Site icon Vistara News

Road Accident : ನೈಸ್‌ ರೋಡಲ್ಲಿ ಸ್ಪೀಡಾಗಿ ಬಂದು ಬೈಕ್‌ ಸವಾರನಿಗೆ ಗುದ್ದಿದ ಲಾರಿ

Lorry Hit bike in Bengaluru

ಬೆಂಗಳೂರು/ಶಿವಮೊಗ್ಗ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ (Road Accident) ನಡೆದಿದೆ. ಬೈಕ್‌ ಸವಾರನಿಗೆ ಹಿಂಬದಿಯಿಂದ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಎಗರಿ ಬಿದ್ದು ಮೃತಪಟ್ಟಿದ್ದಾರೆ. ರಮೇಶ್ ನಾಯ್ಕ್ (37) ಮೃತ ದುರ್ದೈವಿ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಕೋರಮಂಗಲ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Car Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ಒತ್ತಿದ ಪ್ರೊಫೆಸರ್‌! ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಬ್ಬರು ಗಂಭೀರ

ನಿಯಂತ್ರಣ ತಪ್ಪಿ ಕಾರು ಪಲ್ಟಿ

ಶಿವಮೊಗ್ಗದ ರಿಪ್ಪನ್‌ಪೇಟೆ ಬಳಿಯ ಜಂಬಳ್ಳಿ ತಿರುವಿನಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಮನ್ (21) ಹಾಗೂ ಕುಮಾರ್ (21) ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.

ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಈ ವೇಳೆ ಒಮ್ಮೆಲೆ ಇನ್ನೋವಾ ಕಾರು ಪಲ್ಟಿಯಾಗಿದೆ. ನಮನ್‌ ಹಾಗೂ ಕುಮಾರ್‌ ತಲೆಗೆ ಪೆಟ್ಟು ತಗುಲಿದ್ದು, ಇಬ್ಬರನ್ನೂ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಇನ್ನೊಬ್ಬ ಪ್ರಯಾಣಿಕ ಮದನ್ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version