Site icon Vistara News

Road Accident | ಬೈಕ್‌ಗೆ ಕಾರು ಡಿಕ್ಕಿಯಾಗಿ ಒಬ್ಬನ ಸಾವು, ನಾಲ್ವರಿಗೆ ಗಾಯ

Road Accident

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ಬೈಕ್‌ಗೆ ಕಾರು ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ (Road Accident) ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ‌ ಚನ್ನೂರ ಗ್ರಾಮದ ಬಿ.ಎಸ್.ಪಾಟೀಲ್ (59) ಮೃತ ವ್ಯಕ್ತಿ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಬೈಕ್‌ಗೆ ಗುದ್ದಿ, ನಂತರ ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇನ್ನುಳಿದ ಮೂವರು ಹಾಗೂ ಬೈಕ್‌ ಸವಾರ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | suicide case | ರಸ್ತೆ ಒತ್ತುವರಿ ತೆರವು ವೇಳೆ ವಿಷ ಕುಡಿದ ಅಂಗಡಿ ಮಾಲೀಕ

Exit mobile version