ್ ಸ್ಫೋಟ
ಉಡುಪಿ: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ಉಡುಪಿಯ ಕಾರ್ಕಳ ತಾಲೂಕಿನ ಮಿಯ್ಯಾರು ಸೇತುವೆ ಬಳಿ ವೇಗವಾಗಿ ಸಾಗುತ್ತಿದ್ದಾಗ ಕಾರಿನ ಟಯರ್ ಸ್ಫೋಟಗೊಂಡಿದೆ. ಪರಿಣಾಮ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: Viral News : ಸಾಕು ನಾಯಿಗಳನ್ನು ಕೂಡಿ ಹಾಕಿ 6 ತಿಂಗಳು ಟ್ರಿಪ್ ಹೋದ ಮಾಲೀಕ!
ಟಿಪ್ಪರ್- ಲಾರಿ ಮುಖಾಮುಖಿ ಡಿಕ್ಕಿ, ಓರ್ವ ಸಾವು
ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ಟಿಪ್ಪರ್ ಹಾಗೂ ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಾರಿ ಕ್ಲೀನರ್ ಬಂಗಾರಪೇಟೆ ಮೂಲದ ಮಹ್ಮದ್ ಆಸಿಫ್ ಆಲಿ (48) ಮೃತ ದುರ್ದೈವಿ. ಅಪಘಾತದಲ್ಲಿ ಜಾವಿದ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದಾರೆ.
ಕ್ಯಾಂಟರ್ ಲಾರಿ ಯೂಟರ್ನ್ ಮಾಡುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಶನಿವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ
Rain News : ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (karnataka weather forecast) ನಿರೀಕ್ಷೆ ಇದೆ. ಉಳಿದಂತೆ ಒಣ ಹವೆ ಇರಲಿದೆ.
ಬೆಂಗಳೂರು: ಸಕ್ರಿಯವಾಗಿದ್ದ ಮುಂಗಾರು ರಾಜ್ಯದಲ್ಲಿ (karnataka weather forecast) ಮತ್ತೆ ದುರ್ಬಲಗೊಂಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇದೀಗ ವರುಣ ಕೈಕೊಟ್ಟಿದ್ದಾನೆ. ಮುಂದಿನ 24 ಗಂಟೆಯಲ್ಲಿ ಒಣ ಹವೆ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಒಣಹವೆ ಮೇಲುಗೈ ಸಾಧಿಸುತ್ತದೆ. ಬೆಂಗಳೂರು ನಗರ ಪ್ರದೇಶದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ಇರಲಿದೆ.
ಇದನ್ನೂ ಓದಿ: Mangaluru News : ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ಸಾವು
ಉತ್ತರ ಒಳನಾಡಲ್ಲಿ ಲಘು ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಗುಡುಗು ಮಳೆ
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಬಹುದು.
ಇನ್ನು ರಾಜ್ಯದಲ್ಲಿ ಸೋಮವಾರ ಕಲಬುರಗಿಯ ಅಡಕಿಯಲ್ಲಿ 3 ಸೆಂ.ಮೀ, ಮುಧೋಳದಲ್ಲಿ 2 ಸೆಂ.ಮೀ ಹಾಗೂ ಉತ್ತರ ಕನ್ನಡದ ಕದ್ರಾ, ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Karnataka Weather Forecast : ಕರಾವಳಿಯಲ್ಲಿ ನಾನ್ ಸ್ಟಾಪ್ ಮಳೆ; ಬೆಂಗಳೂರಲ್ಲಿ ಫುಲ್ ಸ್ಟಾಪ್
Karnataka Weather Forecast : ದಕ್ಷಿಣ ಒಳನಾಡಲ್ಲಿ ಮಳೆ ದುರ್ಬಲವಾಗಿದ್ದು, ಉತ್ತರ ಒಳನಾಡು ಹಾಗೂ ಕರಾವಳಿ, ಮಲೆನಾಡಲ್ಲಿ (Rain News) ಸಾಮಾನ್ಯವಾಗಿರಲಿದೆ.
ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Rain News) ತಗ್ಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣವಾಗಿದೆ. ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ಬ್ರೇಕ್ ಹಾಕಿದ ಮಳೆರಾಯ, ಶುಷ್ಕ ವಾತಾವರಣ
ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣದಿಂದ ಕೂಡಿರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಮಲೆನಾಡಲ್ಲಿ ಚದುರಿದ ಮಳೆ
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 23 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Karnataka Weather Forecast : ನಾಳೆ ದಕ್ಷಿಣದಲ್ಲಿ ದುರ್ಬಲ; ಉತ್ತರ, ಕರಾವಳಿಯಲ್ಲಿ ಸಾಮಾನ್ಯ ಮಳೆ
Rain News : ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು ಸಾಧಾರಣವಾಗಿರಲಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ (Karnataka Weather Forecast) ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ದಕ್ಷಿಣ ಒಳನಾಡಲ್ಲಿ ನೈರುತ್ಯ ಮುಂಗಾರು (Rain News) ದುರ್ಬಲಗೊಂಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 32ರಷ್ಟು ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಅತೀ ಕಡಿಮೆ ಉಷ್ಣಾಂಶ 14.2ರಷ್ಟು ದಾಖಲಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ರಾಜ್ಯದ ಉಳಿದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗಲಿದೆ. ಉಳಿದ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಸುರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Kidnapping case : ಸುಲಿಗೆಕೋರನಾದ ಸ್ನೇಹಿತ; ಕಿಡ್ನ್ಯಾಪ್ ಮಾಡಿ 50 ಲಕ್ಷಕ್ಕೆ ಡಿಮ್ಯಾಂಡ್!
