Site icon Vistara News

Road accident : ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಬೊಲೆರೊ, ಒಂದೇ ಕುಟುಂಬದ ಮೂವರ ದುರ್ಮರಣ

Ilakal accident

#image_title

ಬಾಗಲಕೋಟೆ: ಬೊಲೆರೊ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಬಾಗಲಕೋಟೆ ಜಿಲ್ಲೆ ಇಳಕಲ್‌ ಸಮೀಪದ ಎಂ.ಕೆ.ಡಾಬಾ ಹತ್ತಿರ ದುರಂತ ಸಂಭವಿಸಿದ್ದು, ತಾವರಗೇರಿಯ ಶಾಮಿದಸಾಬ್ ಕಿಡ್ದೂರ ನಾಯಕ್, ಮೌಲಾಸಾಬ್ ಕಿಡ್ದೂರ್ ನಾಯಕ್(70) ಇಮಾಂಬಿ ಮೌಲಾಸಾಬ್ ಕಿಡ್ದೂರ್ ನಾಯಕ್(67) ಸಾವು ಮೃತರು.

ತಾವರಗೇರಿಯವರಾದ ಏಳು ಮಂದಿ ವಿಜಯಪುರದ ಪ್ರಾರ್ಥನಾ ಮಂದಿರಕ್ಕೆ ಹೋಗಿದ್ದರು. ಅಲ್ಲಿ ಪ್ರಾರ್ಥನೆ ಮಾಡಿ ಮರಳುತ್ತಿದ್ದ ವೇಳೆ ತಡರಾತ್ರಿ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಒಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದರೆ, ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮತ್ತಿಬ್ಬರು ಸಾವು ಕಂಡರು. ಇಳಕಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ತುಮಕೂರಿನಲ್ಲಿ ಐವರು ಮೃತಪಟ್ಟಿದ್ದರು

ರಾಜ್ಯದಲ್ಲಿ ಅಪಘಾತಗಳ ಸರಮಾಲೆಯೇ ನಡೆಯುತ್ತಿದ್ದು, ತುಮಕೂರಿನ ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂರು ದಿನದ ಹಿಂದೆ ಇನ್ನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಒಂದು ಮಗು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು.

ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಬೆಂಗಳೂರು ಕಡೆಯಿಂದ ಶಿರಾ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಸ್ವಿಫ್ಟ್‌ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್‌ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಆರು ಮಂದಿ ಮೃತ್ಯು

ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಸ್ವಿಫ್ಟ್‌ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರೆ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ : Road Accident in Bengaluru: ಅಪಘಾತಗಳ ನಗರಿ ಎಂಬ ಕುಖ್ಯಾತಿಗೆ ರಾಜಧಾನಿ ಗುರಿ; 3 ತಿಂಗಳಲ್ಲಿ 200ಕ್ಕೂ ಹೆಚ್ಚು ಮಂದಿ ಬಲಿ

Exit mobile version