Site icon Vistara News

Road Accident: ಹೆದ್ದಾರಿ ಕಾಮಗಾರಿ ಅವಾಂತರ; ಭಟ್ಕಳ ಬಳಿ ಬೈಕ್‌ ಸವಾರ ಸಾವು

bhatkal accident death

ಕಾರವಾರ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಎದುರಿನಿಂದ ಅಪರಿಚಿತ ಕಾರು ಡಿಕ್ಕಿಯಾದ (road accident) ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ (hit and run).

ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬಸ್ತಿ ಗ್ರಾಮದ ಬಳಿ ಸೋಮವಾರ ರಾತ್ರಿ ಈ ಘಟನೆ (uttara kannada news) ನಡೆದಿದೆ. ಶಿವು ನಾಗೇಶ ನಾಯ್ಕ(28) ಮೃತ ದುರ್ದೈವಿ. ಎಂಜಿನಿಯರ್ ಆಗಿದ್ದ ಹೊನ್ನಾವರ ತಾಲ್ಲೂಕಿನ ಮಂಕಿ ಮೂಲದ ಶಿವು ಮಂಕಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.

ಕಾಮಗಾರಿಗಾಗಿ ಬಂದ್ ಆಗಿರುವ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ತೆರಳುತ್ತಿದ್ದ ಬೈಕ್‌ ಸವಾರ ಶಿವುಗೆ ಹೆದ್ದಾರಿ ಡೈವರ್ಷನ್ ತಿಳಿಯದೇ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾಗಿ ನಿಲ್ಲಿಸದೆ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ 4 ದಿನದ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಸಾಗರ: ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 4 ದಿನದ ಗಂಡು ಮಗು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ತಾಲೂಕಿನ (Sagara News) ಕೆಳದಿ ಗ್ರಾಮದ ಅಡ್ಡೇರಿ ವಾಸಿ ಕೃಷ್ಣಮೂರ್ತಿ ಮತ್ತು ಸವಿತಾ ದಂಪತಿಗಳ ಮಗು ಮೃತಪಟ್ಟಿದೆ.

ಜುಲೈ 7ರಂದು ಆಸ್ಪತ್ರೆಗೆ ದಾಖಲಾಗಿದ್ದ ಸವಿತಾ, ಜುಲೈ 8ರಂದು ಮಗುವಿಗೆ ಜನ್ಮನೀಡಿದ್ದರು. ಡೆಲಿವರಿ ನಂತರ ತಾಯಿ ಮಗು ಆರೋಗ್ಯವಾಗಿದ್ದರು. ಮಂಗಳವಾರ ಬೆಳಗ್ಗೆ ವೈದ್ಯರು ರೌಂಡ್ಸ್‌ಗೆ ಬಂದು ಮಗುವನ್ನು ಪರೀಕ್ಷಿಸಿದಾಗ ಮಗು ಉಸಿರಾಡುತ್ತಿರಲಿಲ್ಲ ಎನ್ನಲಾಗಿದೆ. ತಕ್ಷಣ ವೈದ್ಯರು ಮಗುವನ್ನು ಉಳಿಸಿಕೊಳ್ಳುವ ಪ್ರಯತ್ನಿಸಿದರಾದರೂ ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ.

ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಪೋಷಕರು ಮತ್ತು ಸಂಬಂಧಿಕರು ಆರೋಪಿಸಿ, ಆಸ್ಪತ್ರೆ ಮುಂಭಾಗ ಮಗುವಿನ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ವೈದ್ಯಾಧಿಕಾರಿ ಡಾ.ಪರಪ್ಪ ಆಗಮಿಸಿ, ಕರ್ತವ್ಯದಲ್ಲಿದ್ದ ವೈದ್ಯರು, ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು.

ಪ್ರತಿಭಟನಾನಿರತರೊಂದಿಗೆ ಮಾತನಾಡಿದ ವೈದ್ಯಾಧಿಕಾರಿ, ಮುಂದೆ ಇಂತಹ ಘಟನೆ ನಡೆಯದಂತೆ ನಿಗಾವಹಿಸಲಾಗುವುದು. ತಕ್ಷಣ ತನಿಖೆ ನಡೆಸಿ ಮಗುವಿನ ಸಾವಿಗೆ ಕಾರಣ ಏನೆಂದು ತಿಳಿಯುವ ಯತ್ನ ಮಾಡುತ್ತೇವೆ. ಸಿಬ್ಬಂದಿಯ ಕರ್ತವ್ಯ ಲೋಪ ಸಾಬೀತಾದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು
ಎಂದು ಭರವಸೆ ನೀಡಿದ ನಂತರ ಮೃತ ಮಗುವಿನ ಪೋಷಕರು ಪ್ರತಿಭಟನೆ ಹಿಂಪಡೆದರು.

ಇದನ್ನೂ ಓದಿ: Odisha Train Tragedy: ಮೂವರು ರೈಲು ಸಿಬ್ಬಂದಿಯನ್ನು ಬಂಧಿಸಿದ ಸಿಬಿಐ! ಅಪಘಾತದ ಬಗ್ಗೆ ಮೊದ್ಲೆ ಗೊತ್ತಿತ್ತಾ?

Exit mobile version