Site icon Vistara News

Road Accident: ಚಾಲಕನ ನಿದ್ರೆಗಣ್ಣಿನಿಂದ ನಡೆದ ಭೀಕರ ಅಪಘಾತ, 3 ಮಕ್ಕಳು ಸೇರಿ ನಾಲ್ವರ ಸಾವು

challakere accident

ಚಿತ್ರದುರ್ಗ: ಚಳ್ಳಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ (Road Accident) ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಚಿತ್ರದುರ್ಗ (chitradurga news) ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಎಂಬಲ್ಲಿ ಅಪಘಾತ ಸಂಭವಿಸಿದೆ.

ರಾಯಚೂರಿನ ದೇವದುರ್ಗ ತಾಲೂಕಿನ ದಂಡಮ್ಮಹಳ್ಳಿ ನಿವಾಸಿಗಳಾದ, ಒಂದೇ ಕುಟುಂಬದ ಆರು ಮಂದಿ ಕಾರಿನಲ್ಲಿ ಬೆಂಗಳೂರಿನ ಕಡೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಾಣಿಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಅಪ್ಪಳಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನುಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.

ಮೃತಪಟ್ಟವರನ್ನು ಲಿಂಗಪ್ಪ (26), ಸಿಂಧು ಶ್ರೀ(2) ಅಯ್ಯಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಬೀರ ಗಾಯಗಳಾಗಿದ್ದು, ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಲ್ಲಮ್ಮ (30), ಮಲ್ಲಮ್ಮ (20) ನಾಗಪ್ಪ (35) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತರೆಲ್ಲ ಒಂದೇ ಕುಟುಂಬದವರು. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಭೀಕರ ಅಪಘಾತ ಆಗಿದೆ. ಚಾಲಕನ ನಿದ್ರೆ ಮಂಪರಿನಲ್ಲಿ ನಸುಕಿನ ವೇಳೆ ನಡೆದಿರುವ ಘಟನೆ ಇದಾಗಿದೆ. ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟ್ ಆ್ಯಂಡ್ ರನ್, ಬೈಕ್‌ ಸವಾರ ಸಾವು

ಧಾರವಾಡ: ಧಾರವಾಡದಲ್ಲಿ (Dharwad news) ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ, ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ- ತಲವಾಯಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ತಲವಾಯಿ ಗ್ರಾಮದ ಬಸವರಾಜ್ ಜಟ್ಟನ್ನವರ(32) ಮೃತ ಬೈಕ್ ಸವಾರ. ಹೆಬ್ಬಳ್ಳಿಯಿಂದ ಸಂತೆ ಮುಗಿಸಿ ಊರಿಗೆ ತೆರಳುವಾಗ ಅಪಘಾತ ನಡೆದಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mundaragi Accident: ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ; ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Exit mobile version