Site icon Vistara News

Road accident | ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಕಾರು ಡಿಕ್ಕಿಯಾಗಿ ಮಹಿಳೆ ಸಾವು

MLA dadesugur

ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಕಾರು ಡಿಕ್ಕಿಯಾಗಿ (Road accident) ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ಮಂಗಳವಾರ ಮಧ್ಯಾಹ್ನ ಈ ಅಪಘಾತ ನಡೆದಿದ್ದು, ಮರಿಯಮ್ಮ‌ ನಾಯಕ (70) ಎಂಬವರು ಮೃತಪಟ್ಟಿದ್ದಾರೆ.

ಕಾರಟಗಿ ತಾಲೂಕಿನ ಚಳ್ಳೂರು ಗ್ರಾಮದ ನಿವಾಸಿಯಾಗಿರುವ ಮಹಿಳೆ ರಸ್ತೆ ದಾಟುತ್ತಿದ್ದಾಗ ಶಾಸಕರ ಕಾರು ಡಿಕ್ಕಿಯಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಇದ್ದರು ಎಂಬ ಮಾಹಿತಿ ಇದೆ. ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಇದಾಗಿದೆ.

ಇದನ್ನೂ ಓದಿ | Road accident | ಕಾಲೇಜು ಬಸ್ ಓವರ್‌ಟೇಕ್ ಮಾಡಲು ಹೋಗಿ ಹಿಂದಿನ ಚಕ್ರದಡಿಗೆ ಬಿದ್ದು ವಿದ್ಯಾರ್ಥಿ ಸಾವು

Exit mobile version