Site icon Vistara News

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

Road Accident

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ. ವೇಗವಾಗಿ ಬಂದು ಬೈಕ್ ಸವಾರರ ಮೇಲೆ ಸ್ಯಾಂಟ್ರೋ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಹಾಪುರ ನಗರದ ಸೈಬರ್ ಚೌಕದಲ್ಲಿ ಘಟನೆ ನಡೆದಿದ್ದು, ಅತಿ ವೇಗವಾಗಿ ಬಂದ ಕಾರು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗಿ ಕಾರು ಗೋಡೆಗೆ ಗುದ್ದಿದ್ದರಿಂದ ಚಾಲಕ ಮೃತಪಟ್ಟಿದ್ದಾನೆ. ಭಯಾನಕ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಹಾರಿ ಹೋಗಿ ಬಿದ್ದು ಪ್ರಾಣ ಬಿಟ್ಟಿದ್ದಾರೆ.

ಇನ್ನುಳಿದ ಮೂವರು ಗಾಯಾಗಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಬ್ರೆಕ್ ಫೇಲ್ ಆದ ಹಿನ್ನೆಲೆಯಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲ್ಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನ ಆರೋಪ ಹೊರಿಸಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ

ಮೈಸೂರು: ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ ಎಂದು ಆರೋಪಿಸಿ, ವಿಡಿಯೊ ಮಾಡಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ | Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

ಮಹದೇವ ನಗರದ ನಿವಾಸಿ ನಂಜೇಶ್ ಮೃತರು. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನಂಜೇಶ್, ಫ್ಯಾಕ್ಟರಿ ಆವರಣದಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ಮಾಡದ ತಪ್ಪಿಗೆ ನನ್ನ ಹೊಣೆ ಮಾಡಿದ್ದಾರೆ. ಹೆಂಡತಿ, ಮಕ್ಕಳಿಗೆ ಕ್ಷಮೆಯಾಚಿಸುವೆ. ಗೋವಿಂದ, ರಾಜು ಹಾಗೂ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಸಾವಿಗೂ ಮುನ್ನ ವಿಡಿಯೊದಲ್ಲಿ ಆರೋಪಿಸಿದ್ದಾರೆ.

Exit mobile version