Site icon Vistara News

Road accident: ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಸೀರಿಯಸ್

Accident near Belagavi

#image_title

ಬೆಳಗಾವಿ: ಕಾರು ಮತ್ತು ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತದಲ್ಲಿ (Road accident) ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ (Kadasiddeshwara swameeji) ಗಂಭೀರ ಗಾಯಗಳಾಗಿವೆ. ಮೃತರಿಬ್ಬರೂ ಸ್ವಾಮೀಜಿಗಳ ಸೇವಕರಾಗಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿಗಳ ಕಾರು, ಕಂಟೇನರ್‌ ಮತ್ತು ಇತರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಸಹಾಯಕರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗಳೊಂದಿಗೆ ಪ್ರಾಣ ಕಳೆದುಕೊಂಡರು.

ಕೂಡಲೇ ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕರೆದೊಯ್ಯುವ ಕೆಲಸವನ್ನು ತ್ವರಿತಗೊಳಿಸಿದರು.

ಸ್ವಾಮೀಜಿಯವರ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ಸೇವಕರ ಹೆಸರು ಇನ್ನೂ ತಿಳಿದುಬಂದಿಲ್ಲ.

ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುತ್ತಿದ್ದರು

ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಆಯೋಜನೆಗೊಂಡಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ.

ಬೆಂಗಳೂರಿನಲ್ಲಿ ಲಾರಿ ಹರಿದು ವೃದ್ದೆ ಸಾವು

ಬೆಂಗಳೂರು: ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಂಗೇರಿಯ ವಿದ್ಯಾಪೀಠ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಲಕ್ಷ್ಮಮ್ಮ (70) ಎಂಬವರು ಮೃತಪಟ್ಟಿದ್ದಾರೆ.

ಮೇ 26ರಂದು ಲಕ್ಷ್ಮಮ್ಮ ಅವರು ರಸ್ತೆ ದಾಟುವಾಗ ಲಾರಿ ಡಿಕ್ಕಿ ಹೊಡೆದುದಲ್ಲದೆ, ಲಾರಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿತ್ತು. ಗಂಭೀರ ಗಾಯಗೊಂಡ ಲಕ್ಷ್ಮಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮಮ್ಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : Attempt to murder: ಪತ್ನಿಯ ಕೊಲ್ಲಲು ಕಂಟ್ರಿ ಪಿಸ್ತೂಲ್‌ ಖರೀದಿಸಿದ ಭೂಪ; ಸಂಶಯ ಪಿಶಾಚಿ ಅರೆಸ್ಟ್‌

Exit mobile version