Site icon Vistara News

Road Accident: ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ಡಿಕ್ಕಿ ಹೊಡದ ಲಾರಿ; ಮನೆಯಲ್ಲಿದ್ದ ಮಹಿಳೆ ಸಾವು

Tumkur Accident

ತುಮಕೂರು: ಕುಣಿಗಲ್ ತಾಲೂಕಿನ ದೊಡ್ಡಮಾವತ್ತೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯೊಳಗೆ ನುಗ್ಗಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಿಂದ (Road Accident) ಮನೆಗೆ ತೀವ್ರ ಹಾನಿಯಾಗಿದೆ.

ವಿನುತಾ (26) ಮೃತ ಮಹಿಳೆ. ದೊಡ್ಡಮಾವತ್ತೂರು ಬಳಿ ವೇಗವಾಗಿ ಬರುತ್ತಿದ್ದಾಗ ಲಾರಿಯು ಚಾಲಕನ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆ ಪಕ್ಕದಲ್ಲಿರುವ ಮನೆಯೊಳಗೆ ಲಾರಿ ನುಗ್ಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮನೆ ಸಂಪೂರ್ಣ ಜಖಂ ಆಗಿದೆ.

ಈ ವೇಳೆ ಮನೆಯೊಳಗೆ ಇದ್ದ ವಿನುತಾ ಅವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಅಮೆಜಾನ್‌ ಕಂಪನಿ ಮ್ಯಾನೇಜರ್‌ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ (NICE Road Junction) ಬಳಿ ಭೀಕರ ರಸ್ತೆ ಅಪಘಾತ (Road accident) ಸಂಭವಿಸಿ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ (Manager in Amazon) ಆಗಿ ಕೆಲಸ ಮಾಡುತ್ತಿದ್ದ ಸಂತೋಷ್‌ ಎಂಬುವವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸಂತೋಷ್‌ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ನೈಸ್‌ ರಸ್ತೆ ಜಂಕ್ಷನ್‌ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ (Car Rams into lorry) ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು‌ ಸಂಪೂರ್ಣ ಜಖಂ ಆಗಿದ್ದು ಸಂತೋಷ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Car accident at Chikkajala

ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಕಾರಂತೂ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಕಾರು ವಿಪರೀತ ವೇಗದಲ್ಲಿ ಇತ್ತು ಎಂದು ಹೇಳಲಾಗುತ್ತಿದೆ.

ಸಂತೋಷ್‌ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ

ಡಿಸೆಂಬರ್‌ 18ರ ಸಂಜೆ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಆರು ಕಾರುಗಳು ಜಖಂಗೊಂಡಿದ್ದವು. ಜನನಿಬಿಡ ರಸ್ತೆಯಲ್ಲಿ ಓಮ್ನಿ ಕಾರೊಂದು ಹಠಾತ್ತನೆ ಲೇನ್ ಬದಲಿಸಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.

Car accident at Chikkajala

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲ ಮೇಲ್ಸೇತುವೆ ಬಳಿ ಅವಘಡ ಸಂಭವಿಸಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಚಿಕ್ಕಜಾಲ ಸಂಚಾರ ಪೊಲೀಸರು ನಿಲ್ದಾಣಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Murder Case : ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಜಜ್ಜಿ ಯುವಕನ ಭೀಕರ ಕೊಲೆ

ಮೈಸೂರು: ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಜಜ್ಜಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ (Murder Case) ಘಟನೆ ಮೈಸೂರು ಜಿಲ್ಲೆ (Mysore News) ಹುಣಸೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ಇರುವ ಇಟ್ಟಿಗೆ ತಯಾರಿಸುವ ಫ್ಯಾಕ್ಟರಿಯಲ್ಲಿ (Cement block factory) ಸುಮಾರು 30 ವರ್ಷದ ವ್ಯಕ್ತಿಯ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: Robbery Case : ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ದರೋಡೆ ಮಾಡಿದ್ದ 8 ಮಂದಿ ಸೆರೆ

ಈತ ಯಾರು, ಈತ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದನೇ ಎಂಬುದೂ ಸೇರಿದಂತೆ ಕೊಲೆಯಾದವನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಫ್ಯಾಕ್ಟರಿಯ ಕಾರ್ಮಿಕರ ನಡುವೆ ಸಂಘರ್ಷ ಸಂಭವಿಸಿ ಕೊಲೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಂಗಳವಾರ ರಾತ್ರಿ ಕೊಲೆ ನಡೆದಿರುವ ಬಗ್ಗೆ ಗುಮಾನಿಗಳಿವೆ.

ಸ್ಥಳಕ್ಕೆ ಡಿವೈಎಸ್ಪಿ ಗೋಪಾಲಕೃಷ್ಣ, ಹುಣಸೂರು ಪಟ್ಟಣ ಠಾಣೆ ಇನ್ಸ್ ಪೆಕ್ಟರ್ ದೇವೇಂದ್ರ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕೊಲೆಯಾದ ವ್ಯಕ್ತಿಯಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಮೀಪದಲ್ಲಿರುವ ಸಿಸಿ ಕ್ಯಾಮರಾ ಪರಿಶೀಲನೆ ನಡೆದಿದ್ದು, ಹಂತಕರ ಪತ್ತೆಗೆ ಹುಣಸೂರು ಪೊಲೀಸರು ಬಲೆ ಬೀಸಿದ್ದಾರೆ.

Exit mobile version