Site icon Vistara News

Road accident : ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Car accident

#image_title

ವಿಜಯಪುರ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ (Sadhvi Niranjana jyothi) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಕೇಂದ್ರ‌‌ ಸಚಿವೆ ಮತ್ತು ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಅವರು ವಿಜಯಪುರ ನಗರದಲ್ಲಿ ಗುರುವಾರ ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ವಿಜಯಪುರದಲ್ಲಿ ನಡೆದ ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ ಅಪಘಾರ ಸಂಭವಿಸಿದೆ.

ಅಪಘಾತದ ಪರಿಣಾಮ‌ವಾಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ವಾಹನ ಸಂಚಾರ ಸುಗಮಗೊಳಿಸಲು ಮುಂದಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಿಲ್ಲಾಸ್ಪತ್ರೆಗೆ ಆಗಮಿಸಿದ ಸಾಧ್ವಿ ನಿರಂಜನಾ ಜ್ಯೋತಿ ಅವರ ತಪಾಸಣೆ ನಡೆಸಲಾಗಿದೆ. ಅವರ ತಲೆ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ. ಅವರ ಬಲಗಾಲು ಹಾಗೂ ತಲೆ ಸಿಟಿ ಸ್ಕ್ಯಾನಿಂಗ್ ಮಾಡಲಾಗಿದ್ದು, ಯಾವುದೇ ಗಂಭೀರ ಗಾಯವಿಲ್ಲ ಎಂದು ತಿಳಿದುಬಂದಿದೆ. ಸಾಧ್ವಿ ಡ್ರೈವರ್ ತಲೆಗೆ ಗಾಯವಾಗಿದೆ. ಅವರ ತಲೆಯ ಸ್ಕ್ಯಾನಿಂಗ್‌ ಕೂಡಾ ನಡೆಸಲಾಗಿದೆ.

ಸಚಿವ ಗೋವಿಂದ ಕಾರಜೋಳ ಪುತ್ರ ಉಮೇಶ ಕಾರಜೋಳ ಅವರು ಸಚಿವೆ ಜತೆಗಿದ್ದಾರೆ.

ಪುತ್ತೂರು ನಗರಸಭಾ ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು: ಪುತ್ತೂರು ನಗರಸಭಾ ಸದಸ್ಯರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡ ನಗರಸಭಾ ಸದಸ್ಯರಾಗಿದ್ದಾರೆ. ವಾರ್ಡ್ ನಂಬರ್ 1ರ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪುತ್ತೂರಿನ ಉರಮಾಲ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೊಬೈಲ್‌ ಕಾಲ್‌ ಲಿಸ್ಟ್‌ ಸೇರಿದಂತೆ ಮನೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Karnataka Elections : ಅಪಾಯದಲ್ಲಿರುವುದು ಸಂವಿಧಾನವಲ್ಲ, ಕಾಂಗ್ರೆಸ್‌ ಎಂದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ

Exit mobile version