ಭಾನುವಾರ ರಾಜ್ಯದ ವಿವಿಧೆಡೆ ಮಳೆಯಾಗಿರುವ ವರದಿ ಆಗಿದೆ. ಕ್ಯಾಸಲ್ ರಾಕ್, ಔರಾದ್, ಖಜೂರಿ, ಭಾಗಮಂಡಲ, ಪೊನ್ನಂಪೇಟೆ ಪಿಡಬ್ಲ್ಯೂಡಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಮಂಕಿ, ಮಂಚಿಕೆರೆ, ಕದ್ರಾ , ಹುಮನಾಬಾದ್‌ನಲ್ಲಿ ತಲಾ 3 ಸೆಂ.ಮೀ ಮಳೆ ಸುರಿದಿದೆ. ಬೆಳ್ತಂಗಡಿ, ಗೇರುಸೊಪ್ಪ, ಸಿದ್ದಾಪುರ, ಹೊನ್ನಾವರ, ಜಗಲ್ ಬೆಟ್, ಸಿದ್ದಾಪುರ, ಲೋಂಡಾ, ಮಂಠಾಳ, ರಬಕವಿ, ಲಿಂಗನಮಕ್ಕಿ ಎಚ್‌ಎಂಎಸ್, ಜಯಪುರ, ಶೃಂಗೇರಿ ಎಚ್‌ಎಂಎಸ್, ವಿರಾಜಪೇಟೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಯಲ್ಲಾಪುರ, ಶಿರಾಲಿ, ಕುಮಟಾ, ಉಪ್ಪಿನಂಗಡಿ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಸೈದಾಪುರ, ಅಥಣಿ, ರಾಯಬಾಗ, ಸೇಡಬಾಳ್, ಚಿಕ್ಕೋಡಿ, ಸಂಕೇಶ್ವರ, ಕಲಬುರ್ಗಿ AWS,ಮಹಾಲಿಂಗಪುರ , ಕಲಬುರ್ಗಿ ನಗರ, ಧಾರವಾಡ ನಗರ, ಸಕಲೇಶಪುರ, ಹುಂಚದಕಟ್ಟೆ, ತಾಳಗುಪ್ಪ, ತ್ಯಾಗರ್ತಿ, ಕಮ್ಮರಡಿ, ಮೂರ್ನಾಡು ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
karnataka weather forecast : ಕರಾವಳಿಯಲ್ಲಿ ಪ್ರಬಲವಾದ ಮುಂಗಾರು; ಬಿರುಗಾಳಿ ಸಾಥ್
Rain News : ರಾಜ್ಯದಲ್ಲಿ ನೈರುತ್ಯ ಮುಂಗಾರು ಪ್ರಬಲಗೊಂಡಿದ್ದು, ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾನುವಾರ 8 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ (karnataka weather forecast) ನೀಡಿದೆ.
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನೈರುತ್ಯ ಮುಂಗಾರು (karnataka weather forecast) ಪ್ರಬಲವಾಗಿದ್ದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ
ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿಯಲ್ಲಿ ಭರ್ಜರಿ ಮಳೆ
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೀದರ್, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಡಿಮೆ ಮಳೆ ಸುರಿಯಲಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗುವ ಸೂಚನೆ ಇದೆ.
ಇದನ್ನೂ ಓದಿ: Letter to friend : ಹಾಯ್ ಪುಟ್ಟಾ.. ಹೇಗಿದಿಯಾ?; ದೇವರ ಹುಂಡಿಯಲ್ಲಿ ಓಡಿ ಹೋದ ಗೆಳತಿಗೊಂದು ಪತ್ರ!
ಈ ಜಿಲ್ಲೆಗಳಿಗೆ ಅಲರ್ಟ್
ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದ್ದು ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ 45-55 ಕಿ.ಮೀಯಿಂದ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಪ್ರಮುಖ ಸುದ್ದಿ24 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಕಿರುತೆರೆ14 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ದೇಶ19 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕರ್ನಾಟಕ16 hours ago
Namma Metro: ಮೆಟ್ರೋ ಟ್ರ್ಯಾಕ್ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
-
ಕ್ರೈಂ21 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?
-
ಕರ್ನಾಟಕ13 hours ago
Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್ ವೆಹಿಕಲ್; ಎಂದಿನಂತೆ ಮೆಟ್ರೋ ಓಡಾಟ
-
ಉತ್ತರ ಕನ್ನಡ15 hours ago
Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!
-
ಕರ್ನಾಟಕ11 hours ago
Lecturer Death : ಬಿಜಿಎಸ್ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